ದೊಡ್ಡಬಳ್ಳಾಪುರ: ಗ್ರಾಮೀಣ ಬದುಕನ್ನು ಅರಿತುಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಸಹಕಾರಿಯಾಗಿದ್ದು, ಸೇವಾ ಮನೋಭಾವವನ್ನು ಉತ್ತೇಜಿಸುತ್ತವೆ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಹೇಳಿದರು.
ತಾಲೂಕಿನ ತಳಗವಾರ ಗ್ರಾಮದಲ್ಲಿ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಗುರುವಾರ ಆಯೋಜಿಸಿದ್ದ 7 ದಿನಗಳ ವಿಶೇಷ ಯುವಜನ ಸೇವಾ ಶಿಬಿರದ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶೈಕ್ಷಣಿಕವಾದ ಜ್ಞಾನವನ್ನು ಗ್ರಹಿಸುವ ಜೊತೆಗೆ ಸಾಮಾಜಿಕ ಪ್ರಜ್ಞೆಯನ್ನು ರೂಢಿಸಿಕೊಳ್ಳಲು ಇದರಿಂದ ಸಹಾಯಕವಾಗುತ್ತದೆ. ಶ್ರಮದಾನದ ಮಹತ್ವವನ್ನು ಎನ್‌ಎಸ್‌ಎಸ್ ವ್ಯವಸ್ಥಿತವಾಗಿ ಪ್ರತಿಪಾದಿಸುತ್ತದೆ. ಗ್ರಾಮೀಣರ ಜನಜೀವನವನ್ನು ಹತ್ತಿರದಿಂದ ನೋಡುವ ಮತ್ತು ಅದ್ಯಯನ ನಡೆಸುವ ಅವಕಾಶವನ್ನು ಕಲ್ಪಿಸುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಹಲವು ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಜನರ ಆರೋಗ್ಯ, ನೈರ್ಮಲ್ಯ, ಪರಿಸರ ಸಂರಕ್ಷಣೆ, ಶೈಕ್ಷಣಿಕ ಅಭಿವೃದ್ದಿ ಸೇರಿದಂತೆ ವಿವಿಧ ವಿಚಾರಗಳನ್ನು ಆದ್ಯತೆಯನ್ನಾಗಿ ಪರಿಗಣಿಸಿ ಚಟುವಟಿಕೆಗಳನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಗ್ರಾಮದ ಮನೆಮನೆಗೂ ತೆರಳಿ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಬೇಕು. ಶ್ರಮದಾನದ ಜೊತೆಗೆ ವ್ಯಕ್ತಿತ್ವ ವಿಕಸನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಆದ್ಯತೆ ನೀಡುವುದು ಅಗತ್ಯ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್ ಮತ್ತು ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಾಂಶುಪಾಲ ಡಾ.ಆರ್.ನಾಗರಾಜ್, ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ಎನ್‌ಎಸ್‌ಎಸ್ ಅಧಿಕಾರಿ ಕೆ.ಸಿ.ಲಕ್ಷ್ಮೀಶ, ಸಹಾಯಕ ಅಧಿಕಾರಿಗಳಾದ ವೆಂಕಟೇಶ್, ಪೂಜಾ, ಗ್ರಾಪಂ ಮಾಜಿ ಅಧ್ಯಕ್ಷ ಮುನಿಯಪ್ಪ, ಮಾಜಿ ಉಪಾಧ್ಯಕ್ಷ ಟಿ.ಎಸ್.ರುದ್ರಪ್ಪ, ತಾಪಂ ಮಾಜಿ ಸದಸ್ಯ ರೋಜಿಪುರ ಪ್ರಕಾಶ್, ಎಂಪಿಸಿಎಸ್ ಸದಸ್ಯ ಟಿ.ವಿ.ರವಿಕುಮಾರ್, ಗ್ರಾಪಂ ಸದಸ್ಯೆ ಅನ್ನಪೂರ್ಣ ಸುರೇಶ್, ಮುಖಂಡರಾದ ಅನಿಲ್‌ಕುಮಾರ್, ಮೈಲಾರಪ್ಪ, ಶಿವಕುಮಾರ್, ನಾಗರಾಜ, ಜಗನ್ನಾಥ್, ಹನುಮಂತರಾಯಪ್ಪ, ಸುರೇಶ್, ಶಾಲಾ ಶಿಕ್ಷಕ ಜಗನ್ನಾಥ್, ಅಂಗನವಾಡಿ ಕಾರ್ಯಕರ್ತೆ ಕೆಂಚಮ್ಮ ಮತ್ತಿತರರು ಉಪಸ್ಥಿತರಿದ್ದರು.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…