Categories: ಕೋಲಾರ

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ, ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಸಿಐಟಿಯು ನೇತೃತ್ವದ ಗ್ರಾಪಂ ನೌಕರರ ಸಂಘವು ನಗರದ ಜಿಲ್ಲಾ ಪಂಚಾಯತಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಅಧಿಕಾರಿಗಳು ಗ್ರಾಪಂ ನೌಕರರನ್ನು ಹೀನಾಯವಾಗಿ ನೋಡಿಕೊಳ್ಳುತ್ತಾರೆ ಕೆಲಸ ಮಾಡಲಿಕ್ಕೆ ನೌಕರರು ಬೇಕು ಸಂಬಳ ಮಾತ್ರ ಕೇಳಬಾರದು ಅಂತ ಪರಿಸ್ಥಿತಿಯಲ್ಲಿ ಇದ್ದು ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗ್ರಾಮ ಪಂಚಾಯತಿ ನೌಕರರು ಎಂದು ಪರಿಗಣಿಸುವ ಬಿಲ್‌ ಕಲೆಕ್ಟರ್, ನೀರಗಂಟಿ, ಕಂಪ್ಯೂಟರ್ ಆಪರೇಟ‌ರ್, ಜವಾನ, ಕ್ಲರ್ಕ್‌ಗಳಿಗೆ ಕನಿಷ್ಠ 31 ಸಾವಿರ ರೂ. ವೇತನ ನಿಗದಿಗೊಳಿಸಲು ಒತ್ತಾಯಿಸಿ 2022 ರಿಂದ ಪ್ರತಿಭಟನೆ ನಡೆಸಿದರೂ ಬೇಡಿಕೆ ಈಡೇರಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ, ಇಲಾಖಾ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ನೀಡಿದ್ದ ಭರವಸೆಗಳು ಜಾರಿಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಿವೃತ್ತ ನೌಕರರಿಗೆ ವರ್ಷಕ್ಕೆ 15 ದಿನಗಳ ವೇತನ ಆಧರಿಸಿ ಪಿಂಚಣಿ ನೀಡಬೇಕು. ಕನಿಷ್ಠ ಆರು ಸಾವಿರ ರೂ.ಗಳ ಪಿಂಚಣಿ ನೀಡಬೇಕಿದ್ದರೂ ಕೈಗೆ ನಿಲುಕಿಲ್ಲ. ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್, ಗ್ರೇಡ್-2 ಕಾರ್ಯದರ್ಶಿ ಇತರೆ ಹುದ್ದೆಗಳಿಗೆ ಬಡ್ತಿ ಅವಕಾಶ ಇದೆ. ಆದರೆ, ಅನೇಕ ಗ್ರಾಪಂಗಳು ಮೇಲ್ದರ್ಜೆಗೇರದ್ದರಿಂದ ಹಿನ್ನಡೆಯಾಗಿದೆ. 5626 ಗ್ರಾಮ ಪಂಚಾಯತ್‌ಗಳಲ್ಲಿ 1500 ಮಾತ್ರ ಮೇಲ್ದರ್ಜೆಗೇರಿವೆ. ಅರ್ಹ ಗ್ರಾಪಂಗಳನ್ನು ಮೇಲ್ದರ್ಜೆಗೇರಿಸುವ ಮೂಲಕ ಪದೋನ್ನತಿಗೆ ದಾರಿ ಮಾಡಬೇಕೆಂದು ಒತ್ತಾಯಿಸಿದರು.

ಈ ಪ್ರತಿಭಟನೆಯ ನೇತೃತ್ವವನ್ನು ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅಮರನಾರಾಯಣ, ಖಜಾಂಚಿ ಕೇಶವರಾವ್, ವಿವಿಧ ತಾಲೂಕುಗಳ ಪದಾಧಿಕಾರಿಗಳಾದ ಮೋಹನ್, ತ್ಯಾಗರಾಜ್, ರಾಣಿ, ರಾಮಕೃಷ್ಣಪ್ಪ, ಸುಬ್ರಮಣಿ, ಜೈಶಂಕರಪ್ಪ, ಚಂದ್ರಪ್ಪ, ನಾರಾಯಣಸ್ವಾಮಿ, ಶ್ರೀನಿವಾಸ್, ಶಿವರಾಜ್, ಮುನಿವೆಂಕಟಪ್ಪ, ರಾಮೇಗೌಡ,ಮುಂತಾದವರು ವಹಿಸಿದ್ದರು.

Ramesh Babu

Journalist

Recent Posts

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

9 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

18 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

20 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

21 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

2 days ago