ಗಣೇಶ ಹಬ್ಬ ಭಾರತದಲ್ಲಿ ಒಂದು ಪ್ರಮುಖವಾದಂತಹ ಹಬ್ಬ. ಈ ಬಾರಿಯ ಗೌರಿ-ಗಣೇಶ ಹಬ್ಬಕ್ಕೆ ಎರಡೇ ತಿಂಗಳು ಬಾಕಿ ಇದ್ದು, ಸದ್ದಿಲ್ಲದೇ ವಿವಿಧ ಆಕಾರಗಳ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಭರ್ಜರಿಯಾಗಿ ನಡೆಯುತ್ತಿದೆ.
ಗಣೇಶ ಮೂರ್ತಿ ತಯಾರಕರು ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗಣಪತಿ-ಗೌರಿ ಮೂರ್ತಿ ಗಳನ್ನು ತಯಾರಿಸಲು ಮುಂದಾಗಿದ್ದಾರೆ ಎಂದು ಪರಿಸರ ಪ್ರೇಮಿಗಳು ಆರೋಪಿಸಿದ್ದಾರೆ.
ಪಿಒಪಿ ನೀರಿನಲ್ಲಿ ಕರಗದ ವಸ್ತು. ಇದರಿಂದ ಬಾವಿ, ಕೆರೆ, ಕುಂಟೆ, ಸರೋವರ, ನದಿ ನೀರು ಕಲುಷಿತಗೊಳ್ಳುತ್ತದೆ. ಇದರಿಂದ ವಿವಿಧೆಡೆ ಜೀವ ಹಾನಿಯೂ ಆಗಿದೆ. ಜನ ಜಾನುವಾರುಗಳ ಜೀವ ಉಳಿಸಲು ಮತ್ತು ರಕ್ಷಿಸಲು ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗಣಪತಿ, ಗೌರಿ ಮೂರ್ತಿಗಳನ್ನು ತಯಾರಿಸದಂತೆ, ದಾಸ್ತಾನು ಮತ್ತು ಮಾರಾಟ ಮಾಡದಂತೆ ಜನ ಜಾಗೃತಿ ಮತ್ತು ಕ್ರಮಗಳನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕೈಗೊಂಡಿದ್ದರೂ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ ಎಂಬ ಕೂಗು ಕೇಳಿಬಂದಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದಲ್ಲಿರುವ ಮಾರಸಂದ್ರದಲ್ಲಿ ಗಣೇಶ ಮೂರ್ತಿ ತಯಾರಿಕೆಯ 9 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಬಹುತೇಕ ಎಲ್ಲಾ ಘಟಕಗಳಲ್ಲಿ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ.
ಪರಿಸರ ಪ್ರೇಮಿಗಳ ಒತ್ತಡಕ್ಕೆ ಮಣಿದ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಣೇಶ ಮೂರ್ತಿ ತಯಾರಿಕ ಘಟಕಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಪ್ಲಾಸ್ಟರ್ ಆಫ್ ಪ್ಯಾರೀಸ್, ಬಣ್ಣ ಲೇಪಿತ ಗಣೇಶ ಮೂರ್ತಿಗಳು ಪತ್ತೆಯಾಗಿದೆ, ಅಧಿಕಾರಿಗಳ ದಾಳಿಗೆ ಹೆದರಿದ ಇನ್ನೂಳಿದ 8 ಘಟಕಗಳು ಬಾಗಿಲು ಹಾಕಿ ಪರಾರಿಯಾಗಿದ್ದಾರೆ.
ಅಧಿಕಾರಿಗಳ ದಾಳಿ ಬಗ್ಗೆ ಮಾತನಾಡಿದ ಯುವ ಸಂಚಲನದ ಮುಖಂಡರಾದ ಚಿದಾನಂದ್ ಮೂರ್ತಿ, ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಬೇಸರವನ್ನ ವ್ಯಕ್ತಪಡಿಸಿದರು, ಕಳೆದ ವರ್ಷ ನಿಷೇಧಿಸಿದ ಮೂರ್ತಿಗಳನ್ನೇ ಈಗಲೂ ಮರು ತಯಾರಿಕೆ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಆದರೆ, ಅಧಿಕಾರಿಗಳು ದಾಳಿ ವೇಳೆ ಹಳೆಯ ವಿಗ್ರಹಗಳು ಮಾತ್ರ ಪತ್ತೆಯಾಗಿದೆ ಎಂದು ಮಹಜರು ಬರೆದಿದ್ದಾರೆ. ಪರಿಸರವನ್ನ ಕಾಪಾಡಬೇಕಾದ ಜವಾಬ್ದಾರಿ ಹೊತ್ತ ಅಧಿಕಾರಿಗಳೇ ಪರಿಸರ ಮಾಲಿನ್ಯಕ್ಕೆ ಮುಂದಾಗಿರುವುದು ನಮ್ಮ ಸಮಾಜದ ದುರಂತ ಕಿಡಿಕಾರಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33(ಅ) ಕಾಯ್ದೆ ಪ್ರಕಾರ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ , ಬಣ್ಣ ಲೇಪಿತ ವಿಗ್ರಹಗಳನ್ನು, ರಾಜ್ಯದ ಯಾವುದೇ ಜಲಗಳಲ್ಲಿ, ನದಿ, ಕಾಲುವೆ, ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ 1974ರ ಕಲಂ 45-1 ಅನ್ವಯ 10 ಸಾವಿರ ದಂಡವನ್ನು ಮತ್ತು ಜೈಲುವಾಸವನ್ನು ವಿಧಿಸುವ ಅವಕಾಶವಿರುತ್ತದೆ. ಅಲ್ಲದೆ ಕಡ್ಡಾಯವಾಗಿ ಗಣೇಶ ಮೂರ್ತಿಗಳು 5 ಅಡಿ ಎತ್ತರವನ್ನು ಮೀರಬಾರದೆಂದು ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಬಂಧ ವಿಧಿಸಿದೆ ಎಂದರು.
ಈಗಾಗಲೇ ನಮ್ಮ ಜಲಮೂಲಗಳಿಗೆ ಆಗಿರುವ ಕಲುಷಿತ ಸಾಕು. ಇನ್ನಾದರೂ ಸ್ಥಳೀಯ ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಂಡು ಈ ಬಾರಿ ಪರಿಸರ ಸ್ನೇಹಿಯಾಗಿ ಗಣೇಶ ಹಬ್ಬ ಜರಗುವಂತೆ ಕ್ರಮವಹಿಸಬೇಕು ಯಾವುದೇ ಕಾರಣಕ್ಕೂ ವಿಷಕಾರಿ ರಸಾಯನಿಕ ಬಣ್ಣಗಳನ್ನು ಬಳಸಿರುವ, ಹುಲ್ಲು ಮತ್ತು ಬಿದಿರು ಕಡ್ಡಿಗಳಿಂದ ಗಣೇಶ ಮೂರ್ತಿಗಳನ್ನು ಮಾಡಿರುವ ಗಣೇಶಗಳನ್ನು ತಯಾರು ಮಾಡದಂತೆ ಹಾಗೂ ಕೂರಿಸದಂತೆ ತಡೆಗಟ್ಟಬೇಕು. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದರೆ ಶಿಸ್ತು ಕ್ರಮ ಕೈಗೊಂಡು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.
ಒಟ್ಟಾರೆ, ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು, ಜೇಡಿ ಮಣ್ಣು ಅಥವಾ ಮಣ್ಣಿನಿಂದ ತಯಾರಿಸಿದ ಬಣ್ಣ ರಹಿತ ಗಣೇಶ ಮೂರ್ತಿಯನ್ನು ಖರೀದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆದಷ್ಟೂ ಮನೆಗಳಲ್ಲಿ ಅರಿಶಿಣ ಮಿಶ್ರಿತ ಗೋಧಿ ಹಿಟ್ಟಿನಿಂದ ಮಾಡಿದ ಪುಟ್ಟ ಗಣೇಶನನ್ನು ಪ್ರತಿಷ್ಠಾಪಿಸಬೇಕು. ಮನೆಯಲ್ಲೇ ಬಕೆಟ್‌ನಲ್ಲಿ ವಿಸರ್ಜಿಸಿದರೆ ಉತ್ತಮ.
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…