ಕಾಂಗ್ರೆಸ್ ಯೋಜನೆಗಳಿಗೆ ಚಾಲನೆ ನೀಡುವ ಮುನ್ನಾ ಯೋಚನೆ ಮಾಡಬೇಕು. ಗ್ಯಾರಂಟಿ ಯೋಜನೆ ಜಾರಿ ಮಾಡಲು ಎಸ್ಸಿಎಸ್ಪಿ ಟಿಎಸ್ಪಿ ಅನುದಾನವನ್ನು ಬಳಸಿ ದಲಿತ ಸಮುದಾಯಗಳಿಗೆ ಅಲ್ಲದೆ ಬೇರೆ ಸಮುದಾಯಗಳಿಗೂ ಕೂಡ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ. ಒಂದು ಕೈಯಿಂದ ಕೊಟ್ಟು ಇನ್ನೊಂದು ಕೈಯಿಂದ ಕಿತ್ತು ಕೊಳ್ಳುತ್ತಿದ್ದಾರೆ ಇದು ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.
ನಗರದ ಬಸವ ಭವನದಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೂದಿಯಾಗುತ್ತೆ ಎಂದು ವೀರಪ್ಪ ಮೊಯ್ಲಿ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದರು.. ಈ ವಿಚಾರ ಕುರಿತು ಬಿ.ವೈ ವಿಜಯೇಂದ್ರ ಮಾತನಾಡಿ, ಕಾಂಗ್ರೆಸ್ ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು ಇಡಿ ದೇಶವನ್ನೇ ಗೆದ್ದಿದ್ದೆವೆ ಎಂಬ ಭ್ರಮೆಯಲ್ಲಿದ್ದಾರೆ..ರಾಜ್ಯದಲ್ಲಿ 25 ಸ್ಥಾನ ಗೆದ್ದು ದೇಶದಲ್ಲಿ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ ಎಂದು ತಿರುಗೇಟು ನೀಡಿದರು.
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಂದ ನಂತರ ದಿನದಿಂದ ದಿನಕ್ಕೆ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿವೆ. ಸಮಾಜಘಾತುಕ ಕೃತ್ಯ, ಸಮಾಜ, ದೇಶ ವಿರೋಧಿ ಚಟುವಟಿಕೆಗಳು ಜಾಸ್ತಿಯಾಗುತ್ತಿರುವುದು ಖಂಡನೀಯ. ಸಿದ್ದರಾಮಯ್ಯರ ಹಿಂದಿನ ಸರ್ಕಾರದಲ್ಲೂ ಇಂತಹದೇ ಪ್ರಕರಣಗಳು ನಡೆದಿದ್ದವು ಎಂದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…