Categories: Home

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ ಅನುದಾನ ಕೊಡಬೇಕಿರುವುದು ಸರ್ಕಾರದ ಆರ್ಥಿಕ ಸ್ಥಿತಿ ಹೇಗಿದೆ ಎಂಬುದನ್ನ ತೋರಿಸುತ್ತಿದೆ ಎಂದು ಶಾಸಕ ಧೀರಜ್ ಮುನಿರಾಜು ಕಿಡಿಕಾರಿದರು.

ನಗರದಲ್ಲಿ ಗ್ರಾಮಾಂತರ ಠಾಣೆಗೆ ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ಪಾತ್ರ ಮುಖ್ಯವಾಗಿದೆ. ಅದಕ್ಕಾಗಿ ಸಾರ್ವಜನಿಕರ ಸೇವೆಗಾಗಿ ಪ್ರತಿ ಠಾಣೆಗೊಂದು ವಾಹನ ಅವಶ್ಯವಾಗಿದೆ ಎಂದು ಹಿಂದಿನ ಪೊಲೀಸ್ ವರಿಷ್ಠಾಧಿಕಾರಿಗಳು ಮನವಿ ಮಾಡಿದ್ದರು. ಹೀಗಾಗಿ ಶಾಸಕರ ಪ್ರದೇಶಾಭಿವೃದ್ಧ ಅನುದಾನದಲ್ಲಿ ಪೊಲೀಸ್ ಇಲಾಖೆಗೆ ವಾಹನ ನೀಡಲಾಗುತ್ತಿದೆ. ಪೊಲೀಸ್ ಇಲಾಖೆಗೆ ವಾಹನಗಳು ಅವಶ್ಯ, ಇದನ್ನರಿತು ವಾಹನವನ್ನು ಒದಗಿಸಲಾಗಿದೆ. ಪೊಲೀಸರಿಗೆ ನೈತಿಕ ಬೆಂಬಲ ನೀಡಬೇಕು, ನೆಮ್ಮದಿ ಯಿಂದ ನಾವು ನಿದ್ರಿಸಲು ಪೊಲೀಸರು ಕಾರಣ, ಅವರು ಪ್ರಾಮಾಣಿಕ ಸೇವೆ ನೀಡುತ್ತಿದ್ದಾರೆ, ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅವರಿಗೆ ಬೆಂಬಲ ನೀಡಬೇಕು ಎಂದರು.

ಈ ವೇಳೆ ಡಿವೈಎಸ್ಪಿ ಪಾಂಡುರಂಗ, ಇನ್ಸ್ಪೆಕ್ಟರ್ ಎಂ.ಬಿ ನವೀನ್ ಕುಮಾರ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ನಾಗೇಶ್, ನಗರಸಭಾ ಸದಸ್ಯರಾದ ಪದ್ಮನಾಭ, ಬಂತಿ ವೆಂಕಟೇಶ್, ಹಂಸಪ್ರಿಯಾ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

3 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

15 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

21 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

22 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago