ಗ್ರಂಥಾಲಯಗಳಿಗೆ ಕಂಪ್ಯೂಟರ್, ಪ್ರಿಂಟರ್, ಇಂಟರ್ ನೆಟ್ ಸೇವೆ ಒದಗಿಸಲು ಕ್ರಮ- ಶಾಸಕ ಧೀರಜ್‌ಮುನಿರಾಜ್

ಗ್ರಾಮೀಣ ಭಾಗದ 28 ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಇರುವ ಗ್ರಂಥಾಲಯಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಜೊತೆಗೆ, ವಿವಿಧ ಯೋಜನೆಗಳಡಿಯಲ್ಲಿ ಎಲ್ಲಾ ಗ್ರಂಥಾಲಯಗಳಿಗೆ ಕಂಪ್ಯೂಟರ್‌, ಪ್ರಿಂಟರ್ ಗಳು ಮತ್ತು ಇಂಟರ್ ನೆಟ್ ವ್ಯವಸ್ಥೆ ಕಲ್ಪಿಸುವುದಕ್ಕೆ ಕ್ರಮವಹಿಸಲಾಗುವುದೆಂದು ಶಾಸಕ ಧೀರಜ್‌ಮುನಿರಾಜ್ ಹೇಳಿದರು.

ತಾಲ್ಲೂಕು ಪಂಚಾಯಿತಿ ವತಿಯಿಂದ ನಗರದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಯುವ ಜನತೆ ನಡೆ ಗ್ರಾಮೀಣ ಗ್ರಂಥಾಲಯಗಳ ಕಡೆ ಕಾರ್ಯಕ್ರಮಕ್ಕೆ ಶಾಸಕ ಧೀರಜ್ ಮುನಿರಾಜು ಚಾಲನೆ ನೀಡಿ, ಮಾತನಾಡಿದ ಅವರು, ತಾಲ್ಲೂಕು ಪಂಚಾಯಿತಿ ವತಿಯಿಂದ ಐ.ಎ.ಎಸ್, ಕೆ.ಎ.ಎಸ್, ಪಿ.ಎಸ್.ಐ, ಪಿ.ಡಿ.ಓ ಒಳಗೊಂಡು ಸ್ಪರ್ದಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಒದಗಿಸುತ್ತಿದ್ದು, ಮುಂದಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಅಭ್ಯರ್ಥಿಗಳು ಆಯ್ಕೆಯಾಗುವಂತೆ ಗ್ರಂಥಾಲಯದ ಮೇಲ್ವಿಚಾರಕರಿಗೆ ಅಗತ್ಯ ಕ್ರಮವಹಿಸಲು ಕರೆ ನೀಡಿದರು.

ಉತ್ತಮ ಮಾಹಿತಿಯುಳ್ಳ ಪುಸ್ತಕಗಳನ್ನು ಎಲ್ಲಾ 28 ಗ್ರಾಮಪಂಚಾಯಿತಿಗಳಿಗೆ ಹಸ್ತಾಂತರ ಮಾಡುತ್ತಿದೆ. ಅಗತ್ಯವುಳ್ಳ ನಿರುದ್ಯೋಗಿ, ವಿದ್ಯಾರ್ಥಿ, ಎಲ್ಲಾ ಸ್ಥರದ ಯುವ ಜನತೆಗೆ ಪುಸ್ತಕಗಳು ದೊರೆಯುವಂತೆ ಗ್ರಂಥಾಲಯದ ಮೇಲ್ವಿಚಾರಕರು ಕಾರ್ಯನಿರ್ವಾಹಿಸಬೇಕಾಗಿದೆ ಎಂದರು.

ಗ್ರಾಮೀಣ ಭಾಗದ ವಿಶೇಷ ಚೇತನರನ್ನು ಸಹ ಗ್ರಂಥಾಲಯಗಳ ಕಡೆ ಸೆಳೆಯುವ ನಿಟ್ಟಿನಲ್ಲಿ ಈಗಾಗಲೇ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬೀಕನ್ ಗ್ರಂಥಾಲಯ ಪ್ರಾರಂಭಿಸಿದ್ದು, ಇದೇ ಮಾದರಿಯಲ್ಲಿ ಎಲ್ಲಾ ಗ್ರಂಥಾಲಯಗಳನ್ನು ವಿಶೇಷಚೇತನರ ಸ್ನೇಹಿ ಗ್ರಂಥಾಲಯಗಳು ಮಾಡಲು ಅನುಕೂಲವಾಗುವಂತೆ ಆಡಿಯೋ ಸಾಮಗ್ರಿ, ಬ್ರೈಲ್ ಲಿಪಿ ಸಾಮಗ್ರಿಗಳನ್ನು ಒದಗಿಸಲು ಕ್ರಮವಹಿಸಲಾಗುತ್ತಿದೆ ಎಂದರು.

ಈ ವೇಳೆ ಎಲ್ಲಾ 28 ಗ್ರಾಮ ಪಂಚಾಯಿತಿಗಳಿಗೆ ಸ್ಪರ್ಧಾತ್ಮಕಪರೀಕ್ಷೆ ಸಂಬಂಧಿತ ಪುಸ್ತಕಗಳು, ಆರ್.ಓ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಗಳು ಮತ್ತು ಗ್ರಂಥಾಲಯಗಳಿಗೆ ವೀಲ್ ಚೇರ್ ಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಸಹಾಯಕ ನಿರ್ದೇಶಕ ಕುಮಾರ್, ವ್ಯವಸ್ಥಾಪಕ ವೆಂಕಟೇಶ್, ಮನೋಜ್, ಚಂದ್ರಶೇಖರ್ ಮತ್ತಿತರರಿದ್ದರು.

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

3 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

4 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

4 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

8 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

19 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

20 hours ago