ದೊಡ್ಡಬಳ್ಳಾಪುರ: ಗ್ರಾಮೀಣ ಭಾಗದ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಡಿತ ಮಾಡುತ್ತಿರುವುದನ್ನು ಖಂಡಿಸಿ ರಸ್ತೆ ತಡೆ ಮಾಡಿ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಯಲಹಂಕ ಹಿಂದೂಪುರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಡಿಕ್ರಾಸ್ ಬಳಿ ಪವರ್ ಸ್ಟೇಷನ್ ರಸ್ತೆ ತಡೆದಿರುವ ರೈತರು, ಕಳೆದ ಒಂದೂವರೆ ತಿಂಗಳಿನಿಂದ ಗ್ರಾಮಾಂತರ ಪ್ರದೇಶದ ಕೃಷಿ ಪಂಪ್ ಸೆಟ್ ಗೆ ನೀಡುವ ವಿದ್ಯುತ್ ಕಡಿತ ಗೊಳಿಸಿದ್ದಾರೆ. ಸಾಲ ಮಾಡಿ ಬೆಳೆದಿರುವ ಬೆಳೆಗಳಿಗೆ ನೀರಿಲ್ಲದೆ ಬಾಡುತ್ತಿವೆ ಎಂದು ಆರೋಪಿಸಿ ಆಕ್ರೋಶ ಹೊರಹಾಕಿ ಪ್ರತಿಭಟನೆ ಮಾಡಿದ್ದಾರೆ.
ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.
ರೈತರ ಪ್ರತಿಭಟನೆಯಿಂದ ಯಲಹಂಕ ಹಿಂದೂಪುರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಹೆದ್ದಾರಿ ಬಿಟ್ಟು ಕದಲುವುದಿಲ್ಲ ಎಂದು ಪ್ರತಿಭಟಿಸಲಾಗಿತ್ತು.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…