ಗ್ರಾಮಗಳ ಸಮಸ್ಯೆಗಳಿಗೆ ಸ್ಪಂದಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧ- ಹಾಡೋನಹಳ್ಳಿ ಗ್ರಾ.ಪಂ ಅಧ್ಯಕ್ಷ ನಾಗರಾಜು

ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನ ಒದಗಿಸಿ ಅಭಿವೃದ್ಧಿಗೊಳಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧವಾಗಿರುತ್ತದೆ ಎಂದು ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ.ನಾಗರಾಜು ಹೇಳಿದರು.

ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯಿತಿ ವತಿಯಿಂದ ನಡೆದ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು ಅವರು, ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯ ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದರು.

ಹಾಡೋನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನ ಗುರುತಿಸಿ ಪಟ್ಟಿ ಮಾಡಲಾಗಿದೆ, ಆ ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಲು ಪ್ರಯತ್ನ ಮಾಡಲಾಗುವುದು ಎಂದರು.

ಸಭೆಯಲ್ಲಿ ಆಯಾ ಗ್ರಾಮಗಳ ಗ್ರಾಮಸ್ಥರಿಂದ ಸಾಕಷ್ಟು ಸಮಸ್ಯೆಗಳ ದೂರುಗಳು ಕೇಳಿಬಂದಿದ್ದು, ಎಲ್ಲಾ ದೂರಗಳನ್ನು ಆಲಿಸಿದ್ದೇವೆ ಕೂಡಲೇ ಸಂಬಂಧಿಸಿದ ಇಲಾಖೆಗಳಿಗೆ ಪತ್ರಮುಖೇನ ರವಾನಿಸಿ ಆದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಹೇಳಿದರು.

ಗ್ರಾಮ ಪಂಚಾಯಿತಿಯಡಿಯಲ್ಲಿ ಬರುವ ಸವಲತ್ತು ಪಡೆಯಲು ಸೂಕ್ತ ದಾಖಲಾತಿಗಳನ್ನು ಒದಗಿಸಿದರೆ ಖಂಡಿತವಾಗಿಯೂ ಸವಲತ್ತು ಸಿಗುತ್ತದೆ. ಆದ್ದರಿಂದ ಅಗತ್ಯ ದಾಖಲೆಗಳನ್ನು ಕೊಟ್ಟು ಪಂಚಾಯಿತಿಯ ಸಿಬ್ಬಂದಿಗೆ ಸಹಕರಿಸಿ, ನಿಮ್ಮ ಕೆಲಸಗಳು ಯಾವುದೇ ಕಾರಣಕ್ಕೂ ವಿಳಂಬವಾಗುವುದಿಲ್ಲ ಎಂದರು.

ದುರ್ಗೇನಹಳ್ಳಿ ಸೇರಿದಂತೆ ಕೆಲವೊಂದು ಹಳ್ಳಿಗಳಲ್ಲಿ  ಚರಂಡಿ ಸಮಸ್ಯೆ ಕಾಡುತ್ತಿದ್ದು, ಇದನ್ನು ಪರಿಹರಿಸಲು ನರೇಗಾದ ಮೂಲಕ ಚರಂಡಿ ಕಾಮಗಾರಿಯನ್ನು  ಮಾಡಬೇಕಾಗುತ್ತದೆ. ಆದರೆ, ನರೇಗಾ ಮೂಲಕ ಕಾಮಗಾರಿ ಕೈಗೊಳ್ಳಲು ಯಾವೊಬ್ಬ ಗುತ್ತಿಗೆದಾರರು ಮುಂದೆ ಬರುತ್ತಿಲ್ಲ. ಇದನ್ನು ಅಧಿಕಾರಗಳೊಂದಿಗೆ ಚರ್ಚಿಸಿ  ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಸ್ವಚ್ಛವಾಹಿನಿಗೆ ಅಗತ್ಯವಾದ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಸಂಪನ್ಮೂಲದ ಕೊರೆತೆ ಉಂಟಾಗಿದ್ದು, ಈ ಬಗ್ಗೆ  ಜಿಲ್ಲಾ ಪಂಚಾಯಿತಿಗೆ ಪತ್ರ ಬರೆಯಲಾಗಿದೆ.  ಈ ಬಗ್ಗೆ ಕೂಡಲೇ ಕ್ರಮವಹಿಸಲಾಗುವಿದು ಎಂದು  ಭರವಸೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.

ಈ ವೇಳೆ ನರೇಗಾ, ಅರಣ್ಯಇಲಾಖೆ, ಕೃಷಿ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಅನುಕೂಲ ಪಡೆದುಕೊಳ್ಳುಲು ಅಧಿಕಾರಿಗಳು  ಮಾಹಿತಿಯನ್ನು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಗ್ರಾಮ ಸಭೆಯಲ್ಲಿ ತಾಲೂಕು ಯೋಜನಾಧಿಕಾರಿ ರಾಮಾಂಜನೇಯ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರಮ್ಯಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಭಾಗ್ಯಮ್ಮ, ನೋಡಲ್ ಅಧಿಕಾರಿ ರೇಷ್ಮೆ ಇಲಾಖೆಯ ಗಿರಿಜಾಂಬಾ, ಹಾಡೋನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಆರ್.ಮುದ್ದುಕೃಷ್ಣಪ್ಪ, ಎಚ್.ನಾರಾಯಣಪ್ಪ, ಹಾಪ್ ಕಾಮ್ಸ್ ನಿರ್ದೇಶಕ ಕದ್ರಪ್ಪ, ಗ್ರಾಮ ಪಂಚಾಯತಿ ಸದಸ್ಯ ಮುನಿರಾಜು, ಪರಮೇಶ್, ಚಿಕ್ಕ ಕದ್ರಪ್ಪ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಜರಿದ್ದರು

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

5 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

18 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

19 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

21 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

22 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

24 hours ago