ಗೋಮಾಳ ಕಬಳಿಕೆ ಆರೋಪ: ಗೋಮಾಳ ಜಾಗವನ್ನು ಸರ್ಕಾರ ವಶಕ್ಕೆ ಪಡೆಯಬೇಕು: ಹೈನುಗಾರಿಕೆ ಉಳಿಸುವಲ್ಲಿ  ಮುಂದಾಗಬೇಕು: ಸ್ಥಳೀಯ ರೈತರ ಆಗ್ರಹ

ದೊಡ್ಡಬಳ್ಳಾಪುರ: ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರಾರು ಎಕರೆ ಸರ್ಕಾರಿ ಗೋಮಾಳವಿದೆ, ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಜಾನುವಾರುಗಳ ಮೇವಿನ ತಾಣ ಇದಾಗಿದೆ, ಹೈನುಗಾರಿಕೆಗೆ ಬೆನ್ನೆಲುಬಾಗಿರುವ ಸರ್ಕಾರಿ ಗೋಮಾಳ ಭೂಗಳ್ಳರ ಪಾಲಾಗುತ್ತಿದೆ ಎಂದು ರೈತರು ಆತಂಕವನ್ನ ವ್ಯಕ್ತಪಡಿಸಿದ್ದಾರೆ.

ಭಕ್ತರಹಳ್ಳಿಯ ಸರ್ವೆ ನಂಬರ್ 27ರ ಸರ್ಕಾರಿ ಗೋಮಾಳದಲ್ಲಿ ಸುಮಾರು 100 ಎಕರೆ ಜಾಗವಿದೆ. ಹಲವು ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದ ರೈತರಿಗೆ ಜಮೀನು ಮಂಜೂರಾಗಿದೆ, ರೈತರಿಗೆ ಪ್ರತ್ಯೇಕವಾಗಿ ಪೋಡಿಯಾಗದ ಹಿನ್ನೆಲೆ ಜಂಟಿ ಖಾತೆ ಇದೆ. ಇದರಲ್ಲಿನ ಬಲಾಢ್ಯನೊಬ್ಬ ಜಮೀನಿಗೆ ಕಾಂಪೌಂಡ್ ನಿರ್ಮಾಣಕ್ಕೆ ಮುಂದಾಗಿದ್ದಾನೆ, ಸರ್ಕಾರಿ ಗೋಮಾಳವನ್ನು ಕಬಳಿಸಿ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆ ಅಧಿಕಾರಿಗಳ ಬೆಂಬಲವಿದೆ. ರೈತರ ಜಮೀನಿನಲ್ಲೂ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದೆ. ಇದನ್ನ ತಡೆಯಲು ಮುಂದಾದ ರೈತರ ವಿರುದ್ಧ ಪ್ರಕರಣವನ್ನ ದಾಖಲು ಮಾಡಲಾಗುತ್ತಿದೆ ಎಂದು ರೈತರು ಗಂಭೀರವಾಗಿ ಆರೋಪಿಸಿ ತಮ್ಮ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲ್ಲೇಗೌಡನಹಳ್ಳಿಯ ರೈತರಾದ ನಂಜಮ್ಮ ಮಾತನಾಡಿ, ಜಮೀನಿಗೆ ಸಂಬಂಧಪಟ್ಟ ಪಹಣಿ ಮತ್ತು ಮ್ಯೂಟೇಷನ್ ಸೇರಿದಂತೆ ಎಲ್ಲಾ ದಾಖಲೆಗಳು ನನ್ನ ಬಳಿ ಇದೆ, ಆದರೂ  ನನ್ನ ಜಮೀನಿಗೆ ಬಲವಂತದಿಂದ ಬೇಲಿ ಹಾಕಲು ಮುಂದಾಗಿದ್ದಾರೆ. ತಡೆಯಲು ಹೋದರೆ ನಮ್ಮ ವಿರುದ್ಧ  ದಬ್ಬಾಳಿಕೆ, ದೌರ್ಜನ್ಯ ನಡೆಸುತ್ತಿದ್ದಾರೆ, ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ನೋವು, ಅಳಲು ತೋಡಿಕೊಂಡರು.

ಶಿರಸ್ತೆದಾರನಪಾಳ್ಯ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ರಾಜಣ್ಣ ಮಾತನಾಡಿ, ದಾಖಲೆಗಳ ಪ್ರಕಾರ ಮತ್ತು ಸರ್ವೆ ನಂಬರ್ ನಲ್ಲಿ ಎಷ್ಟು ಜಮೀನು ಇದೆಯೋ ಆ ಜಾಗಕ್ಕೆ ಕಾಂಪೌಂಡ್ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಸಾವಿರಾರು ಜಾನುವಾರುಗಳಿಗೆ ಮೇವಿನ ತಾಣವಾಗಿರುವ ಗೋಮಾಳವನ್ನ ಸೇರಿಸಿಕೊಂಡು ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದೆ, ಜೊತೆಗೆ ಜಾನುವಾರುಗಳಿಗೆ ನೀರಿನ ಮೂಲವಾಗಿದ್ದ ಗೋಕುಂಟೆಗಳನ್ನ ನೆಲಸಮ ಮಾಡಿ ಒತ್ತುವರಿ ಮಾಡಲಾಗುತ್ತಿದೆ.

ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೇಗೌಡನಹಳ್ಳಿ, ಶಿರಸ್ತೇದಾರನಪಾಳ್ಯ, ಅವಲಯ್ಯನಪಾಳ್ಯ, ಲಕ್ಕೇನಹಳ್ಳಿ, ಸಿಂಗೇನಹಳ್ಳಿ, ನರಸಾಪುರ ಸೇರಿದಂತೆ ಹತ್ತಾರು ಗ್ರಾಮಗಳ ಜಾನುವಾರುಗಳಿಗೆ ಈ ಗೋಮಾಳವೇ ಆಧಾರ, ಹೈನುಗಾರಿಕೆ ನಂಬಿ ಲಕೊಂಡು ರೈತರು ಜೀವನ ನಡೆಸುತ್ತಿದ್ದಾರೆ, ಕುರಿ-ಮೇಕೆ ಸಾಕಾಣಿಕೆ ಮಾಡಿ ಸ್ವಾವಲಂಬಿ ಜೀವನ ಮಾಡುತ್ತಿದ್ದಾರೆ, ರೈತರು ಮತ್ತು ಜಾನುವಾರುಗಳ ಜೀವನಾಧರವಾಗಿರುವ ಗೋಮಾಳ ಬಲಾಢ್ಯರ ಪಾಲುಗುತ್ತಿದೆ, ಇದರಿಂದ ಮುಂದಿನ ದಿನಗಳಲ್ಲಿ ರೈತರು ಜೀವನ ಮಾಡುವುದು ಕಷ್ಟವಾಗಲಿದೆ, ನಮ್ಮ ಮನವಿ ಇಷ್ಟೇ ಬಲಾಢ್ಯರಿಗೆ ಸೇರಿದ ಜಾಗ ಮತ್ತು ರೈತರಿಗೆ ಮಂಜೂರು ಆಗಿರುವ ಜಾಗವನ್ನ ಹೊರತುಪಡಿಸಿ ಇನ್ನುಳಿದ ಸರ್ಕಾರಿ ಗೋಮಾಳವನ್ನ ಸರ್ಕಾರ ವಶಕ್ಕೆ ಪಡೆಯ ಬೇಕೆಂದು ಆಗ್ರಹಿಸಿದರು.

ಸ್ಥಳೀಯ ರೈತ ಮಾರುತಿ ಮಾತನಾಡಿ, ಯಾವುದೋ ಜಮೀನಿಗೆ ಯಾವುದೋ ಸರ್ವೇ ನಂಬರ್ ತೋರಿಸಿ ನಮ್ಮದೇ ಜಾಗ ಎನ್ನುತ್ತಾರೆ, ಪ್ರಶ್ನೆ ಮಾಡಲು ಹೋದವರ ಮೇಲೆ ಕೇಸ್ ಹಾಕಿಸುತ್ತಾರೆ. ಬಡ ರೈತರ ಪರ ಇರಬೇಕಾದ ಅಧಿಕಾರಿಗಳು  ಲಬಲಾಢ್ಯರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನೂರಾರು ಎಕರೆ ಇದ್ದ ಸರ್ಕಾರಿ ಗೋಮಾಳ ಮತ್ತು ಗೋಕುಂಟೆಗಳು ನೋಡ ನೋಡುತ್ತಿದಂತೆ ಕಣ್ಮರೆಯಾಗುತ್ತಿವೆ, ಒತ್ತುವರಿ ಮಾಡಿಕೊಂಡ ಗೋಮಾಳಕ್ಕೆ ಸುಳ್ಳು ದಾಖಲೆಗಳನ್ನ ಸೃಷ್ಠಿಸಿ ಕೋಟಿ ಕೋಟಿ ಬೆಲೆ ಮಾರಾಟ ಮಾಡುತ್ತಾರೆ. ನೂರಾರು ವರ್ಷಗಳಿಂದ ಇಲ್ಲೇ ಜೀವನ ಮಾಡುತ್ತಿರುವ ರೈತರಿಗೆ ಒಂದಡಿ ಜಾಗ ಇಲ್ಲದಂತೆ ಮಾಡುತ್ತಾರೆ, ಜಾನುವಾರುಗಳು ಮೇಯುವ ಜಾಗವನ್ನ ರೆಸಾರ್ಟ್ ಗಳನ್ನಾಗಿ ಮಾಡುತ್ತಾರೆ. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಗೋಮಾಳ ಜಾಗವನ್ನು ಸರ್ಕಾರದ ವಶಕ್ಕೆ ಪಡೆಯಬೇಕು, ಹೈನುಗಾರಿಕೆ ಉಳಿಸುವಲ್ಲಿ  ಮುಂದಾಗಬೇಕು ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ರೈತರಾದ  ರವಿ,ಆನಂದ್, ನಾಗರಾಜು, ಮಾರುತಿ,  ರಾಜಣ್ಣ, ಜಯಮ್ಮ ಸೇರಿದಂತೆ ಹಲವರು ಹಾಜರಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

5 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

7 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

9 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

9 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

11 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

16 hours ago