ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ತೆರಳಲು ಸಮರ್ಪಕವಾಗಿ ಸರ್ಕಾರಿ ಬಸ್ಸುಗಳ ಸೌಲಭ್ಯ ಕಲ್ಪಿಸಿ ಕೊಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ ಮುಳಬಾಗಿಲು ತಾಲೂಕು ಸಮಿತಿ ಘಟಕ ನಿಯಂತ್ರಣಧಿಕಾರಿ ಗಂಗಾಧರೆಡ್ಡಿ ಮುಖಾಂತರ ಘಟಕದ ವ್ಯವಸ್ಥಾಪಕರಿಗೆ ಮನವಿ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲೂಕು ಕಾರ್ಯದರ್ಶಿಯಾದ ಸುದರ್ಶನ್ ಮಾತನಾಡಿ, ಭಾರತ ವಿದ್ಯಾರ್ಥಿ ಫೆಡರೇಶನ್ ಹಲವು ವರ್ಷಗಳಿಂದ ಸಮರ್ಪಕವಾಗಿ ಬಸ್ ಸೌಲಭ್ಯಕ್ಕಾಗಿ ಹೋರಾಟಗಳು ನಡೆಸಿಕೊಂಡು ಬರುತ್ತಿದೆ. ಆದರೂ, ತಾಲೂಕಿನ ಗ್ರಾಮೀಣ ಪ್ರದೇಶಗಳಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಪಟ್ಟಣಕ್ಕೆ ಬರುತ್ತಿದ್ದು, ಸರಿಯಾದ ಸಮಯಕ್ಕೆ ಬಸ್ಸುಗಳ ಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳು ಬಸ್ ಪಾಸ್ ಇದ್ದರೂ ಶಾಲಾ-ಕಾಲೇಜಿಗೆ ಸಮಯಕ್ಕೆ ಸರಿಯಾಗಿ ಬರಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪಾಲಿಟೆಕ್ನಿಕ್ ಕಾಲೇಜು ಹಾಗೂ ದೇವರಾಯ ಸಮುದ್ರ ಐಟಿಐ ಕಾಲೇಜು ಮಾರ್ಗದಲ್ಲಿ ಹೋಗುವ ಬಸ್ಸುಗಳು ಅಲ್ಲಿ ನಿಲ್ಲಿಸುತ್ತಿರುವುದಿಲ್ಲ ಹಾಗೂ ಕೋವಿಡ್ ಮುಂಚೆ ತಾಯಲೂರು ಮುಖಾಂತರ ಯಳಚೇಪಲ್ಲಿ ಗ್ರಾಮಕ್ಕೆ ಹಾಗೂ ಗುಮ್ಲಾಪುರ ಮಾರ್ಗದಿಂದ ಮೇಲ್ತಾಯಲೂರು ಗ್ರಾಮಗಳಿಗೆ ಬಸ್ಸಿನ ಸೌಲಭ್ಯವಿತ್ತು. ಆದರೆ, ಈಗ ಎಲ್ಲವನ್ನು ಮುಕ್ತಾಯಗೊಳಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಸಮಸ್ಯೆ ಎದುರಾಗುತ್ತಿದ್ದು, ಆದಷ್ಟು ಬೇಗ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲದಿದ್ದರೆ ತಾಲೂಕು ಘಟಕದ ಮುಂದೆ ಬೃಹತ್ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲೂಕು ಅಧ್ಯಕ್ಷ ಅರ್ಚನಾ, ಉಪಾಧ್ಯಕ್ಷ ಸುಭಾಷ್ ಹಾಗೂ ಯಶ್, ಜಿಲ್ಲಾ ಸಮಿತಿ ಸದಸ್ಯರಾದ ಅಜಯ್ ಕುಮಾರ್ ಹಾಗೂ ಯಲಚೇನಹಳ್ಳಿ ವಿದ್ಯಾರ್ಥಿಗಳಾದ ವಾಸುದೇವ ರಾವ್ ತಾರುಣ್ಗಾವ್ ಮುನಿಯಪ್ಪಾದ ಪವಿತ್ರ ಬಾಯಿ ಮಂಜುನಾಥರಾವ್ ಹಾಜರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…