ಗ್ಯಾಸ್ ಗೀಸರ್ ಅನಿಲ ಸೋರಿಕೆಯಿಂದ ಪತಿ ಸಾವು: ಪತಿಯ ಸಾವಿನ ಸುದ್ದಿ ಕೇಳಿದ ಪತ್ನಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣು: ನನ್ನ ಗಂಡನನ್ನ ಬಿಟ್ಟು ಒಂದು ನಿಮಿಷವೂ ನಾನು ಬದುಕಿರುವುದಿಲ್ಲ ಎಂದು ಉಲ್ಲೇಖ

ನೆಲಮಂಗಲದಲ್ಲೋಂದು ಹೃದಯ ವಿದ್ರಾವಕ‌ ಘಟನೆ ನಡೆದಿದೆ. ಗಂಡ ಸಾವಿನ ಬೆನ್ನಲ್ಲೆ ಮನನೊಂದು ಹೆಂಡತಿ‌ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಂಡ ರಾಜು, ಪತ್ನಿ ಮೀನಾ ಮೃತಪಟ್ಟ ದಂಪತಿ.

ಮೂಲತಃ ಕುಣಿಗಲ್ ನಿವಾಸಿಗಳಾದ ದಂಪತಿ 20 ವರ್ಷದ ಹಿಂದೆ ಮದುವೆಯಾಗಿ ನೆಲಮಂಗಲದ ಜಕ್ಕಸಂದ್ರದಲ್ಲಿ ಮನೆ ಲೀಸ್ ಪಡೆದು ವಾಸವಾಗಿದ್ದರು.

ಗಂಡನ ಶವದ ಮುಖ ಕೂಡ ನೋಡದೆ ಮನನೊಂದು ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿನ್ನೆ ಸಂಜೆ ಸ್ನಾನ ಮಾಡಲು ಬಾತ್ ರೂಂ ಗೆ ತೆರಳಿದ್ದ ಪತಿ ರಾಜು, ಈ ವೇಳೆ ಗ್ಯಾಸ್ ಗೀಸರ್ ಎಡವಟ್ಟಿನಿಂದ ಸಾವನ್ನಪ್ಪಿದ್ದ.

ಒಂದು ಗಂಟೆಯಾದ್ರೂ ಬಾತ್ ರೂಂ ನಿಂದ ಹೊರ ಬಾರದ ಹಿನ್ನೆಲೆ, ಮಗ ಡೋರ್ ಒಡೆದು ನೋಡಿದಾಗ ಕುಸಿದು ಬಿದ್ದಿದ್ದ. ಮಗ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದು ವೈದ್ಯರು ದೃಢಪಡಿಸಿದ್ದಾರೆ.

ಈ ಹಿನ್ನೆಲೆ ತಂದೆ ಸಾವನ್ನಪ್ಪಿರುವುದನ್ನ ತನ್ನ ತಾಯಿ‌ ಮೀನಾಗೆ ಮಗ ತಿಳಿಸಿದ್ದಾನೆ. ಆಗ ಮೃತನ ಹೆಂಡತಿ ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನನ್ನ ಗಂಡನನ್ನ ಬಿಟ್ಟು ಒಂದು ನಿಮಿಷವೂ ನಾನು ಬದುಕಿರುವುದಿಲ್ಲ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ.

ಡೆತ್ ನೋಟ್ನಲ್ಲಿ ಯಾರ್ಯಾರಿಗೆ ಏನೇನು ಕೊಡಬೇಕು ಅದೆಲ್ಲವನ್ನ ಕೊಟ್ಟುಬಿಡಿ, ನನ್ನ ಕ್ಷಮಿಸಿಬಿಡಿ ಎಂದು ಉಲ್ಲೇಖಿಸಿದ್ದಾರೆ.

ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

ಗಂಡ ಹೆಂಡತಿ ಮೃತ ದೇಹ ನೆಲಮಂಗಲ ಸರ್ಕಾರಿ ಶವಗಾರದಲ್ಲಿ ದಲ್ಲಿ ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದ್ದು, ಈ ವೇಳೆ ದಂಪತಿಗಳ ಮೃತ ದೇಹದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

4 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

6 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

9 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

21 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

1 day ago