ಗ್ರಾಮೀಣ ಪ್ರದೇಶದ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಯುವಕರ ಪಾತ್ರ ಮಹತ್ವದ್ದು- ಮಲ್ಲೇಶ್

ನಮ್ಮ ಗ್ರಾಮೀಣ ಪ್ರದೇಶದ ಕಲೆ, ಸಾಹಿತ್ಯ ಮತ್ತು  ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಯುವ ಸಮುದಾಯ ಮಹತ್ವದ ಪಾತ್ರವನ್ನು ವಹಿಸಬೇಕಾಗಿದೆ  ಎಂದು‌ ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ವೀರಾಪುರ ಗ್ರಾಮದಲ್ಲಿ ನಡೆಯುತ್ತಿರುವ   ಮಾರಸಂದ್ರ ಪಿಕೆಬಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ಶಿಬಿರದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ‌ಪರಂಪರೆ ಕುರಿತ  ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಮ್ಮ ಗ್ರಾಮೀಣರು ತಮ್ಮ ಭಾವನೆಗಳನ್ನು ಜಾನಪದ ಕಲೆ ಮತ್ತು ಸಾಹಿತ್ಯದ ಮೂಲಕ ಅಭಿವ್ಯಕ್ತಿಗೊಳಿಸಿದರು.   ಇಂತಹ ಜಾನಪದ ಕಲಾವಿದರನ್ನು ಗೌರವಿಸುವ ಮತ್ತು ಪ್ರೋತ್ಸಾಹಿಸುವ ಕೆಲಸ ಆಗಬೇಕು. ಜನದರ ಕಲೆ ಮತ್ತು   ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳ ಮಹತ್ವವಿದೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಂಡಿದೆ. “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಧ್ಯೇಯವಾಕ್ಯದ ಅಡಿಯಲ್ಲಿ ರಾಜ್ಯದ ಎಲ್ಲೆಡೆ ಕರ್ನಾಟಕ ಸುವರ್ಣ ಸಂಭ್ರಮದ ಆಚರಣೆ ನಡೆಯುತ್ತಿದೆ. ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ  ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದರೆ ಕನ್ನಡ ಎಲ್ಲೆಡೆ ಪಸರಿಸಲು ಸಾಧ್ಯವಾಗುತ್ತದೆ ಎಂದರು.

ಪ್ರಾಂಶುಪಾಲ ಎಂ.ಆನಂದ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಿಲ್ಲೊಂದು ಪ್ರತಿಭೆ ಅಡಗಿರುತ್ತದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಅಭಿವ್ಯಕ್ತಿ ಪಡಿಸಿಕೊಂಡರೆ ಪ್ರತಿಭಾವಂತ ವ್ಯಕ್ತಿಗಳಾಗಿ ಹೊರಹೊಮ್ಮುತ್ತಾರೆ. ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಸಹಕಾರಿ ಆಗಲಿದೆ. ವಿದ್ಯಾರ್ಥಿಗಳು ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಪಿಕೆಬಿ ಪದವಿ ಪೂರ್ವ ಕಾಲೇಜಿನ‌  ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಎ.ಆರ್.ಗಂಗಾಧರೇಶ್ವರ, ಶಿಬಿರಾಧಿಕಾರಿ ಕೆ.ಆರ್.ಪ್ರಸನ್ನಕುಮಾರ್,  ಕಲಾವಿದರುಗಳಾದ ಎಂ.ರಾಮಕೃಷ್ಣ, ಮುನಿರತ್ನಮ್ಮ, ಕನ್ನಡ ಸಾಹಿತ್ಯ ಪರಿಷತ್ತು ಪ್ರತಿನಿಧಿ ಸಫೀರ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

2 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

6 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

16 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

20 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 day ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago