Categories: ರಾಜ್ಯ

ಗೌರಿ ಗಣೇಶ ಹಬ್ಬ: ಕರಾರಸಾ ನಿಗಮದಿಂದ 1,200 ಹೆಚ್ಚುವರಿ ಬಸ್ ಗಳ ವ್ಯವಸ್ಥೆ

ವಾರಾಂತ್ಯ ಸೆ. 15, 16 ಹಾಗೂ ಸೆ.18ರಂದು ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು 1200 ಹೆಚ್ಚುವರಿ ಬಸ್ ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ ಕರಾರಸಾನಿ.

ಅದೇ ರೀತಿ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಬರಲು ಸೆ.18ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು.

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ,

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಾಡಲಾಗುವುದು. ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಸಹ ಕಲ್ಪಿಸಲಾಗಿದೆ.

ಪ್ರಯಾಣಿಕರು ಬಸ್‌ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಇ-ಟಿಕೇಟ್ ಬುಕಿಂಗ್‌ನ್ನು Www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.

ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾವುವುದು. ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಎಂದು ಕರಾರಸಾನಿ ತಿಳಿಸಿದೆ.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

2 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

3 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

3 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

10 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

11 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

14 hours ago