ಗೌರಿ ಗಣೇಶ ಹಬ್ಬ: ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಎಸ್ಪಿ ನೇತೃತ್ವದಲ್ಲಿ ರೂಟ್ ಮಾರ್ಚ್: ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪಥಸಂಚಲನ

ನಾಡಿನೆಲ್ಲೆಡೆ ಅದ್ಧೂರಿ ಗೌರಿ ಗಣೇಶ ಹಬ್ಬ ಆಚರಣೆ ಹಿನ್ನೆಲೆ, ತಾಲೂಕಿನಲ್ಲಿ ಸಾರ್ವಜನಿಕರು ಶ್ರದ್ಧಾಭಕ್ತಿಯಿಂದ ಹಾಗೂ ಯಾವುದೇ ಆತಂಕವಿಲ್ಲದೆ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಸುವ ಮೂಲಕ ಪೊಲೀಸ್ ತಂಡ ಸಾರ್ವಜನಿಕರಿಗೆ ರಕ್ಷಣೆ ಜೊತೆಗೆ ತಾಲೂಕಿನ ಶಾಂತಿ ಸುವ್ಯವಸ್ಥೆ ಕಾಪಾಡುವ ಭರವಸೆ ನೀಡಲಾಯಿತು‌.

ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಭಕ್ತಿಪೂರ್ವಕವಾಗಿ ನಡೆಸುವ ನಿಟ್ಟಿನಲ್ಲಿ ಈ ವಿಶೇಷ ಪಥ ಸಂಚಲನವನ್ನ ಆಯೋಜನೆ ಮಾಡಲಾಗಿತ್ತು.

ರೂಟ್ ಮಾರ್ಚ್ ನಲ್ಲಿ ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ ಪಿ ರವಿ.ಪಿ ಸೇರಿದಂತೆ ನಗರ, ಗ್ರಾಮಾಂತರ, ಹೊಸಹಳ್ಳಿ, ದೊಡ್ಡಬೆಳವಂಗಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಗಳು, ಸಿಬ್ಬಂದಿ ಶಿಸ್ತಿನಿಂದ ಹೆಜ್ಜೆಹಾಕಿದರು.

Ramesh Babu

Journalist

Recent Posts

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

4 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

8 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

1 day ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago