ಗೋದಾಮಿನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಘಟನೆ ನಗರದ ಕುಂಬಾರಪೇಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಜಯರಾಮ ಎಂಬ ವ್ಯಕ್ತಿಗೆ ಸೇರಿದ ಗೋದಾಮು ಎಂದು ತಿಳಿದುಬಂದಿದೆ. ಗೋದಾಮಿನಲ್ಲಿದ್ದ ಕಿಟಿಕಿ, ಬಾಗಿಲುಗಳು, ಹಳೇ ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಲಾಗಿದೆ.
ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.