Categories: ರಾಜ್ಯ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ: ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ- ಸಿಎಂ ಸಿದ್ದರಾಮಯ್ಯ

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು. ‌ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವಧನ  ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ. ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ  ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು ಎಂದರು.

ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

8 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

9 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

17 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

22 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago