ದೊಡ್ಡಬಳ್ಳಾಪುರ: ನಗರದ ಪ್ರದೇಶಗಳಲ್ಲಿ ನಡೆಯುತ್ತಿದ್ದ ಜೂಜಾಟ ಇತ್ತೀಚೆಗೆ ಗ್ರಾಮೀಣ ಪ್ರದೇಶಗಳಿಗೂ ಹಬ್ಬುತ್ತಿದೆ. ಜೂಜುಕೋರರ ಹಾವಳಿ ಮಿತಿ ಮೀರಿದ್ದು, ನಗರ ಕೇಂದ್ರಿತವಾಗಿದ್ದ ಜೂಜು ಅಡ್ಡೆಗಳು ಈಗ ಗ್ರಾಮಾಂತರ ಪ್ರದೇಶಗಳಲ್ಲಿ ತಮ್ಮ ಜಾಲ ಹಬ್ಬಿದೆ.
ತಾಲೂಕಿನ ಮೆಳೆಕೋಟೆ, ರಾಜಘಟ್ಟ, ರಾಮಯ್ಯನಪಾಳ್ಯ, ಮೇಡಿಹಳ್ಳಿ ಹಾಗೂ ಜಕ್ಕಲಮಡಗು ರಸ್ತೆಗಳ ತೋಟದ ಮನೆಗಳು, ನೀಲಗಿರಿ ತೋಪುಗಳು ಜೂಜುಕೋರರ ಉಪಟಳದಿಂದ ನಲುಗುತ್ತಿವೆ ಎಂಬ ದೂರುಗಳು ಕೇಳಿಬಂದಿವೆ.
ಇಸ್ಪೀಟ್, ಮಟ್ಕಾ, ಬೆಟ್ಟಿಂಗ್ ದಂಧೆಗೆ ಗ್ರಾಮೀಣ ಭಾಗದ ಯುವಜನರೇ ಹೆಚ್ಚು ದಾಸರಾಗುತ್ತಿದ್ದು, ಜೂಜಾಟಕ್ಕೆ ಬಲಿಯಾದ ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೂಲಿ ಕಾರ್ಮಿಕರು ದಿನವಿಡೀ ಬೆವರು ಹರಿಸಿ ದುಡಿದ ಹಣವನ್ನು ಕ್ಷಣಾರ್ಧದಲ್ಲಿ ಜೂಜಿಗೆ ಬಳಸಿ ಖಾಲಿ ಕೈಯಲ್ಲಿ ಮನೆಗೆ ತೆರಳುವಂತಾಗಿದೆ. ಚಟಕ್ಕೆ ಬಿದ್ದ ಬಹುತೇಕರು ತೋಟ, ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ.
ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ತಲೆ ಎತ್ತಿರುವ ಜೂಜು ಅಡ್ಡೆಗಳಿಗೆ ಯಲಹಂಕ, ವಿಜಯಪುರ, ದೇವನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ತಾಲೂಕುಗಳಿಂದ ಜೂಜು ಕೋರರು ಬರುತ್ತಾರೆ. ತೋಟದ ಮನೆ, ನೀಲಗಿರಿ ತೋಪುಗಳಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಜೂಜಾಟಕ್ಕೆ ಪೊಲೀಸರು ಕೂಡಲೇ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಗ್ರಾಮಾಂತರ ಪ್ರದೇಶದ ಜೂಜು ಅಡ್ಡೆಗಳ ಮೇಲೆ ಪೊಲೀಸರು ನಿಯಮಿತವಾಗಿ ದಾಳಿ ನಡೆಸಿದರೂ ತಹಬದಿಗೆ ಬಂದಿಲ್ಲ. ಪೊಲೀಸರು ಪರಿಣಾಮಕಾರಿ ಗಸ್ತು ವ್ಯವಸ್ಥೆ ಮಾಡಿದರೆ ಸಾಕಷ್ಟು ಕುಟುಂಬಗಳು ಬಚಾವಾಗಲಿವೆ ಎಂಬುದು ಗ್ರಾಮೀಣ ಭಾಗದ ಜನರ ಅಭಿಪ್ರಾಯವಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…
ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್…