ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸಿಲ್ಲವೆಂದು ಪಿಡಿಒ ವಿರುದ್ಧ ಸಿಡಿದೆದ್ದ ಗ್ರಾ.ಪಂ ಸದಸ್ಯರು

ಕನಸವಾಡಿ ಗ್ರಾಮ ಪಂಚಾಯಿತಿ ವ್ತಾಪ್ತಿಯ ಕನಸವಾಡಿ, ಮಾರಸಂದ್ರ, ಕನ್ನಮಂಗಲ ಸೇರಿದಂತೆ ಇತರೆ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಫಲರಾಗಿದ್ದಾರೆ ಎಂದು ಕನಸವಾಡಿ ಗ್ರಾಮ ಪಂಚಾಯಿತಿ ಸದಸ್ಯ ಟಿ.ವಿಜಯಕುಮಾರ್ ಅವರು ಆರೋಪಿಸಿದ್ದಾರೆ.

ಕನಸವಾಡಿ ಗ್ರಾಮಪಂಚಾಯಿತಿ ಎದುರು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಕುಡಿಯುವ ನೀರಿನ ಸಮಸ್ಯೆ, ಚರಂಡಿ ದುರಸ್ತಿ, ಚರಂಡಿ ಸ್ವಚ್ಛತೆ, ರಸ್ತೆ ದುರಸ್ತಿ, ಸ್ವಚ್ಛತೆ ಸೇರಿದಂತೆ ಇನ್ನಿತರೆ ಸೌಕರ್ಯಗಳು ಇಲ್ಲವೆಂದು ಊರಿನ‌ ಗ್ರಾಮಸ್ಥರು ನಮನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಿಡಿಒ ನಿರ್ಲಕ್ಷ್ಯದಿಂದ ಗ್ರಾಮಸ್ಥರ ಕೆಂಗಣ್ಣಿಗೆ ನಾವು ಗುರಿಯಾಗಿದ್ದೇವೆ. ಗ್ರಾಮಸ್ಥರಿಗೆ ಏನು ಉತ್ತರ ಕೊಡುವುದಕ್ಕೆ ಆಗದೇ ಇಲ್ಲಿ ಬಂದು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ನಂತರ ಸದಸ್ಯೆ ಕೆ.ಪಿ.ಶೋಭಾ ಮಾತನಾಡಿ, ನಮ್ಮ ಗ್ರಾಮಕ್ಕೆ ಸೂಕ್ತ ಸವಲತ್ತು ಒದಗಿಸಿ ಎಂದು ಹಲವು ಬಾರಿ ಪಿಡಿಒ ಅವರಿಗೆ ಮನವಿ ಮಾಡಿದ್ದೇವೆ. ನಮ್ಮ ಮನವಿಗೆ ಸ್ಪಂದಿಸದೇ ಪಿಡಿಒ ಅವರು ನಿರ್ಲಕ್ಚ್ಯವಹಿಸುತ್ತಿದ್ದಾರೆ. ಇವರಿಂದ ನಾವು ಊರಲ್ಲಿ ಪಂಚಾಯಿತಿ ಸದಸ್ಯರಾಗಿ ತಲೆ ಎತ್ತಿ ತಿರುಗಾಡಲು ಆಗುತ್ತಿಲ್ಲ. ಕೂಡಲೇ ನಮ್ಮ ಮನವಿಗೆ ಸ್ಪಂದಿಸಿ ಗ್ರಾಮಕ್ಕೆ ಸವಲತ್ತುಗಳನ್ನು ಒದಗಿಸಿಕೊಡಬೇಕು ಎಂದು ಮನವಿ‌ ಮಾಡುತ್ತಿದ್ದೇವೆ ಎಂದರು.

ನಂತರ ಪಿಡಿಒ ಎಲ್.ರಾಮಯ್ಯ ಮಾತನಾಡಿ, ಸದಸ್ಯರ ಆರೋಪ ಸತ್ಯಕ್ಕೆ ದೂರವಾದ ಮಾತು. ಕನಸವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಮೂಲಭೂತ ಸೌಕರ್ಯಗಳನ್ನು ಸಮನಾವಾಗಿ ನೀಡಲಾಗುತ್ತಿದೆ. ಗ್ರಾಮಸ್ಥರಿಂದ ಯಾವುದೇ ರೀತಿಯ ಸಮಸ್ಯೆಗೆ ಸಂಬಂಧಿಸಿದ ದೂರ ಬಂದಲ್ಲಿ ಖುದ್ದಾಗಿ ನಾನೇ ಭೇಟಿ ನೀಡಿ ಪರಿಶೀಲನೆ ಮಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದರು.

ಈ ವೇಳೆ ಉಪಾಧ್ಯಕ್ಷ ಕೃಷ್ಣಮೂರ್ತಿ, ಸದಸ್ಯರಾದ ರಂಗನಾಥ್, ಕೆ.ಬಿ. ಶ್ರೀನಿವಾಸ್, ಕೆ.ವಿ.ಶ್ರೀಕಾಂತ್, ಮಾಜಿ ಗ್ರಾ.ಪಂ ಸದಸ್ಯ ವೆಂಕಟಮಣಯ್ಯ‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗೋಮಾಳ ಭೂಮಿಯಲ್ಲಿನ ರೈತರನ್ನು ಒಕ್ಕಲೆಬ್ಬಿಸದಂತೆ ಜಿಲ್ಲಾಧಿಕಾರಿಗೆ ಮನವಿ

ಕೋಲಾರ: ಮೈಸೂರು ಮಹಾರಾಜರ ಕಾಲದಿಂದಲೂ ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ರೈತರಿಗೆ ಹಂಚಿಕೆಯಾಗಿರುವ ಸರ್ಕಾರಿ ಗೋಮಾಳ ಹಾಗೂ ಕಂದಾಯ ಭೂಮಿಯಲ್ಲಿನ ರೈತರನ್ನು…

2 hours ago

ವೈಯಕ್ತಿಕ ವಿಚಾರಕ್ಕೆ ಸಿಎಂ ಭೇಟಿ; ತಾಲೂಕಿನ ಹಿತರಕ್ಷಣೆಗಲ್ಲ? ವೆಂಕಟರಮಣಯ್ಯ ವಿರುದ್ಧ ಕಾಡನೂರು ಗ್ರಾ.ಪಂ ಮಾಜಿ ಅಧ್ಯಕ್ಷ ಮನು ಎನ್ ಆರ್ ಆರೋಪ

ದೊಡ್ಡಬಳ್ಳಾಪುರ: ಅಳಿಯನ ವರ್ಗಾವಣೆ ಸೇರಿದಂತೆ ವೈಯಕ್ತಿಕ ವಿಚಾರಗಳಿಗಾಗಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು…

4 hours ago

ಬರ ಘೋಷಣೆ ಬಳಿಕ ಸಿಎಂಗೆ ಮನವಿ: ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನಡೆಗೆ ನಗರಸಭೆ ಉಪಾಧ್ಯಕ್ಷ ಬಂತಿ ವೆಂಕಟೇಶ್ ತರಾಟೆ

ದೊಡ್ಡಬಳ್ಳಾಪುರ: 2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಮರು ಜಂಟಿ ಬೆಳೆ…

7 hours ago

ದೊಡ್ಡಬಳ್ಳಾಪುರ ಬರ ಘೋಷಣೆಗೆ ಕ್ರೆಡಿಟ್ ಫೈಟ್: ಸರ್ಕಾರ ಈಗಾಗಲೇ ಬರ ಘೋಷಿಸಿದೆ; ಮತ್ತೆ ಮನವಿ ಏಕೆ?: ವೆಂಕಟರಮಣಯ್ಯಗೆ ನಗರಸಭೆ ಉಪಾಧ್ಯಕ್ಷ ಬಂತಿ ವೆಂಕಟೇಶ್ ತಿರುಗೇಟು

ದೊಡ್ಡಬಳ್ಳಾಪುರ: 2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಮರು ಜಂಟಿ ಬೆಳೆ…

7 hours ago

ದೇವನಹಳ್ಳಿ–ದೊಡ್ಡಬಳ್ಳಾಪುರದ ಹಲವು ಗ್ರಾಮಗಳ ಮೇಲೆ KIADB ಕಣ್ಣು: ಕೃಷಿ ಭೂಮಿ ಉಳಿಸಿಕೊಳ್ಳಲು ಮತ್ತೆ ಹೋರಾಟದ ಸದ್ದು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಕೃಷಿ ಭೂಮಿಯ ಮೇಲೆ ಮತ್ತೊಮ್ಮೆ ಭೂಸ್ವಾಧೀನದ ಆತಂಕ ಆವರಿಸಿದೆ. ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕುಗಳ ವ್ಯಾಪ್ತಿಯಲ್ಲಿ…

9 hours ago

ಶಾಸಕ ಧೀರಜ್ ವಿರುದ್ಧ ವೈಯಕ್ತಿಕ ಟೀಕೆ ಸಲ್ಲದು: ಮಾಜಿ ಶಾಸಕರು ಹಾಗೂ ಬೆಂಬಲಿಗರ ಹೇಳಿಕೆಗಳಿಗೆ ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾಶಿವಶಂಕರ್ ಆಕ್ಷೇಪ

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕರು ಹಾಗೂ ಅವರ ಬೆಂಬಲಿಗರು ವೈಯಕ್ತಿಕ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು…

1 day ago