Categories: ಕೋಲಾರ

ಗೌರವ ಧನ ಹೆಚ್ಚಳ: ಖಾಯಂ ನೌಕರಿಗಾಗಿ ಅಂಗನವಾಡಿ ನೌಕರರ ಆಹೋರಾತ್ರಿ ಧರಣಿ

ಕೋಲಾರ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಕಾಯಂ ಮಾಡಬೇಕು. ಗ್ರ್ಯಾಚ್ಯುಟಿ ಹಣ ಬಿಡುಗಡೆ, ಗೌರವಧನ 15 ಸಾವಿರಕ್ಕೆ ಹೆಚ್ಚಳ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಂಗಳವಾರದಿಂದ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಂದೆ ಅಂಗನವಾಡಿ ನೌಕರರು ಅಹೋರಾತ್ರಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಎನ್ ಅಂಜಲಮ್ಮ ಮಾತನಾಡಿ, ಅಂಗನವಾಡಿ ನೌಕರರು ನಿವೃತ್ತಿಯಾದವರಿಗೆ ಮಾಸಿಕ 10 ಸಾವಿರ ಪಿಂಚಣಿ ನೀಡಬೇಕು. ಎಲ್ಲ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಬೇಕು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರತ್ಯೇಕ ಇಲಾಖೆ ಆಗಬೇಕು. ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ಮಾಡಬೇಕು ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ‌ಜಿಲ್ಲಾ ಕಾರ್ಯದರ್ಶಿ ಕಲ್ಪನಾ ಮಾತನಾಡಿ, ನೌಕರರಿಗೆ ಕೂಡಲೇ ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಬೇಕು ಜೊತೆಗೆ ಎಲ್ಲಾ ನೌಕರರಿಗೆ ಅನ್ವಯಿಸಬೇಕು 2018 ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲವಾದ್ದರಿಂದ ಕೇಂದ್ರ ಸರ್ಕಾರ ಗೌರವಧನವನ್ನು 26 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. 2023 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ 15ಸಾವಿರ ಗೌರವಧನ ಹೆಚ್ಚಿಸಬೇಕು. ನಿವೃತ್ತಿಯಾದವರಿಗೆ ಇಡಿಗಂಟು ಅಥವಾ ಎನ್.ಪಿ.ಎಸ್. ಹಣವನ್ನು 10 ಸಾವಿರ ಮಾಸಿಕ ಪಿಂಚಣಿಯನ್ನಾಗಿ ನೀಡಬೇಕು. ಅಂಗನವಾಡಿಗಳಲ್ಲೇ ಎಲ್ ಕೆ.ಜಿ. ಹಾಗು ಯು.ಕೆ.ಜಿ ತರಗತಿ ಆರಂಭಿಸಬೇಕು. ಐ.ಸಿ.ಡಿ.ಎಸ್.ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಬೇಕು. ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಗಾಂಧಿನಗರ ಮಂಜುಳ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಟಿಕ ಆಹಾರಕ್ಕೆ ಜಿ.ಎಸ್.ಟಿ. ಹಾಕಬಾರದು ಘಟಕ ವೆಚ್ಚ ಹೆಚ್ಚಳಮಾಡಿ ಹಿಂದಿನಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೆನು ಅಂತಿಮಗೊಳ್ಳುವ ವ್ಯವಸ್ಥೆ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಖಾಲಿ ಹುದ್ದೆಗಳಿಗೆ ಮೂರು ತಿಂಗಳೊಳಗಾಗಿ ನೇಮಕಾತಿಯಾಗಬೇಕು ಇಲ್ಲದಿದಲ್ಲಿ ಅಧಿಕಾವಧಿ ವೇತನ (ಓವರ್ ಟೈಮ್) ಕೊಡಬೇಕು ಸಹಾಯಕಿ ಇಲ್ಲದ ಅಂಗನವಾಡಿ ಕೇಂದ್ರಗಳಲ್ಲಿ ಟೇಕ್ ಹೋಮ್ ಕೊಡಬೇಕು ಸಹಾಯಕಿಯನ್ನು ನೇಮಕಮಾಡಿಕೊಳ್ಳುವ ಅಧಿಕಾರ ಕಾರ್ಯಕರ್ತೆಗೆ ಕೊಡಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸು ವತನಕ ಸಹಾಯಕಿಯನ್ನು ಕೊಡಬೇಕು ಮತ್ತು ಪೂರ್ಣ ಕಾರ್ಯಕರ್ತೆಗೆ ಕೊಡುವಷ್ಟು ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ, ಕಾರ್ಮಿಕ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಎಂ.ವಿಜಯಕೃಷ್ಣ, ಮಾತನಾಡಿದರು.

ನೇತೃತ್ವವನ್ನು ಸಂಘಟನೆಯ ಜಿಲ್ಲಾ ಖಜಾಂಚಿ ಸುಜಾತ, ತಾಲೂಕು ಖಜಾಂಚಿ ಲಕ್ಷ್ಮೀದೇವಿ, ಮುಖಂಡರಾದ ಮಮತ, ಪುಷ್ಪಾವತಿ, ವಸಂತ, ಇಂದ್ರಾಣಿ, ಶಶಿಕಲಾ, ಅಮುದಾ, ರತ್ನಮ್ಮ ಸೇರಿದಂತೆ ನೌಕರರು ವಹಿಸಿದ್ದರು

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

3 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

5 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

6 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

20 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 day ago