ತಾಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದಲ್ಲಿ ಗೋಶಾಲೆ ಸ್ಥಾಪನೆ ಬೇಡ ಹಾಗೂ ಗೋಶಾಲೆ ನಿರ್ಮಾಣಕ್ಕೆಂದು ಮಂಜೂರು ಮಾಡಿರುವ ಗೋಮಾಳದ ಜಾಗವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಸರ್ಕಾರದ ಆದೇಶದ ವಿರುದ್ಧ ಹೋರಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.
ಚುನಾವಣಾ ನೀತಿ ಸಂಹಿತೆ ಆರಂಭಕ್ಕೂ ಮುನ್ನಾ ಸಮರ್ಥನಂ ಸಂಸ್ಥೆ ಹೆಸರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದ ಸರ್ವೇ ನಂಬರ್ 37 ರಲ್ಲಿ 25 ಎಕರೆ ಸರ್ಕಾರಿ ಗೋಮಾಳ ಜಮೀನನ್ನು ಗೋಶಾಲೆ ಪ್ರಾರಂಭಿಸಲು ಮಂಜೂರು ಮಾಡಿರುವ ಆದೇಶವನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತಕವಾಗಿ ಪ್ರಕಟಿತಗೊಂಡಿರುವ ವಿಷಯ ತಿಳಿದ ಗ್ರಾಮಸ್ಥರು ಭಾನುವಾರ ಮುಂಜಾನೆ ಸಭೆ ಸೇರಿ ಚರ್ಚಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ಮಾತನಾಡಿ, ಮುಕ್ಕಡಿಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಗಮನಕ್ಕೆ ಬಾರದೆ, ಯಾವುದೇ ನೋಟಿಸ್ ನೀಡದೆ ಏಕಾಏಕಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಿದನ್ನು ನಾವು ಖಂಡಿಸಬೇಕು, ತಲಾತಲಾಂತರದಿಂದ ನಮ್ಮ ಗ್ರಾಮದ ಬಡ ರೈತರು ತಮ್ಮ ಕುರಿ,ಮೇಕೆ ಹಸುಗಳನ್ನು ಸರ್ವೇ ನಂ.37 ಸೇರಿದಂತೆ ಸುತ್ತ ಮುತ್ತ ಮೇವಿಗಾಗಿ ಉಳುಸಿಕೊಂಡಿರುವ ಗೋಮಾಳವನ್ನು ಬೇಕಾಬಿಟ್ಟಿಯಾಗಿ ಖಾಸಗಿ ಸಂಸ್ಥೆಗೆ ಮಂಜೂರು ಮಾಡಿರುವುದನ್ನು ಒಪ್ಪಬಾರದು ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಈ ಆದೇಶದ ವಿರುದ್ಧ ಹೋರಾಡಬೇಕು ಎಂದರು.
ತೂಬಗೆರೆ ಹಿತರಕ್ಷಣ ಸಮಿತಿ ಸದಸ್ಯ ಉದಯ ಆರಾಧ್ಯ ಮಾತನಾಡಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೂ ನಮ್ಮ ತೂಬಗೆರೆ ಹೋಬಳಿಗೂ ಯಾವುದೇ ಸಂಬಂಧವಿಲ್ಲ, ಗೋಮಾಳ ರಕ್ಷಣೆ ಹೋರಾಟಕ್ಕೆ ನಮ್ಮ ಬೆಂಬಲ ವಿರುತ್ತದೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟಕ್ಕೆ ತಾಲೂಕಿನ ಎಲ್ಲಾ ಸಂಘಟನೆಗಳು ರೈತ ಸಂಘದ ಸಹಾಯ ಪಡೆದು ಸರ್ಕಾರದ ಗಮನ ಸೆಳೆದು ಈ ಆದೇಶವನ್ನು ಹಿಂಪಡೆಯುವಂತೆ ಮಾಡಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೆಂಕಟೇಶ್, ಗ್ರಾಮದ ಮುಖಂಡರಾದ ಶ್ರೀನಿವಾಸ್ ಆಚಾರ್ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ನವಕರ್ನಾಟಕ ಕರ್ನಾಟಕ ಯುವಶಕ್ತಿ ವೇದಿಕೆ ಅಧ್ಯಕ್ಷ ಅಂಬರೀಶ್ ಗ್ರಾಮಸ್ಥರು ಪಾಲ್ಗೊಂಡಿದ್ದರು.
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…