ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ್ಲಿ ಮೂಲಸೌಕರ್ಯ ಅಭಿವೃದ್ಧಿ ಜತೆಗೆ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಂಧನ ಸಚಿವ ಹಾಗೂ ಶಾಸಕ ಕೆ.ಜೆ.ಜಾರ್ಜ್ ನೂತನ ಕಚೇರಿ ಲೋಕಾರ್ಪಣೆಗೊಳಿಸಿದ್ದಾರೆ.
ಸರ್ವಜ್ಞನಗರ ಕ್ಷೇತ್ರದ ಕಾಚರಕನಹಳ್ಳಿಯಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಉದ್ಘಾಟಿಸಿದ ಸಚಿವರು,ಕ್ಷೇತ್ರದಲ್ಲಿ ಗ್ಯಾಂಟಿ ಯೋಜನೆಗಳನ್ನು ಸಮರ್ಪವಾಗಿ ಜನರಿಗೆ ತಲುಪಿಸುವದರ ಜತೆಗೆ ಅನುಷ್ಠಾನವಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವ ಉದ್ದೇಶದಿಂದ ಈ ಕಚೇರಿ ಸ್ಥಾಪಿಸುತ್ತಿರುವುದಾಗಿ ಹೇಳಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ರಾಜ್ಯ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹಾಗೂ ಸಮಿತಿಯ ಸ್ಥಳೀಯ ಅಧ್ಯಕ್ಷ ಮುರಳಿ ಮತ್ತು ಸದಸ್ಯರು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಗಾಂಧೀನಗರ 2ನೇ ಹಂತದಲ್ಲಿ ಕೈಗೊಳ್ಳುತ್ತಿರುವ 300 ಎಂಎಂ ವ್ಯಾಸದ ಒಳಚರಂಡಿ ನೂತನ ಮಾರ್ಗದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಕ್ಷೇತ್ರದ ಜನರು ಸಲ್ಲಿಸಿದ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು, ತೊಂದರೆಗಳನ್ನು ನಿವಾರಿಸುವ ಭರವಸೆ ನೀಡಿದರು. ಕುಡಿಯುವ ನೀರು ಪೂರೈಕೆಯಲ್ಲಿನ ಸಮಸ್ಯೆಗಳ ಬಗ್ಗೆ ಕ್ಷೇತ್ರದ ಜನರು ವಿವರಿಸಿದಾಗ, ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಂದ ಮಾಹಿತಿ ಪಡೆದು ತಕ್ಷಣವೇ ಸರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.
*ಸ್ವಾವಲಂಬಿ ಜೀವನಕ್ಕೆ ಹೊಲಿಗೆ ಯಂತ್ರ ಕೊಡುಗೆ*
ವಿನೋಭ ನಗರ, ಕೆ.ಜಿ.ಹಳ್ಳಿಯಲ್ಲಿ ಸಾಮಾಜಿಕ ಕಾರ್ಯದಲ್ಲಿ ನಿರತವಾಗಿರುವ ಮೈತ್ರಿ ಸರ್ವ ಸೇವಾ ಸಂಸ್ಥೆ ಮತ್ತು ಯುನೈಟೆಡ್ ವೇ ವತಿಯಿಂದ ಹೊಲಿಗೆ ಯಂತ್ರಗಳನ್ನು ಸಚಿವ ಕೆ.ಜೆ.ಜಾರ್ಜ್ ವಿತರಿಸಿದರು. ಸಂಸ್ಥೆಯು ಆರ್ಥಿಕ ಸಬಲೀಕರಣದ ಭಾಗವಾಗಿ 35 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳು ಪ್ರದರ್ಶಿಸಿದ ಭರತನಾಟ್ಯ ವೀಕ್ಷಿಸಿದ ಅವರು, ಮಕ್ಕಳಿಗೆ ಶುಭಹಾರೈಸಿದರು.
ಇದಾದ ಬಳಿಕ ಇತ್ತೀಚೆಗೆ ನಿಧನರಾದ ಗಾಂಧೀನಗರ 2ನೇ ಹಂತದ ಹಿರಿಯ ಕಾಂಗ್ರೆಸ್ ಮುಖಂಡ ದಿವಂಗತ ಕೇಶವನ್ ಮತ್ತು ಕಾಡುಗೊಂಡನಹಳ್ಳಿಯ ದಿವಂಗತ ಹಿರಿಯ ಕಾಂಗ್ರೆಸ್ ಮುಖಂಡ ಮುನಿಸ್ವಾಮಿ ಅವರ ಮನೆಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಸಚಿವರ ನೆರವಿಗೆ ಕ್ರೀಡಾಪಟುವಿನಿಂದ ಧನ್ಯವಾದ
ಇತ್ತೀಚೆಗೆ ನಡೆದ ಪ್ರಥಮ ಏಷ್ಯನ್ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್ ನಲ್ಲಿ ಭಾರತ ತಂಡ ಪಾಲ್ಗೊಡು ಮೂರನೇ ಸ್ಥಾನ ಗಳಿಸಿದ್ದು, ಈ ತಂಡದ ಸದಸ್ಯರಾಗಿದ್ದ ಸರ್ವಜ್ಞನರ ವಿಧಾನಸಭಾ ಕ್ಷೇತ್ರದ ಜೀವನಹಳ್ಳಿ ನಿವಾಸಿ ಬಲರಾಂ ಬಿ. ಅವರು ತಮ್ಮ ಈ ಸಾಧನೆಗೆ ಸಹಾಯಹಸ್ತ ಚಾಚಿದ್ದ ಸಚಿ ಕೆ.ಜೆ.ಜಾರ್ಜ್ ಅವರಿಗೆ ಧನ್ಯವಾದ ಸಲ್ಲಿಸಿದರು.
ಪ್ರಥಮ ಏಷ್ಯನ್ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್ ಗಾಗಿ ತರಬೇತಿ ಮತ್ತು ಕಾಬೋಡಿಯಾಕ್ಕೆ ತೆರಳಲು ಸಚಿವ ಜಾರ್ಜ್ ಅವರು ಹಣಕಾಸಿನ ಸಹಾಯ ಮಾಡಿದ್ದರಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು. ಹೀಗಾಗಿ ಅವರಿಗೆ ಅಭಿನಂದನೆ ಸಲ್ಲಿಸುವುದರ ಜತೆಗೆ ಕೃತಜ್ಞತೆ ಹೇಳಲು ಬಂದಿರುವುದಾಗಿ ಬಲರಾಂ ತಿಳಿಸಿದರು. ಈ ವೇಳೆ ಸಚಿವರು ಸಾಧಕ ಕ್ರೀಡಾಪಟುವಿಗೆ ಮೆಡಲ್ ಹಾಕುವುದರ ಮೂಲಕ ಶುಭಕೋರಿದರು. ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಸಚಿವ ಕೆ.ಜೆ.ಜಾರ್ಜ್ ಅಭಿಮಾನಿಗಳು ಉಪಸ್ಥಿತರಿದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…