ಗ್ರಾಮೀಣ ಬದುಕನ್ನು ಅರಿತುಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಹಕಾರಿ- ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್‌

ದೊಡ್ಡಬಳ್ಳಾಪುರ: ಗ್ರಾಮೀಣ ಬದುಕನ್ನು ಅರಿತುಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಸಹಕಾರಿಯಾಗಿದ್ದು, ಸೇವಾ ಮನೋಭಾವವನ್ನು ಉತ್ತೇಜಿಸುತ್ತವೆ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್‌ ಹೇಳಿದರು.

ತಾಲೂಕಿನ ತಳಗವಾರ ಗ್ರಾಮದಲ್ಲಿ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಗುರುವಾರ ಆಯೋಜಿಸಿದ್ದ 7 ದಿನಗಳ ವಿಶೇಷ ಯುವಜನ ಸೇವಾ ಶಿಬಿರದ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶೈಕ್ಷಣಿಕವಾದ ಜ್ಞಾನವನ್ನು ಗ್ರಹಿಸುವ ಜೊತೆಗೆ ಸಾಮಾಜಿಕ ಪ್ರಜ್ಞೆಯನ್ನು ರೂಢಿಸಿಕೊಳ್ಳಲು ಇದರಿಂದ ಸಹಾಯಕವಾಗುತ್ತದೆ. ಶ್ರಮದಾನದ ಮಹತ್ವವನ್ನು ಎನ್‌ಎಸ್‌ಎಸ್‌ ವ್ಯವಸ್ಥಿತವಾಗಿ ಪ್ರತಿಪಾದಿಸುತ್ತದೆ. ಗ್ರಾಮೀಣರ ಜನಜೀವನವನ್ನು ಹತ್ತಿರದಿಂದ ನೋಡುವ ಮತ್ತು ಅದ್ಯಯನ ನಡೆಸುವ ಅವಕಾಶವನ್ನು ಕಲ್ಪಿಸುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಹಲವು ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಜನರ ಆರೋಗ್ಯ, ನೈರ್ಮಲ್ಯ, ಪರಿಸರ ಸಂರಕ್ಷಣೆ, ಶೈಕ್ಷಣಿಕ ಅಭಿವೃದ್ದಿ ಸೇರಿದಂತೆ ವಿವಿಧ ವಿಚಾರಗಳನ್ನು ಆದ್ಯತೆಯನ್ನಾಗಿ ಪರಿಗಣಿಸಿ ಚಟುವಟಿಕೆಗಳನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಗ್ರಾಮದ ಮನೆಮನೆಗೂ ತೆರಳಿ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಬೇಕು. ಶ್ರಮದಾನದ ಜೊತೆಗೆ ವ್ಯಕ್ತಿತ್ವ ವಿಕಸನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಆದ್ಯತೆ ನೀಡುವುದು ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್ ಮತ್ತು ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಾಂಶುಪಾಲ ಡಾ.ಆರ್.ನಾಗರಾಜ್, ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ಎನ್‌ಎಸ್‌ಎಸ್‌ ಅಧಿಕಾರಿ ಕೆ.ಸಿ.ಲಕ್ಷ್ಮೀಶ, ಸಹಾಯಕ ಅಧಿಕಾರಿಗಳಾದ ವೆಂಕಟೇಶ್, ಪೂಜಾ, ಗ್ರಾಪಂ ಮಾಜಿ ಅಧ್ಯಕ್ಷ ಮುನಿಯಪ್ಪ, ಮಾಜಿ ಉಪಾಧ್ಯಕ್ಷ ಟಿ.ಎಸ್.ರುದ್ರಪ್ಪ, ತಾಪಂ ಮಾಜಿ ಸದಸ್ಯ ರೋಜಿಪುರ ಪ್ರಕಾಶ್, ಎಂಪಿಸಿಎಸ್‌ ಸದಸ್ಯ ಟಿ.ವಿ.ರವಿಕುಮಾರ್, ಗ್ರಾಪಂ ಸದಸ್ಯೆ ಅನ್ನಪೂರ್ಣ ಸುರೇಶ್, ಮುಖಂಡರಾದ ಅನಿಲ್‌ಕುಮಾರ್, ಮೈಲಾರಪ್ಪ, ಶಿವಕುಮಾರ್, ನಾಗರಾಜ, ಜಗನ್ನಾಥ್, ಹನುಮಂತರಾಯಪ್ಪ, ಸುರೇಶ್, ಶಾಲಾ ಶಿಕ್ಷಕ ಜಗನ್ನಾಥ್, ಅಂಗನವಾಡಿ ಕಾರ್ಯಕರ್ತೆ ಕೆಂಚಮ್ಮ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 hour ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

4 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

4 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

6 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

11 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

1 day ago