ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸ್ವಯಂ ಸೇವಾ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಪೊಲೀಸ್ ಉಪಾಧೀಕ್ಷಕರ ಕಚೇರಿ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಸಹಾಯವಾಣಿ-1090 ಕೇಂದ್ರವನ್ನು ಪ್ರಾರಂಭಿಸಲು ಗೌರವಧನದ ಆಧಾರದ ಮೇಲೆ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲು ಸಮಾಜ ಸೇವಕರ ಒಂದು ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ.
ಸಮಾಜ ಸೇವಕರ(ಕೌನ್ಸಿಲರ್) ಒಂದು ಹುದ್ದೆಗೆ, ಎಂ.ಎಸ್.ಡಬ್ಲ್ಯೂ ವಿದ್ಯಾರ್ಹತೆ ಹೊಂದಿರುವ, 21 ರಿಂದ 40 ವರ್ಷ ವಯೋಮಿತಿಯುಳ್ಳ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮಾಸಿಕ ಗೌರವಧನ ರೂ.10000/- ಗಳನ್ನು ನೀಡಲಾಗುವುದು.
ಅರ್ಜಿಗಳನ್ನು 2023ರ ಜೂನ್ 09 ರ ಸಂಜೆ 5:00 ಗಂಟೆಯೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಚೇರಿ, ನಂ.3 ನೆಲಮಹಡಿ, ಜಿಲ್ಲಾಡಳಿತ ಭವನ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಚೇರಿಗೆ ಸಲ್ಲಿಸಬಹುದು.
ಷರತ್ತುಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29787441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…