Categories: ರಾಜ್ಯ

ಗ್ಯಾರಂಟಿಗಳ ಲಾಭವನ್ನು ಯಾರಿಗೆ, ಹೇಗೆ ಕೊಡುತ್ತೇವೆ ಎಂದು ಹೇಳದೆ ಆದೇಶ ನೀಡುವ ನಾಟಕ-ಬಿಜೆಪಿ

ನೀಡಲು ಸಾಧ್ಯವಿಲ್ಲದ ಗ್ಯಾರಂಟಿಗಳನ್ನು ಮುಂದಿಟ್ಟು, ಜನತೆಯನ್ನು ವಂಚಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ಈಗ ಸಾಬೀತಾಗಿದೆ. ಪ್ರಮಾಣವಚನ ಸ್ವೀಕರಿಸಿದ ಕೂಡಲೇ ಜಾರಿಗೆ ತರುತ್ತೇವೆ ಎಂದಿದ್ದ ಗ್ಯಾರಂಟಿಗಳ ಲಾಭವನ್ನು ಯಾರಿಗೆ ಮತ್ತು ಹೇಗೆ ಕೊಡುತ್ತೇವೆ ಎಂಬ ಯಾವುದೇ ವಿವರ ನೀಡದೆ ಸಿದ್ದರಾಮಯ್ಯ ಸರ್ಕಾರ ಆದೇಶ ನೀಡುವ ನಾಟಕವಾಡಿದೆ.

ಇವು ಕೊಡುವ ಗ್ಯಾರಂಟಿಗಳಲ್ಲ, ಬದಲಾಗಿ ಕೈ ಎತ್ತುವ ಗ್ಯಾರಂಟಿಗಳು ಎಂಬುದನ್ನು ಕಾಂಗ್ರೆಸ್‌ನ ನಾಯಕರ ಹಾವಭಾವಗಳೇ ಸುಸ್ಪಷ್ಟವಾಗಿ ತೋರಿಸಿದೆ.
ಈಡೇರಿಸಲಾಗದ ಗ್ಯಾರಂಟಿಗಳನ್ನು ಕೇಂದ್ರ ಸರ್ಕಾರದ ಮೇಲೆ ಹಾಕುವ ಉದ್ದೇಶದಿಂದ ಈಗ ಸಂಪನ್ಮೂಲ ಕ್ರೋಢೀಕರಣ ಎಂಬ ಸಬೂಬು ಹೇಳಲಾಗುತ್ತಿದೆಯಷ್ಟೆ.

ಗ್ಯಾರಂಟಿಗಳನ್ನು ದಾರಿಯಲ್ಲಿ ಹೋಗುವವರಿಗೆಲ್ಲಾ ಕೊಡಲಾಗುತ್ತದೆಯೇ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಈಗ ಕೇಳುತ್ತಿದ್ದಾರೆ.
ಚುನಾವಣೆಗೂ ಮುನ್ನ ಹಾದಿಯಲ್ಲಿ ಹೋಗುವವರಿಗೆಲ್ಲಾ ಗ್ಯಾರಂಟಿ ಕಾರ್ಡ್‌ ನೀಡಿ ಈಗ ಈ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ. ಹಾಗಾದರೆ ದಾರಿಯಲ್ಲಿ ಹೋಗುವವರು ಕನ್ನಡಿಗರಲ್ಲವೇ? ಪ್ರಶ್ನೆ ಮಾಡಿದ ಬಿಜೆಪಿ.

ರಾಜ್ಯದ ಇತಿಹಾಸದಲ್ಲೇ ಅತಿಹೆಚ್ಚು ಸಾಲ ಮಾಡಿ ಅದರ ಹೊಣೆಯನ್ನು ಮುಂದಿನ ಸರ್ಕಾರಗಳ ಹೆಗಲಿಗೆ ಹಾಕಿದ ಅಪಕೀರ್ತಿ ಸಿದ್ದರಾಮಯ್ಯನವರದ್ದು.
ಈಗಿನ ಗ್ಯಾರಂಟಿಗಳೂ ಜನರ ಒಂದು ಜೇಬಿನಿಂದ ತೆಗೆದು ಇನ್ನೊಂದು ಜೇಬಿಗೆ ಹಾಕುವ ನಾಟಕ. ಅದರಲ್ಲೂ ಸೋರಿಕೆಯಾಗಿ ಕಾಂಗ್ರೆಸ್ಸಿಗರ ಜೇಬುಗಳು ತುಂಬಿ ತುಳುಕಲಿರುವುದು ಇವರ ಗ್ಯಾರಂಟಿಯ ಅಸಲೀಯತ್ತು ಎಂದು ಬಿಜೆಪಿಯು ತನ್ನ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವಿಚಾರಕ್ಕೆ ಪ್ರತಿಕ್ರಿಯಿಸಿದೆ.

Ramesh Babu

Journalist

Recent Posts

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

34 minutes ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

1 hour ago

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

4 hours ago

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳ ಸರಣಿ: ಜನರಲ್ಲಿ ಆತಂಕ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…

18 hours ago