ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ  ಅರ್ಜಿ ಆಹ್ವಾನ

ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಸ್ಥಳೀಯ ಸಮರ್ಥ ವಿಕಲಚೇತನರನ್ನು ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ನಗರಸಭೆಗೆ ನಗರ ಪುನರ್ವಸತಿ ಕಾರ್ಯಕರ್ತರನ್ನಾಗಿ ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಕಲಚೇತನ ವ್ಯಕ್ತಿಗಳು ಷರತ್ತುಗಳಿಗೆ ಒಳಪಟ್ಟು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು 2023 ರ ಡಿಸೆಂಬರ್ 26 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ ನಂ 01, ನೆಲಮಹಡಿ, ಜಿಲ್ಲಾಡಳಿತ ಭವನ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಗ್ರಾಮಪಂಚಾಯಿತಿ, ನೆಲಮಂಗಲ ತಾಲ್ಲೂಕಿನ ದೊಡ್ಡಬೆಲೆ ಗ್ರಾಮಪಂಚಾಯಿತಿಗಳಿಗೆ ನೇಮಕಾತಿ ಮಾಡಲಾಗುತ್ತದೆ.

ಷರತ್ತು

1) ಶೇಕಡಾ 40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರಬೇಕು. (ಯು.ಡಿ.ಐ.ಡಿ. ಲಗತ್ತಿಸಬೇಕು.)

2) ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀಣ೯ರದವರಿಗೆ ಆದ್ಯತೆ. ಉತ್ತೀರ್ಣರಾದವರು ಸಿಗದೆ ಇದ್ದ ಸಂದರ್ಭದಲ್ಲಿ ಅನುರ್ತ್ತೀರಾದವರನ್ನು ಪರಿಗಣಿಸಲಾಗುವುದು.

3) 18-45 ವಯೋಮಿತಿಯಲ್ಲಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ/ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು

4) ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್‌ಪರಿಶೀಲನೆಗೆ ಒಳಪಟ್ಟಿರುತ್ತದೆ. ಪುನರ್ ಪರಿಶೀಲನೆಯಲ್ಲಿ ಕೆಲಸ ಕಾರ್ಯಗಳ ನಿರ್ವಹಣೆ, ಅಂಗವಿಕಲರೊಂದಿಗೆ ಸಂಬಂಧ ವಿವಿಧ ಇಲಾಖೆಗಳೊಂದಿಗೆ/ಸ್ವಯಂ ಸೇವಾ ಸಂಸ್ಥೆ ಸಮುದಾಯದೊಂದಿಗೆ ವಿಕಲಚೇತನ ಅಭಿವೃದ್ಧಿಗಾಗಿ ಇಟ್ಟುಕೊಂಡಿರುವ ಸಂಬಂಧಗಳನ್ನು ಪರಿಶೀಲಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು,

5) ಸದರಿ ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಇವರನ್ನು ಯಾವಾಗ ಬೇಕಾದರೂ ಕೆಲಸದಿಂದ ತೆಗೆದು ಹಾಕಬಹುದಾಗಿದೆ – ಬಿಡುಗಡೆ ಮಾಡಬಹುದಾಗಿದೆ.

 6) ಗೌರವಧನ ಆಧಾರದ ಮೇಲೆ ಕೆಲಸ ನಿರ್ವಹಿಸುವುದರಿಂದ ಖಾಯಂಗೊಳಿಸಲು ಕೋರಲು ಅವಕಾಶವಿರುವುದಿಲ್ಲ.

7, ಸಮರ್ಥ ವಿಕಲಚೇತನರಾಗಿರಬೇಕು ತೀರ್ವತರ ಏಕಲಚೇತನರಾಗಿರಬಾರದು

8) ಸಂಬಂಧಪಟ್ಟ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಬಗ್ಗೆ ತಹಸೀಲ್ದಾರರಿಂದ ವಾಸಸ್ಥಳ ದೃಢೀಕರಣ ಪತ್ರ ಲಗತ್ತಿಸುವುದು.

9).ಮಾಹೆಯಾನ ಗೌರವಧನ ರೂ.9,000/- ನೀಡಲಾಗುವುದು ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

7 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

8 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

16 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

21 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago