ಗೋಮಾಳ ರಕ್ಷಣೆಗಾಗಿ ಹೋರಾಟಕ್ಕೆ ಸಜ್ಜಾದ ಮುಕ್ಕಡಿಘಟ್ಟ ಗ್ರಾಮಸ್ಥರು

ತಾಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದಲ್ಲಿ ಗೋಶಾಲೆ ಸ್ಥಾಪನೆ ಬೇಡ ಹಾಗೂ ಗೋಶಾಲೆ ನಿರ್ಮಾಣಕ್ಕೆಂದು ಮಂಜೂರು ಮಾಡಿರುವ ಗೋಮಾಳದ ಜಾಗವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಸರ್ಕಾರದ ಆದೇಶದ ವಿರುದ್ಧ ಹೋರಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

ಚುನಾವಣಾ ನೀತಿ ಸಂಹಿತೆ ಆರಂಭಕ್ಕೂ ಮುನ್ನಾ ಸಮರ್ಥನಂ ಸಂಸ್ಥೆ ಹೆಸರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದ ಸರ್ವೇ ನಂಬರ್ 37 ರಲ್ಲಿ 25 ಎಕರೆ ಸರ್ಕಾರಿ ಗೋಮಾಳ ಜಮೀನನ್ನು ಗೋಶಾಲೆ ಪ್ರಾರಂಭಿಸಲು ಮಂಜೂರು ಮಾಡಿರುವ ಆದೇಶವನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತಕವಾಗಿ ಪ್ರಕಟಿತಗೊಂಡಿರುವ ವಿಷಯ ತಿಳಿದ ಗ್ರಾಮಸ್ಥರು ಭಾನುವಾರ ಮುಂಜಾನೆ ಸಭೆ ಸೇರಿ ಚರ್ಚಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ಮಾತನಾಡಿ, ಮುಕ್ಕಡಿಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಗಮನಕ್ಕೆ ಬಾರದೆ, ಯಾವುದೇ ನೋಟಿಸ್ ನೀಡದೆ ಏಕಾಏಕಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಿದನ್ನು ನಾವು ಖಂಡಿಸಬೇಕು, ತಲಾತಲಾಂತರದಿಂದ ನಮ್ಮ ಗ್ರಾಮದ ಬಡ ರೈತರು ತಮ್ಮ ಕುರಿ,ಮೇಕೆ ಹಸುಗಳನ್ನು ಸರ್ವೇ ನಂ.37 ಸೇರಿದಂತೆ‌ ಸುತ್ತ ಮುತ್ತ ಮೇವಿಗಾಗಿ ಉಳುಸಿಕೊಂಡಿರುವ ಗೋಮಾಳವನ್ನು ಬೇಕಾಬಿಟ್ಟಿಯಾಗಿ ಖಾಸಗಿ ಸಂಸ್ಥೆಗೆ ಮಂಜೂರು ಮಾಡಿರುವುದನ್ನು ಒಪ್ಪಬಾರದು ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಈ ಆದೇಶದ ವಿರುದ್ಧ ಹೋರಾಡಬೇಕು ಎಂದರು.

ದಲಿತ ಸಂಘಟನೆಯ ಮುಖಂಡ ನಾಗರಾಜ್ ಮಾತನಾಡಿ ಈಗಾಗಲೇ ಇದೇ ಸರ್ವೆ ನಂಬರ್ ನಲ್ಲಿ ನಮ್ಮ ಗ್ರಾಮದ ಭೂರಹಿತ ರೈತರು ನಮೂನೆ 57 ರ ಅಡಿಯಲ್ಲಿ ಭೂ ಮಂಜೂರಾತಿಗೋಸ್ಕರ ಅರ್ಜಿ ಸಲ್ಲಿಸಿದ್ದಾರೆ ಹಾಗೂ ಬಹಳ ವರ್ಷಗಳಿಂದ ಸ್ಮಶಾನ ಜಾಗದ ಮಂಜೂರಾತಿಗಾಗಿ ಮನವಿ ಸಲ್ಲಿಸಿದ್ದೇವೆ. ಈ ಬೇಡಿಕೆಗಳನ್ನು ಪರಿಗಣಿಸದ ಸರ್ಕಾರ, ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಲು ಸರ್ಕಾರವು ಎಷ್ಟೊಂದು ತರಾತುರಿ ವಹಿಸಿದೆ ಎಂಬುದು ಗೋಚರವಾಗುತ್ತದೆ ಎಂದರು.

ತೂಬಗೆರೆ ಹಿತರಕ್ಷಣ ಸಮಿತಿ ಸದಸ್ಯ ಉದಯ ಆರಾಧ್ಯ ಮಾತನಾಡಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೂ ನಮ್ಮ ತೂಬಗೆರೆ ಹೋಬಳಿಗೂ ಯಾವುದೇ ಸಂಬಂಧವಿಲ್ಲ, ಗೋಮಾಳ ರಕ್ಷಣೆ ಹೋರಾಟಕ್ಕೆ ನಮ್ಮ ಬೆಂಬಲ ವಿರುತ್ತದೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟಕ್ಕೆ ತಾಲೂಕಿನ ಎಲ್ಲಾ ಸಂಘಟನೆಗಳು ರೈತ ಸಂಘದ ಸಹಾಯ ಪಡೆದು ಸರ್ಕಾರದ ಗಮನ ಸೆಳೆದು ಈ ಆದೇಶವನ್ನು ಹಿಂಪಡೆಯುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೆಂಕಟೇಶ್, ಗ್ರಾಮದ ಮುಖಂಡರಾದ ಶ್ರೀನಿವಾಸ್ ಆಚಾರ್ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ನವಕರ್ನಾಟಕ ಕರ್ನಾಟಕ ಯುವಶಕ್ತಿ ವೇದಿಕೆ ಅಧ್ಯಕ್ಷ ಅಂಬರೀಶ್ ಗ್ರಾಮಸ್ಥರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

12 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

17 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

21 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago