Categories: ಕೋಲಾರ

ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಪ್ರಾಧಿಕಾರ ಅಸ್ತಿತ್ವಕ್ಕೆ

ಕೋಲಾರ: ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಲಾಭವನ್ನು ಪ್ರತಿಯೊಬ್ಬರಿಗೂ ಸಿಗುವಂತೆ ಮಾಡುವುದು ನಿಮ್ಮ ಸಮಿತಿಯ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು,

ನಗರದ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಛೇರಿ ಉದ್ವಾಟನೆ ಹಾಗೂ ಸಮಿತಿ ಅಧ್ಯಕ್ಷ ವೈ ಶಿವಕುಮಾರ್ ಸೇರಿದಂತೆ ಉಪಾಧ್ಯಕ್ಷರು ಹಾಗೂ ಸದಸ್ಯರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಮಿತಿ ಸದಸ್ಯರು ಎಸಿ ಕಛೇರಿಯಲ್ಲಿ ಕಾಲಕಳೆಯಲು ಅಧಿಕಾರ ಕೊಟ್ಟಿಲ್ಲ ಜಿಲ್ಲೆಯಲ್ಲಿರುವ ಬಡವರಿಗೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಗ್ಯಾರೆಂಟಿ ಯೋಜನೆಗಳಿಂದ ವಂಚಿತರಾಗಿದ್ದಾರೆ ಅವರನ್ನು ಗ್ರಾಮ ಮಟ್ಟದಲ್ಲಿ ಗುರುತಿಸಿ ಅವರಿಗೆ ಆಗಿರುವ ತೊಂದರೆಗಳನ್ನು ಸರಿಪಡಿಸಿ ಯೋಜನೆಗಳ ಫಲಾನುಭವಿಗಳಾಗಿ ಮಾಡಬೇಕು ಎಂದರು.

ರಾಜ್ಯದಲ್ಲಿ ಹಸಿದವರಿಗೆ ಗ್ಯಾರಂಟಿ ಯೋಜನೆಗಳ ಬೆಲೆ ಗೊತ್ತಾಗುತ್ತದೆ ವಿರೋಧ ಪಕ್ಷದವರಿಗೆ ಏನು ಗೊತ್ತಿದೆ ರಾಜ್ಯದಲ್ಲಿ ವಿರೋಧ ಪಕ್ಷವು ಬರೀ ಜಾತಿ ಜನಾಂಗಗಳ ನಡುವೆ ಗಲಾಟೆ ಮಾಡಿ ರಾಜಕಾರಣ ಮಾಡಲು ಹೊರಟಿದ್ದಾರೆ ಆಡಳಿತ ಪಕ್ಷದವರಿಂದ ಜನತೆಗೆ ಯಾವುದೇ ಯೋಜನೆಗಳಿಲ್ಲ ಅನುದಾನ ಕೊಡಲು ಹಣ ಇಲ್ಲ ಎಂದು ಸರಕಾರದ ವಿರುದ್ಧ ಅಪಪ್ರಚಾರ ಮಾಡಲು ಹೊರಟಿದ್ದಾರೆ ಬಡವರಿಗೆ ಜನಪರ ಯೋಜನೆಗಳನ್ನು ಕೊಡಲು ಅವರಿಗೆ ಯೋಗ್ಯತೆ ಇಲ್ಲ ಬರಿ ಆಡಳಿತ ಪಕ್ಷದ ಗೂಬೆ ಕೂರಿಸುವ ಕೆಲಸ ಮಾಡತ್ತಾರೆ ಎಂದು ಆರೋಪಿಸಿದರು

ರಾಜ್ಯ ಸರಕಾರವು ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ 56 ಸಾವಿರ ಕೋಟಿ ಹಣ ಮೀಸಲಿಡಲಾಗಿದೆ ಸರಕಾರವು ಪಕ್ಷಾತೀತವಾಗಿ ಕೆಲಸ ನಿರ್ವಹಿಸುತ್ತಾ ಸರ್ಕಾರದ ಎಲ್ಲಾ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ದೊರೆಯುವಂತೆ ಮಾಡಿದ್ದಾರೆ ಇದರಲ್ಲಿ ಯಾವುದೇ ವೈಯಕ್ತಿಕ ಹಿತಾಸಕ್ತಿಯಿಲ್ಲ. ಸಮಾಜಮುಖಿಯಾಗಿ ಬಡವರಿಗೆ ನೆರವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿದ್ದರಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಿದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಮಾತನಾಡಿ ಸರಕಾರವು ಜನಪರ ಯೋಜನೆಗಳ ಅನುಷ್ಠಾನ ಮಾಡಲು ಸಮಿತಿಯನ್ನು ನೇಮಿಸಿದ್ದು ಕೂಡಲೇ ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಸಭೆ ಕರೆದು ಅಂಕಿಅಂಶಗಳನ್ನು ಸಂಗ್ರಹಿಸಿ ಪ್ರತಿಯೊಬ್ಬರನ್ನೂ ಯೋಜನೆಯ ಫಲಾನುಭವಿಗಳಾಗಿ ಮಾಡಲು ಕ್ರಮ ವಹಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಜಿಲ್ಲಾಧಿಕಾರಿ ಅಕ್ರಂ ಪಾಷ ಅಪರ ಜಿಲ್ಲಾಧಿಕಾರಿ ಮಂಗಳ, ತಹಶಿಲ್ದಾರ್ ಎಂ.ನಯನ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಮುಖಂಡರಾದ ಕೆ.ವಿ ಗೌತಮ್, ನಾಗನಾಳ ಸೋಮಣ್ಣ, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಷಂಷೀರ್, ಮಹಮ್ಮದ್ ಹನೀಫ್, ಗದ್ದೆಕಣ್ಣೂರು ದಯಾನಂದ್, ಮುರಳಿಗೌಡ, ಸೇರಿದಂತೆ ಸಮಿತಿ ಉಪಾಧ್ಯಕ್ಷರು ಸದಸ್ಯರು ಇದ್ದರು,

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 hour ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

4 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

6 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

19 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

22 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

1 day ago