ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ: ನಿಟ್ಟುಸಿರುಬಿಟ್ಟ ಜನತೆ

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಡಿ.13ರ ಶನಿವಾರ ರಾತ್ರಿ ಬೋನಿನಲ್ಲಿ ಚಿರತೆ ಸೆರೆಯಾಗಿರುವುದು ಕಂಡುಬಂದಿದ್ದು, ಈ ಹಿನ್ನೆಲೆ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಹಾರೋನಹಳ್ಳಿ ಗ್ರಾಮದಲ್ಲಿ ಚಿರತೆಯ ಉಪಟಳ ಹೆಚ್ಚಾಗಿತ್ತು. ಮೇಕೆ, ನಾಯಿಗಳ ಮೇಲೆ ದಾಳಿ ನಡೆಸಿ ಬಲಿ ಪಡೆದಿತ್ತು. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದರು.

ಈ ಕುರಿತು ಆರೂಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀಧ‌ರ್ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಕೂಡಲೇ ಅರಣ್ಯ ಅಧಿಕಾರಿಗಳು ಶನಿವಾರ ಸಂಜೆಯ ವೇಳೆಗೆ ಬೋನ್ ಅಳವಡಿಸಿದ್ದರು. ಬೋನು ಇರಿಸಿದ ಒಂದೇ ದಿನಕ್ಕೆ ಚಿರತೆ ಬೋನಿಗೆ ಬಿದ್ದಿದೆ…

Leave a Reply

Your email address will not be published. Required fields are marked *

error: Content is protected !!