Categories: ಕೋಲಾರ

ಗ್ಯಾರಂಟಿಗಳಿಂದ ಅನುಕೂಲವಾಗಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ರಾಜ್ಯದಲ್ಲಿ‌ ಯಾರು ಮಾಡದೇ ಇರುವ ಅಭಿವೃದ್ದಿ ಕೆಲಸಗಳನ್ನು ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಮುಳಬಾಗಿಲು ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ್ದೇನೆ ಕ್ಷೇತ್ರದಲ್ಲಿ ಅಭಿವೃದ್ಧಿ ಮತ್ತು ಸರಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಅನುಕೂಲವಾಗಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ವೋಟ್ ಹಾಕಿ ಎಂದು ಕೋಲಾರ ಶಾಸಕ ಕೊತ್ತೂರು ಜಿ ಮಂಜುನಾಥ್ ಹೇಳಿಕೆ,

ಜಿಲ್ಲೆಯ ಮುಳಬಾಗಿಲು ತಾಲೂಕಿನ ಆವಣಿ, ತಾಯಲೂರು, ಬೈರಕೂರು ಮತ್ತು ಕೂಲದೇವಿ ಹೋಬಳಿ ಕೇಂದ್ರಗಳಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ವಿ ಗೌತಮ್ ಪರವಾಗಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಲವು ಕಾರಣಗಳಿಂದ ವಿ.ಆದಿನಾರಾಯಣ ಸೋತಿದ್ದಾರೆ ನಾನು ಎಲ್ಲೇ ಹೋದ್ರೂ ಮುಳಬಾಗಿಲು ತಾಲ್ಲೂಕಿನ ಜನತೆ ನನ್ನ ಕೈ ಬಿಡೋದಿಲ್ಲ ಅನ್ನೋ ನಂಬಿಕೆ ಇತ್ತು ಆದರೆ ಕಳೆದ ಚುನಾವಣೆಯಲ್ಲಿ ನಮಗೆ ಸೋಲಾಗಿದೆ ಅದರಿಂದ ಸ್ವಲ್ಪ ಬೇಸರ ಹಾಗಿದೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿ ನಿಮ್ಮ ಸೇವೆ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ ನಿರಂತರವಾಗಿ ನಾವು ನಿಮಗೆ ಸಿಗತ್ತೇವೆ ಕಳೆದ ೨೦ ವರ್ಷಗಳಿಂದ ನಿಮಗಾಗಿ ಸುಡು ಬಿಸಿಲು ಎನ್ನದೇ ತಿರುಗಾಡುತ್ತಾ ಇದ್ದೇವೆ ನಾವು ನಿಮ್ಮ ಬಳಿ ಇರುವ ಏನನ್ನೂ ಕೊಂಡೊಯ್ಯಲು ಆಗಮಿಸಿಲ್ಲ ದೇಶದ ಅಭಿವೃದ್ದಿಗೆ, ರೈತರ ಕೈ ಬಲಪಡಿಸಲು ಬಂದಿದ್ದು ಕಾಂಗ್ರೆಸ್ ಪಕ್ಷಕ್ಕೆ ವೋಟು ಹಾಕಿ ಎಂದು ಮನವಿ ಮಾಡಿದರು

ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ.ವಿ ಗೌತಮ್ ಹೊರಗಿನವರು ಎಂದು ಅಪಪ್ರಚಾರ ಮಾಡಲು ಹೊರಟಿದ್ದಾರೆ ಇಂತಹ ಸಂಪ್ರದಾಯ ಹುಟ್ಟುಹಾಕಿದ್ದೇ ಜೆಡಿಎಸ್‌ ಮತ್ತು ಬಿಜೆಪಿ ಎಂಬುದನ್ನು ಮರೆಯಬಾರದು ಕುಮಾರಸ್ವಾಮಿ ಹಾಸನದಲ್ಲಿ ಹುಟ್ಟಿ ರಾಮನಗರ, ಚಿಕ್ಕಬಳ್ಳಾಪುರ ಆಯಿತು ಈಗ ಮಂಡ್ಯ ಜಿಲ್ಲೆಗೆ ಹೋಗಿದ್ದಾರೆ ನರೇಂದ್ರ ಮೋದಿ ಗುಜರಾತ್ ನಿಂದ ಉತ್ತರಪ್ರದೇಶದ ವಾರಣಾಸಿಗೆ ಹೋಗಿದ್ದಾರೆ ಜೆಡಿಎಸ್ ಬಿಜೆಪಿಯವರು ಎಲ್ಲಿ ಬೇಕಾದ ಸ್ಪರ್ದಿಸಬಹುದು ಕಾಂಗ್ರೆಸ್ ಅಭ್ಯರ್ಥಿ ಹೊರಗಿನವರು ಎಂದು ಅಪಪ್ರಚಾರ ಮಾಡಲು ಹೊರಟಿದ್ದಾರೆ ಇದು ಪ್ರಜಾಪ್ರಭುತ್ವ ದೇಶ ಎಲ್ಲಿ ಬೇಕಾದರೂ ಸ್ಪರ್ಧೆ ಮಾಡುವ ಹಕ್ಕು ಸಂವಿಧಾನ ನೀಡಿದೆ ಎಂದರು.

ಈ ಸಂದರ್ಭದಲ್ಲಿ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪರಾಜಿತ ಅಭ್ಯರ್ಥಿ ವಿ.ಆದಿನಾರಾಯಣ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ನೀಡಿರುವ ಆಶ್ವಾಸನೆಗಳಲ್ಲಿ ಒಂದನ್ನು ಸಹ ಈಡೇರಿಸಲಿಲ್ಲ, ಕಳೆದ ಹತ್ತು ವರ್ಷಗಳಲ್ಲಿ‌ ಮಾಡದೇ ಇರುವ ಅಭಿವೃದ್ದಿ ಮುಂದಿನ ೫ ವರ್ಷದಲ್ಲಿ ಮಾಡುತ್ತಾರೆಯೇ ಎಂದು ಪ್ರಶ್ನಿಸಿದರು, ರಾಜ್ಯ ಸರ್ಕಾರದ ೫ ಗ್ಯಾರೆಂಟಿ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಿದೆ ಅದೇ ರೀತಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಸಬಲೀಕರಣ, ರೈತರ ಆದಾಯ ದ್ವಿಗುಣ, ನರೇಗಾ ಯೋಜನೆಯನ್ನು ನಗರದ ವ್ಯಾಪ್ತಿಗೆ ಜಾರಿ ಗೊಳಿಸುವುದು, ೨೫ ಲಕ್ಷ ಆರೋಗ್ಯ ವಿಮೆ ಸೇರಿದಂತೆ ಹತ್ತು ಹಲವು ಯೋಜನೆಗಳ ಆಶ್ವಾಸನೆ ನೀಡಿದೆ ಆಶ್ವಾಸನೆ ಈಡೇರಿಸಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಮಾತನಾಡಿ, ಬಿಜೆಪಿ‌ಯವರು ಚುನಾವಣಾ ಪ್ರಚಾರದಲ್ಲಿ ಸುಳ್ಳು ಭರವಸೆಗಳನ್ನು ಹೇಳಿ ಅಧಿಕಾರಕ್ಕೆ ಬಂದು ಹತ್ತು ವರ್ಷದಿಂದ ಒಂದೇ ಒಂದು ಭರವಸೆಯನ್ನು ಈಡೇರಿಸಲಿಲ್ಲ, ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ, ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ಮಹಿಳೆಯರಿಗೆ ಯಾವುದೇ ಪ್ರಯೋಜನವಿಲ್ಲ, ಯುವಕರು ಉದ್ಯೋಗ ಕೊಡಿ ಎಂದರೆ ಪೋಲೀಸರನ್ನು ಚೂ ಬಿಟ್ಟು ಲಾಠಿ ಚಾರ್ಜ್ ಮಾಡಿಸ್ತಾರೆ ದೇಶದ ೨೨ ಬಂಡವಾಳಶಾಹಿಗಳ ಪರವಾಗಿ ಬಿಜೆಪಿ ಸರ್ಕಾರ ಇದೆ ಎಂದರು.

ಕಳೆದ ವಿಧಾನಸಭಾ ಚುನಾಣೆಯಲ್ಲಿ ಕಾಂಗ್ರೇಸ್ ಪಕ್ಷದಿಂದ ೫ ಗ್ಯಾರೆಂಟಿ ಯೋಜನೆಗಳ ಆಶ್ವಾಸನೆ ನೀಡಿದ್ದರು ಪೂರ್ಣ ಬಹುಮತದ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ಎಂಟು ತಿಂಗಳಲ್ಲಿ ೫ ಬರವಸೆಗಳನ್ನು ಈಡೇರಿಸಿದೆ, ರಾಜ್ಯದಲ್ಲಿ ನುಡಿದಂತೆ ನಡೆದಿರುವ‌ ಏಕೈಕ ಸರ್ಕಾರ ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ವಿಶ್ವಾಸ ವ್ಯಕ್ತ ಪಡಿಸಿದರಲ್ಲದೆ, ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಹಾಲಕ್ಷ್ಮಿ ಯೋಜನೆಯಲ್ಲಿ ವರ್ಷಕ್ಕೆ ೧ ಲಕ್ಷ ರೂ ಪ್ರತಿ ಮಹಿಳೆಯರ ಖಾತೆಗೆ ಜಮೆ ಮಾಡಲಾಗುತ್ತದೆ ೩೦ ಲಕ್ಷ ನಿರುದ್ಯೋಗ ಯುವಕ ಯುವರರಿಗೆ ಉದ್ಯೋಗವನ್ನು ನೀಡಲಿದ್ದು ಕಾಂಗ್ರೆಸ್ ಪಕ್ಷಕ್ಕೆ ವೋಟು ಹಾಕಿ‌‌ ನಿಮ್ಮ ಸೇವೆ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಅವಣಿ ಕೃಷ್ಣಪ್ಪ, ಉತ್ತನೂರು ಅರವಿಂದ್, ಕೋಚಿಮುಲ್ ಮಾಜಿ ನಿರ್ದೇಶಕ ರಾಜೇಂದ್ರ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನೀಲಕಂಠೇಗೌಡ, ಅಮಾನ್ ಉಲ್ಲಾ ಖಾನ್, ಮುನಿಅಂಜಿನಪ್ಪ, ಮುಖಂಡರಾದ ಅಲಂಗೂರು ಶಿವಣ್ಣ, ಗೋಪಾಲ್, ಅವಣಿ ನವೀನ್, ಜಮ್ಮನಹಳ್ಳಿ ಕೃಷ್ಣ, ಲೀಲಾವತಿ, ಅಮರ್ ಮುಂತಾದವರು ಇದ್ದರು

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

8 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

11 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

11 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

12 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

13 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

18 hours ago