ಕೇಂದ್ರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಸದಸ್ಯರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿಯಲ್ಲಿ ವಿವಿಧ ರಾಜ್ಯಗಳ ಲೋಕಸಭಾ ಸದಸ್ಯರು ಮತ್ತು ರಾಜ್ಯಸಭಾ ಸದಸ್ಯರು ಸದಸ್ಯರಾಗಿರುತ್ತಾರೆ. ಲೋಕಸಭಾ ಸದಸ್ಯರಾದ ತಳಾರಿ ರಂಗಯ್ಯ, ಗೀತಾಬೇನ್ ವಜಾಸಿಂಗ್ ಬಾಯ್ ರಥ್ವಾ, ಮಹಮ್ಮದ್ ಜಾವೇದ್, ಎ.ಕೆ ಪಿ ಚಿನರಾಜ್, ವಿವೇಕ್ ನಾರಾಯಣ್, ಜನಾರ್ದನ ಮಿಶ್ರ ಹಾಗೂ ರಾಜ್ಯ ಸಭಾ ಸದಸ್ಯರಾದ ಮಹಮ್ಮದ್ ಅಬ್ದುಲ್ಲಾ, ಅಜಯ್ ಪ್ರತಾಪ್ ಸಿಂಗ್ ಸೇರಿ 8 ಜನ ಸಂಸದರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಜಂಟಿ ಕಾರ್ಯದರ್ಶಿ ಡಿ.ಆರ್ ಶೇಖರ್ ಒಳಗೊಂಡ 9 ಜನ ಸದಸ್ಯರ ತಂಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮಕ್ಕೆ ಸಮಿತಿ ಸದಸ್ಯರನ್ನು ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಸ್ವಾಗತಿಸಿ ಜಿಲ್ಲೆಯ ಬಗ್ಗೆ ಮಾಹಿತಿ ನೀಡಿದರು.ಸಂಜೀವಿನಿ ಸಂಘ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಮಾರಾಟ ವೀಕ್ಷಿಸಿದ ತಂಡವು, ನಂತರ ಕೇಂದ್ರ ಹಾಗೂ ರಾಜ್ಯ ಪ್ರಾಯೋಜಿತ ಯೋಜನೆಗಳ ಪ್ರಗತಿ ಮಾಹಿತಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್ ಅವರು ಪ್ರದರ್ಶಿಸಿದ ಪಿ.ಪಿ.ಟಿ ಮೂಲಕ ಮಾಹಿತಿ ಪಡೆದುಕೊಂಡರು. ಕನ್ನಮಂಗಲ ಗ್ರಾಮಪಂಚಾಯಿತಿ ಆವರಣದಲ್ಲಿ ಇರುವ ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯ ವೀಕ್ಷಿಸಿದರು.
ನಂತರ ಜಾಲಿಗೆ ಗ್ರಾಮ ಪಂಚಾಯಿತಿಯ ತಿಂಡ್ಲು ಗ್ರಾಮಕ್ಕೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣಗೊಂಡ ರಾಜ ಕಾಲುವೆ ಯನ್ನು ವೀಕ್ಷಿಸಿದರು. ಜುಟ್ಟನಹಳ್ಳಿಯಲ್ಲಿ ಸಂಜೀವಿನಿ ಸಂಘ ಮಹಿಳೆಯರು ನಡೆಸುತ್ತಿರುವ ಬಟ್ಟೆ ಅಂಗಡಿ ಹಾಗೂ ಗ್ರಾಮ ಪಂಚಾಯಿತಿಯ 15 ನೇ ಹಣಕಾಸು ಯೋಜನೆಯಡಿ ನಿರ್ಮಿಸಲಾದ ರಸ್ತೆ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.
ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ರಾಯಸಂದ್ರ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ಯೋಜನೆಯಡಿ ಬೆಳೆಸಿದ ದೇವನಹಳ್ಳಿಯ ಪ್ರಸಿದ್ಧ ಹಣ್ಣಾದ ಚಕ್ಕೊತ ಹಣ್ಣಿನ ಗಿಡಗಳನ್ನು ಪರಿಶೀಲಿಸಿ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾದ ಮನೆಯನ್ನು ವೀಕ್ಷಿಸಿದರು. ಬೆಟ್ಟಕೋಟೆಯಲ್ಲಿ ರೇಷ್ಮೆ ಇಲಾಖೆಯ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಲಾದ ಹಿಪ್ಪುನೇರಳೆ ಹೊಸನಾಟಿ, ನರ್ಸರಿ, ಹಿಪ್ಪುನೇರಳೆ ಮರ ಪದ್ಧತಿಯನ್ನು ಪರಿಶೀಲಿಸಿ, ರೇಷ್ಮೆಗೂಡಿನಿಂದ ತಯಾರಿಸಲಾದ ವಿವಿಧ ಕರಕುಶಲ ವಸ್ತುಗಳನ್ನು ವೀಕ್ಷಿಸಿದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…