ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತಂತೆ ಸಂಬಂಧಪಟ್ಟ ಇಲಾಖೆಗಳ ಸಭೆ ನಡೆಯಿತು.
ಸಭೆಯಲ್ಲಿ ಚರ್ಚಿಸಲ್ಪಟ್ಟ ಪ್ರಮುಖ ಅಂಶಗಳು.
ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬರ್ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ. ತಿಂಗಳ ಸರಾಸರಿ ಪ್ರಯಾಣಿಕರ ಸಂಖ್ಯೆ ಏಪ್ರಿಲ್ 2023 ರಲ್ಲಿ 84.17 ಲಕ್ಷ ಇದ್ದು, ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳವಾಗಿದೆ.
ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು.
ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ.
7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚಿಸಲಾಗಿದೆ. ಡಿಸೆಂಬರ್ 31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು.
ಗೃಹಜ್ಯೋತಿ ಯೋಜನೆಯಡಿ ಈ ವರೆಗೆ 1.62 ಕೋಟಿ ಜನ ನೋಂದಾಯಿಸಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ. ಆಗಸ್ಟ್ ನಿಂದ ಈ ವರೆಗೆ 2,900 ಕೋಟಿ ರೂ. ಭರಿಸಲಾಗಿದೆ. ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳನ್ನು ಇಲಾಖೆಯ ದತ್ತಾಂಶದಲ್ಲಿಯೇ ಗೃಹಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹ ಜ್ಯೋತಿಯಿಂದ ಬಿಟ್ಟು ಹೋಗದಂತೆ ಕ್ರಮ ವಹಿಸಬೇಕು.
ನವೆಂಬರ್ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ.
ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್ ಲಿಂಕ್ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ನೀಡಲು ಕ್ರಮ ಕೈಗೊಳ್ಳಬೇಕು.
ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್ ಖಾತೆ ಆಧಾರ್ ಲಿಂಕ್ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು.
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…