ಅದ್ಧೂರಿ ಗಣೇಶೋತ್ಸವಕ್ಕೆ ದೊಡ್ಡಬಳ್ಳಾಪುರ ಸಜ್ಜಾಗಿದೆ. ಗಣಪನ ಆರಾಧನೆಗೆ ಕೌಂಟ್‌ಡೌನ್ ಶುರುವಾಗಿದೆ. ಈಗಾಗಲೇ ಗಣಪನ ಮೂರ್ತಿಗಳ ಮಾರಾಟ ಜೋರಾಗಿದೆ.
ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್‌ಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಿಸಲಾಗಿದೆ. ಒಂದು ವೇಳೆ ಡಿಜೆ ಸಿಸ್ಟಂ ಬಳಕೆ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಎಚ್ಚರಿಸಿದ್ದಾರೆ….
ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಿಜೆ ಸಿಸ್ಟಂ ಮಾಲೀಕರ ಸಭೆ ಕರೆದು ಮಾತನಾಡಿದ ಅವರು, ಹಬ್ಬಗಳ ಆಚರಣೆ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ದೊಡ್ಡಬಳ್ಳಾಪುರದಲ್ಲಿ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದರು.
ಗೌರಿ–ಗಣೇಶ ಹಬ್ಬ, ಈದ್ ಮಿಲಾದ್ ಮೆರವಣಿಗೆ ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ ಡಿಸ್ಕ್ ಜಾಕಿ (ಡಿಜೆ) ಹಾಗೂ ಸೌಂಡ್ ಸಿಸ್ಟಮ್ ಬಳಕೆ ನಿಷೇಧಿಸಿ ಬೆಂಗಳೂರು ಪೊಲೀಸರು ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
‘ಸಾರ್ವಜನಿಕ ಕಾರ್ಯಕ್ರಮದಲ್ಲಿ ಸೌಂಡ್ ಸಿಸ್ಟಮ್ ಮತ್ತು ಡಿಜೆ ನಿರ್ಬಂಧಿಸಿ ಬೆಂಗಳೂರು ಪೊಲೀಸರು ಹೊರಡಿಸಿರುವ ಸುತ್ತೋಲೆಯಲ್ಲಿ ಯಾವುದೇ ಲೋಪಗಳಿಲ್ಲ. ವಸತಿ ಪ್ರದೇಶದಲ್ಲಿ ಹಗಲು ವೇಳೆ 55 ಡೆಸಿಬಲ್ ಮತ್ತು ರಾತ್ರಿ ವೇಳೆ 45 ಡೆಸಿಬಲ್ ಶಬ್ಧದ ಮಟ್ಟ ನಿಗದಿಪಡಿಸಲಾಗಿದೆ. ಆದ್ದರಿಂದ, ಸಾರ್ವಜನಿಕ ಪ್ರದೇಶಗಳಲ್ಲಿ ಹೆಚ್ಚು ಸದ್ದು ಮಾಡುವ ಡಿಜೆ ಮತ್ತು ಸೌಂಡ್ ಸಿಸ್ಟಮ್‌ನ ಬಳಕೆಯನ್ನು ಒಪ್ಪಿಕೊಳ್ಳುವುದು ನ್ಯಾಯಾಲಯಕ್ಕೆ ಕಷ್ಟ ಎಂದು ಹೈಕೋರ್ಟ್ ತಿಳಿಸಿದೆ ಎಂದು ಹೇಳಿದರು.
ಆದ್ದರಿಂದ ಗಣೇಶೋತ್ಸವವು ಶಾಂತಿಯುತವಾಗಿ ನಡೆಯಲು, ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ತಡೆಯಲು, ಸಾರ್ವಜನಿಕರು, ವಯಸ್ಕರ, ಮಕ್ಕಳ ಆರೋಗ್ಯ ಹಾಗೂ ನೆಮ್ಮದಿಗೆ ಭಂಗ ಉಂಟಾಗಬಾರದು ಎಂಬ ಕಾರಣಕ್ಕೆ ಪೊಲೀಸ್ ಕಾಯ್ದೆ-1963 ಕಲಂ 35, 36ರ ಅನ್ವಯ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…