ಗ್ರಾಮದ ಒಳಿತಿಗಾಗಿ ವಿಚಿತ್ರ ಆಚರಣೆ: ಗ್ರಾಮಸ್ಥರೆಲ್ಲಾ ಸೇರಿ ಗಂಟು‌ಮೂಟೆ ಕಟ್ಟಿಕೊಂಡು ಊರಿಂದಾಚೆ ವಾಸ್ತವ್ಯ

ಊರಿನ ಒಳಿತಿಗಾಗಿ ಒಂದು ದಿನ ಊರಿನ‌ ಎಲ್ಲಾ ಗ್ರಾಮಸ್ಥರು ಗಂಟು‌ಮೂಟೆ ಕಟ್ಟಿಕೊಂಡು ಊರು ಬಿಡುವ ಆಚರಣೆ ದೊಡ್ಡಬಳ್ಳಾಪುರ ತಾಲೂಕು ಸಾಸಲು ಹೋಬಳಿ ಹೊಸಹಳ್ಳಿ ಪೋಸ್ಟ್ ವ್ಯಾಪ್ತಿಯಲ್ಲಿರುವ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿಂದು ಅದ್ಧೂರಿಯಾಗಿ ನಡೆಯಿತು.

ಗ್ರಾಮದಲ್ಲಿ ಯಾವುದೇ ರೀತಿಯ ಸಾವು-ನೋವುಗಳು, ಅನಾರೋಗ್ಯದ ಸಮಸ್ಯೆಗಳು, ದುಷ್ಟಶಕ್ತಿಗಳು, ಸೋಂಕಿನ ಸಮಸ್ಯೆಗಳು ತಾಗದೆ ಇರಲಿ. ಗ್ರಾಮದಲ್ಲಿ ಶಾಂತಿ ನೆಲಸಲಿ ಎಂದು ದೇವರಲ್ಲಿ ಮೊರೆ ಹೋಗಲು ಈ ಒಂದು ಪದ್ಧತಿಯನ್ನು ಪ್ರಾಚೀನ ಕಾಲದಿಂದಲೂ ಆಚರಣೆ ಮಾಡುತ್ತಾ ಬರಲಾಗಿದೆ.

ಈ ಆಚರಣೆಯನ್ನು ಸುಮಾರು 25 ವರ್ಷಗಳ ಹಿಂದೆ ಮಾಡಿಲಾಗಿತ್ತು. ಇದೀಗ ಇಂದು ಊರಿನ ಗ್ರಾಮಸ್ಥರೆಲ್ಲಾ ಸೇರಿ ಆಚರಣೆ ಮಾಡಲಾಗಿದೆ.

ಊರ ಹೊರವಲಯದಲ್ಲಿದ್ದುಕೊಂಡು ಊರನ್ನು ಕಾಪಾಡುತ್ತಿರುವ ವರ್ಪಣಮ್ಮ ದೇವಸ್ಥಾನ ಬಳಿ ಹೋಗಿ ಸಣ್ಣಪುಟ್ಟ ಶೆಡ್ ನಿರ್ಮಿಸಿಕೊಂಡು‌ ದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ಸೇವನೆ ಮಾಡಿಕೊಂಡು ಒಂದು ದಿನ ಪೂರ್ತಿ ಅಲ್ಲೇ ಗ್ರಾಮಸ್ಥರು ಹಾಗೂ ತಮ್ಮ ಸಾಕು ಪ್ರಾಣಿಗಳ ಸಮೇತ ವಾಸ್ತವ್ಯ ಹೂಡಿದ್ದರು.

ಈ ಆಚರಣೆ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಪ್ರಾಚೀನ ಕಾಲದಿಂದಲೂ ಚಾಲ್ತಿಯಲ್ಲಿದ್ದು, ಅದನ್ನು ಪ್ರಸ್ತುತ ಗ್ರಾಮಸ್ಥರೆಲ್ಲಾ ಸೇರಿ ಆಚರಣೆ ಮಾಡುತ್ತಿದ್ದಾರೆ.

ಒಟ್ಟಾರೆ, ಈ ವಿಚಿತ್ರ ಆಚರಣೆಯಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಸಂತೋಷ, ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಸಂಭ್ರಮಿಸಿದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

4 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

5 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

5 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

12 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

13 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

16 hours ago