Categories: ಕೋಲಾರ

ಗ್ರಾಮಕ್ಕೊಂದು ಎಂಪಿಸಿಎಸ್, 3 ಗ್ರಾಮಗಳಿಗೊಂದು ಎಸ್‌ಎಫ್‌ಸಿಎಸ್ ಸ್ಥಾಪನೆಗೆ ಚಿಂತನೆ- ರೈತರ ಸ್ವಾವಲಂಬನೆ ಸಹಕಾರ ರಂಗದಿಂದ ಮಾತ್ರವೇ ಸಾಧ್ಯ – ಶಾಸಕ ಕೊತ್ತೂರು ಮಂಜುನಾಥ್

ಕೋಲಾರ:- ರೈತರು,ಮಹಿಳೆಯರ ಸ್ವಾವಲಂಬನೆ ಸಹಕಾರ ರಂಗದಿಂದ ಮಾತ್ರ ಸಾಧ್ಯವಿದ್ದು, ಪ್ರತಿ ಗ್ರಾಮದಲ್ಲೂ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಮೂರು ಹಳ್ಳಿಗಳಿಗೊಂದು ರೈತರ ಹಾಗೂ ರೇಷ್ಮೆಬೆಳೆಗಾರರ ಸಹಕಾರ ಸಂಘ ಸ್ಥಾಪಿಸುವ ಅಗತ್ಯವಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೋಲಾರ ಜಿಲ್ಲಾ ಸಹಕಾರ ಒಕ್ಕೂಟ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ,ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸಹಕಾರ ಸಂಸ್ಥೆಗಳ ನಡುವೆ ಸಹಕಾರವನ್ನು ಬಲಪಡಿಸುವುದು ವಿಷಯದಡಿ ನಡೆದ ಸಹಕಾರ ಸಪ್ತಾಹದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕೋವಿಡ್ ಬಂದಾಗ ಬದುಕು ಕಟ್ಟಿಕೊಳ್ಳುವುದೇ ಕಷ್ಟವಾಗಿತ್ತು, ಇಂತಹ ಸಂದರ್ಭದಲ್ಲಿ ರೈತರನ್ನು ಉಳಿಸಿದ್ದೇ ಹೈನುಗಾರಿಕೆ ಎಂದ ಅವರು, ರೈತರಿಗಾಗಿಯೇ ಸಹಕಾರಿ ಸಂಸ್ಥೆಗಳನ್ನು ಕಟ್ಟಲಾಗಿದೆ ಎಂದು ತಿಳಿಸಿದರು.

ಸಹಕರ ರತ್ನ ಪ್ರಶಸ್ತಿ ಸಿಕ್ಕಿದ್ದಕ್ಕೆ ಸಂತಸವಿದೆ ಎಂದ ಅವರು, ನಷ್ಟದಲ್ಲಿದ್ದ ಮುಳಬಾಗಿಲು ತಾಲ್ಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘ ಟಿಎಪಿಸಿಎಂಎಸ್ ದುಸ್ಥಿತಿ ಸರಿಪಡಿಸಲು ಪಕ್ಷಬೇಧ ಮರೆತು ಎಲ್ಲರೂ ನನ್ನನ್ನು ಅಧ್ಯಕ್ಷರನ್ನಾಗಿ ಮಾಡಿದ್ದನ್ನು ಸ್ಮರಿಸಿದ ಅವರು, ಈ ಸಂಸ್ಥೆ ಮೂಲಕ ಗೊಬ್ಬರ,ಪಡಿತರ ಮಾರಾಟ ನಡೆಸುತ್ತಿದ್ದು, ಇದ್ನು ಉಳಿಸಿದ ಆತ್ಮತೃಪ್ತಿ ಇದೆ, 30 ಸಾವಿರ ಇದ್ದ ವಹಿವಾಟು ಇಂದು 2 ಲಕ್ಷ ದಾಟಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಯೂರಿಯಾ ಒಂದುಮೂಟೆಗೆ 1200ರೂ. ಸಬ್ಸಿಡಿ ನೀಡುತ್ತಿದೆ, ಡಿಎಪಿ ಗೊಬ್ಬರಕ್ಕೆ 1200 ರೂ. ನೀಡುತ್ತಿದೆ ಎಂದ ಅವರು, ರೈತರ ಅಭ್ಯುದಯದಿಂದ ಮಾತ್ರವೇ ದೇಶ ಉಳಿಯಲು ಸಾಧ್ಯ ಎಂದು ತಿಳಿಸಿ, ಸಹಕಾರ ರಂಗ ಪಡಿತರ ಮಾರಾಟಕ್ಕೆ ಸೀಮಿತವಾಗದೇ ಶಾಲೆ,ವಾಹನ,ಆಸ್ಪತ್ರೆ ಎಲ್ಲವನ್ನು ಮಾಡಬಹುದು, ಆದರೆ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಇಲ್ಲವಾಗಿರುವುದು ವಿಷಾದದ ಸಂಗತಿ ಎಂದು ತಿಳಿಸಿ ಸಹಕಾರ ಕ್ಷೇತ್ರದಲ್ಲಿ ಮಾಜಿ ಸಚಿವ ಕೆ.ಶ್ರೀನಿವಾಸಗೌಡರ ಸಾಧನೆಯನ್ನು ಸ್ಮರಿಸಿದರು.

ವಿಧಾನಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ,ಸಹಕಾರ ಸಚಿವ ರಾಜಣ್ಣ ಸೇರಿ ಸಹಕಾರಿ ಕಾಯಿದೆ ತಿದ್ದುಪಡಿ ಈ ರಂಗವನ್ನು ಬಲಗೊಳಿಸುವ ಯತ್ನ ನಡೆಸಿದ್ದಾರೆ. ಈ ಹೊಸಕಾಯಿದೆ ಜಾರಿಯಾದರೆ 3 ವರ್ಷಗಳಿಗೊಮ್ಮೆ ಚುನಾವಣೆ,ಜಿಲ್ಲಾ,ರಾಜ್ಯ ಹಂತದಲ್ಲಿ ಮೀಸಲು ಸೌಲಭ್ಯ,ಎಲ್ಲಾ ವರ್ಗಗಳಿಗೂ ಅಧ್ಯಕ್ಷರಾಗುವ ಅವಕಾಶ,ನಾಮಿನಿ ಸದಸ್ಯರಿಗೆ ಅಧ್ಯಕ್ಷರಾಗಲು ಅವಕಾಶ ಇಲ್ಲವಾಗುತ್ತದೆ ಎಂದು ತಿಳಿಸಿದರು.

ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಛಾಪು ಮೂಡಿಸಿರುವ ಕೆ.ಶ್ರೀನಿವಾಸಗೌಡರ ನಂತರ ಅವರು ಅಭಿವೃದ್ದಿಪಡಿಸಿದ ಸಹಕಾರಿ ತೇರನ್ನು ಶಾಸಕ ಕೊತ್ತೂರು ಮಂಜುನಾಥ್ ಮುಂದುವರೆಸಲಿ ಎಂದು ಆಶಿಸಿದರು.

ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ,ಭ್ರಷ್ಟಾಚಾರ ಮುಕ್ತ ಸಹಕಾರಿ ವ್ಯವಸ್ಥೆ ನಿರ್ಮಾಣ ಇಂದಿನ ಅಗತ್ಯವಾಗಿದೆ, ಈ ಕ್ಷೇತ್ರದಲ್ಲಿ ಶ್ರೀನಿವಾಸಗೌಡರು ಮಾಡಿದ ಸಾಧನೆ ಮರೆಯಲು ಸಾಧ್ಯವಿಲ್ಲ, ನೇರವಾಗಿ ರೈತರು,ಮಹಿಳೆಯರಿಗೆ ನೆರವಾಗಲು ಈ ಕ್ಷೇತ್ರದಿಂದ ಮಾತ್ರವೇ ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹಕಾರಿ ಯೂನಿಯನ್ ಅಧ್ಯಕ್ಷ ಪಾಕರಹಳ್ಳಿ ವೆಂಕಟೇಶ್, ನಗರದ ಇಟಿಸಿಎಂ ಆಸ್ಪತ್ರೆ ಮುಂಭಾಗ ಇರುವ ಸಹಕಾರಿ ಯೂನಿಯನ್ ನಿವೇಶನ ರಕ್ಷಣೆಗೆ ಕಾಂಪೌಂಡ್ ನಿರ್ಮಿಸಿಕೊಡಲು ಶಾಸಕರಿಗೆ ಮನವಿ ಮಾಡಿದಾಗ ಕೊತ್ತೂರು ಮಂಜುನಾಥ್ ಈ ಕೆಲಸ ಮಾಡಿಕೊಡುವ ಭರವಸೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ಮಾತನಾಡಿ, ವಿಕಸಿದ ಭಾರತ ಧ್ಯೇಯದ ಸಹಕಾರಿ ಸಪ್ತಾಹದ ಧ್ಯೇಯ ವಿಕಸಿತ ಕೋಲಾರವೂ ಆಗಿರಲಿ ಎಂದು ತಿಳಿಸಿ, ಜಿಲ್ಲೆಯ ಸಹಕಾರಿ ಕ್ಷೇತ್ರದ ಎರಡು ಕಣ್ಣುಗಳಾಗಿರುವ ಡಿಸಿಸಿ ಬ್ಯಾಂಕ್, ಕೋಚಿಮುಲ್ ಇತ್ತೀಚಿನ ದಿನಗಳಲ್ಲಿ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವುದು ವಿಷಾದದ ಸಂಗತಿ ಎಂದು ತಿಳಿಸಿ, ಅದರ ತಾಯಂತಿರುವ ಸಹಕಾರಿ ಯೂನಿಯನ್ ಇದನ್ನು ಸರಿಪಡಿಸುವಪ್ರಯತ್ನ ನಡೆಸಲಿ ಎಂದು ಆಶಿಸಿ, ಕೋಲಾರ ಪತ್ರಕರ್ತರ ಸಹಕಾರ ಸಂಘ ಈಗಾಗಲೇ 50 ಸಾವಿರ ರೂ ಸಾಲ ಸೌಲಭ್ಯ ಒದಗಿಸುತ್ತಿದ್ದು,ಶೇ. 95 ವಸೂಲಾತಿ ಇದೆ, ಈ ನಿಟ್ಟಿನಲ್ಲಿ ಸಂಘದ ಸದಸ್ಯರಿಗೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಸಹಕಾರ ಕೋರಿದರು.

ಕಾರ್ಯಕ್ರಮದಲ್ಲಿ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾದ ಶಾಸಕ ಕೊತ್ತೂರು ಮಂಜುನಾಥ್‌ರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಯೂನಿಯನ್ ಉಪಾಧ್ಯಕ್ಷ ಕಲ್ವಮಂಜಲಿ ಬೈರೇಗೌಡ, ಮಾಜಿ ಅಧ್ಯಕ್ಷರುಗಳಾದ ಮೂರಾಂಡಹಳ್ಳಿ ಡಾ.ಇ.ಗೋಪಾಲಪ್ಪ, ಪೆಮ್ಮಶೆಟ್ಟಿಹಳ್ಳಿ ಸುರೇಶ್, ನಿರ್ದೇಶಕರಾದ ಚಂಜಿಮಲೆ ರಮೇಶ್, ಕೆ.ಎಂ.ಮಂಜುನಾಥ್, ಪತ್ರಕರ್ತ ಸಹಕಾರ ಸಂಘದ ಉಪಾಧ್ಯಕ್ಷ ಅಬ್ಬಣಿ ಶಂಕರ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಗ್ಯಾರೆಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಶಿವಕುಮಾರ್, ನರಸಾಪುರ ಎಸ್‌ಎಫ್‌ಸಿಎಸ್ ಅಧ್ಯಕ್ಷ ಮುನಿರಾಜು, ಯೂನಿಯನ್ ಸಿಇಒ ಕೆ.ಎಂ.ಭಾರತಿ, ಸಿಬ್ಬಂದಿ ಲಕ್ಷ್ಮೀ ರವಿ ಮತ್ತಿತರರಿದ್ದರು.

Ramesh Babu

Journalist

Recent Posts

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

3 hours ago

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

8 hours ago

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

8 hours ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

18 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

18 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

19 hours ago