ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಸ್ಥಳೀಯ ಸಮರ್ಥ ವಿಕಲಚೇತನರನ್ನು ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ತಾಲ್ಲೂಕು ಪಂಚಾಯಿತಿಗೆ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನಾಗಿ ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಕಲಚೇತನ ವ್ಯಕ್ತಿಗಳು ಷರತ್ತುಗಳಿಗೆ ಒಳಪಟ್ಟು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು 2024 ರ ಫೆಬ್ರವರಿ 29 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ ನಂ 01, ನೆಲಮಹಡಿ, ಜಿಲ್ಲಾಡಳಿತ ಭವನ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ನೆಲಮಂಗಲ ತಾಲ್ಲೂಕು ಪಂಚಾಯಿತಿಗೆ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಹುದ್ದೆ-01, ನೆಲಮಂಗಲ ತಾಲ್ಲೂಕಿನ ದೊಡ್ಡಬೆಲೆ ಗ್ರಾಮಪಂಚಾಯಿತಿ, ಸೋಲದೇವನಹಳ್ಳಿ ಗ್ರಾಮ ಪಂಚಾಯತಿಗೆ ತಲಾ ಒಂದು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿ ಮಾಡಲಾಗುತ್ತದೆ.

ಷರತ್ತುಗಳು

1) ಶೇಕಡಾ 40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರಬೇಕು. (ಯು.ಡಿ.ಐ.ಡಿ. ಲಗತ್ತಿಸಬೇಕು.)
2) ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀಣ೯ರದವರಿಗೆ ಆದ್ಯತೆ. ಉತ್ತೀರ್ಣರಾದವರು ಸಿಗದೆ ಇದ್ದ ಸಂದರ್ಭದಲ್ಲಿ ಅನುತ್ತೀರ್ಣರಾದವರನ್ನು
ಪರಿಗಣಿಸಲಾಗುವುದು.
3) 18-45 ವಯೋಮಿತಿಯಲ್ಲಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ/ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು
4) ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್‌ಪರಿಶೀಲನೆಗೆ ಒಳಪಟ್ಟಿರುತ್ತದೆ. ಪುನರ್ ಪರಿಶೀಲನೆಯಲ್ಲಿ ಕೆಲಸ ಕಾರ್ಯಗಳ ನಿರ್ವಹಣೆ, ಅಂಗವಿಕಲರೊಂದಿಗೆ ಸಂಬಂಧ ವಿವಿಧ ಇಲಾಖೆಗಳೊಂದಿಗೆ/ಸ್ವಯಂ ಸೇವಾ ಸಂಸ್ಥೆ ಸಮುದಾಯದೊಂದಿಗೆ ವಿಕಲಚೇತನ ಅಭಿವೃದ್ಧಿಗಾಗಿ ಇಟ್ಟುಕೊಂಡಿರುವ ಸಂಬಂಧಗಳನ್ನು ಪರಿಶೀಲಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು,
5) ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಇವರನ್ನು ಯಾವಾಗ ಬೇಕಾದರೂ ಕೆಲಸದಿಂದ ತೆಗೆದು ಹಾಕಬಹುದಾಗಿದೆ – ಬಿಡುಗಡೆ ಮಾಡಬಹುದಾಗಿದೆ.
6) ಗೌರವಧನ ಆಧಾರದ ಮೇಲೆ ಕೆಲಸ ನಿರ್ವಹಿಸುವುದರಿಂದ ಖಾಯಂಗೊಳಿಸಲು ಕೋರಲು ಅವಕಾಶವಿರುವುದಿಲ್ಲ.
7, ಸಮರ್ಥ ವಿಕಲಚೇತನರಾಗಿರಬೇಕು ತೀರ್ವತರ ವಿಕಲಚೇತನರಾಗಿರಬಾರದು.
8) ಸಂಬಂಧಪಟ್ಟ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಬಗ್ಗೆ ತಹಸೀಲ್ದಾರರಿಂದ ವಾಸಸ್ಥಳ ದೃಢೀಕರಣ ಪತ್ರ ಲಗತ್ತಿಸುವುದು.
9) ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಮಾಹೆಯಾನ ಗೌರವಧನ ರೂ.15,000/- ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ರೂ.9000/-ಗೌರವಧನ ನೀಡಲಾಗುವುದು. ಇಲಾಖೆಯಿಂದ ಕಾಲಕಾಲಕ್ಕೆ ವಿಧಿಸುವ ಷರತ್ತುಗಳಿಗೆ ಬದ್ಧರಾಗಿರಬೇಕು ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

8 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

10 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

12 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

17 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

20 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

2 days ago