Categories: ಕೋಲಾರ

ಗ್ಯಾರಂಟಿ ಯೋಜನೆಗಳಿಂದ ಜನತೆಗೆ ನೆಮ್ಮದಿಯ ಬದುಕು- ಎಂಎಲ್ಸಿ ಅನಿಲ್ ಕುಮಾರ್

ಕೋಲಾರ: ರಾಜ್ಯದಲ್ಲಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರಿಗೆ ಬಹಳ ನೆರವಾಗಿದ್ದು ಜನ ನೆಮ್ಮದಿಯಿಂದ ಬದುಕುವಂತಾಗಿದೆ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು.

ತಾಲೂಕಿನ ವೇಮಗಲ್ ಗ್ರಾಮದಲ್ಲಿ ಪಟ್ಟಣ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು ಗ್ಯಾರಂಟಿಗಳು ಚುನಾವಣೆಯ ಗಿಮಿಕ್‌ ಎಂದು ವಿರೋಧ ಪಕ್ಷದವರು ಟೀಕಿಸಿದ್ದರು. ಆದರೆ, ರಾಜ್ಯ ಸರ್ಕಾರ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಇದರಿಂದ ರಾಜ್ಯವೇನೂ ದಿವಾಳಿ ಆಗಿಲ್ಲ. ಅಭಿವೃದ್ಧಿ ಕೆಲಸಗಳು ಮುಂದುವರೆದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುಭವಿ ರಾಜಕಾರಣಿ. ಅನೇಕ ಬಜೆಟ್‌ಗಳನ್ನು ಮಂಡಿಸಿದ್ದಾರೆ. ಹಣಕಾಸು ಸಚಿವರೂ ಆಗಿರುವ ಅವರು ರಾಜ್ಯದ ಜನರನ್ನು ಸಂಕಷ್ಟಕ್ಕೆ ದೂಡುವುದಿಲ್ಲ ಎಂದು ಹೇಳಿದರು.

ವೇಮಗಲ್ ಹಿಂದೆ ಗ್ರಾಮ ಪಂಚಾಯತಿಯಾಗಿತ್ತು ಇವತ್ತು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ ಈ ಭಾಗದಲ್ಲಿ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಲಾಗಿದೆ
ಕಾಂಗ್ರೆಸ್ ಪಕ್ಷವು ಎಲ್ಲಾ ಜಾತಿ ಧರ್ಮಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದೆ ಕಾಂಗ್ರೆಸ್ ಪಕ್ಷದ ಬಗ್ಗೆ ಅಪಪ್ರಚಾರ ಮಾಡಲು ಜೆಡಿಎಸ್ ಮತ್ತು ಬಿಜೆಪಿ ಹೊರಟಿದ್ದಾರೆ ಸಿಎಂ ಸಿದ್ದರಾಮಯ್ಯ ಆಡಳಿತದ ಬಗ್ಗೆ ಜನಪ್ರಿಯ ಕಾರ್ಯಕ್ಮಗಳ ಬಗ್ಗೆ ಮನೆ ಮನೆಗೆ ಹೋಗಿ ಮನವರಿಕೆ ಮಾಡಿಕೊಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ ಪಟ್ಟಣ ಪಂಚಾಯತಿಯಾಗಿ ಮೊದಲ ಬಾರಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕಾಗಿದೆ ಜೊತೆಗೆ ಪಕ್ಕದ ವಾರ್ಡ್ ಗಳಲ್ಲಿರುವ ಸಂಬಂಧಿಕರು ಸ್ನೇಹಿತರಿಗೆ ಮನವರಿಕೆ ಮಾಡಿ ಮತ ಹಾಕಿಸಬೇಕಾಗಿದೆ ಸಿದ್ದರಾಮಯ್ಯ ಅವರು ಏನು ಆಶ್ವಾಸನೆ ನೀಡಿದರು ಅದನ್ನು ನಡೆದುಕೊಂಡಿದ್ದಾರೆ ಗ್ಯಾರಂಟಿ ಮೂಲಕ ಜಾರಿ ಮಾಡಿದ್ದಾರೆ ಜನರ ಪರವಾದ ಸರ್ಕಾರ ಮಾಡಿದ್ದಾರೆ ಕಾಂಗ್ರೆಸ್ ಸರ್ಕಾರ ಇದೆ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕಾಗಿದೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ನಾಗನಾಳ ಸೋಮಣ್ಣ, ಕೋಮುಲ್ ನಿರ್ದೇಶಕ ಚಂಜಿಮಲೆ ಬಿ ರಮೇಶ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್, ತಾಲೂಕು ಅಧ್ಯಕ್ಷ ಮುನಿಯಪ್ಪ, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಜನಪನಹಳ್ಳಿ ನವೀನ್, ಅಂಬರೀಶ್, ಕುರುಬರಹಳ್ಳಿ ಕುಮಾರ್, ಮೂರ್ತಿ, ಬಿ.ನಾಗರಾಜ್, ಅಭ್ಯರ್ಥಿಗಳಾದ ಮಂಜುಳಾ ಸುರೇಶ್, ದೀಪ, ಅಂಜಲಿ ಪ್ರಕಾಶ್, ಶಶಿಕಲಾ ನಾಗೇಶ್, ವನಿತಾ, ರವಿಚಂದ್ರ, ಮುಂತಾದವರು ಇದ್ದರು,

Ramesh Babu

Journalist

Recent Posts

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

2 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

11 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

13 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

14 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago