ಗ್ರಾಮ ಆಡಳಿತಾಧಿಕಾರಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಜಿಲ್ಲೆಯ 683 ಅರ್ಹ ಅಭ್ಯರ್ಥಿಗಳು: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಪೈಕಿ 34 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ದಿನಾಂಕ 2024 ರ ಅಕ್ಟೋಬರ್ 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ತಾತ್ಕಾಲಿಕ ಅಂಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ www://kea.kar.nic.in ನಲ್ಲಿ ದಿನಾಂಕ 2024 ರ ನವೆಂಬರ್ 27 ರಂದು ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಿ ನಿಗದಿತ ದಿನಾಂಕದವರೆಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅರ್ಹರಾದ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಅರ್ಹರಾದ ಒಟ್ಟು 683 ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿ ವಿವರ ಪ್ರಕಟಿಸಲಾಗಿದ್ದು ಈ ಕೆಳಕಂಡ ವೇಳಾಪಟ್ಟಿಯಂತೆ ಕರ್ನಾಟಕ ನಾಗರೀಕ ಸೇವಾ ನೇರ ನೇಮಕಾತಿ ಸಾಮಾನ್ಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು.

2024 ಡಿಸೆಂಬರ್ 20 ರಿಂದ 24 ರವರೆಗೆ ಅಧಿಸೂಚನೆಯಲ್ಲಿ ನಿಗದಿಯಾಗಿರುವ ಹುದ್ದೆಗಳ ಎದುರಾಗಿ 1:3 ರ ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ದಾಖಲೆ ಪರಿಶೀಲನೆಗೆ ಪ್ರಕಟಿಸಲಾಗುವುದು.

ದಿನಾಂಕ 2025 ರ ಜನವರಿ 02 ರಿಂದ 2025 ಜನವರಿ 10 ರವರೆಗೆ 1:3 ಅನುಪಾತದಲ್ಲಿ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸುವುದು ಮತ್ತು ವಿಕಲಚೇತನ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸುವುದು ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು.

ದಿನಾಂಕ 2025 ರ ಜನವರಿ 15 ರಂದು ತಾತ್ಕಾಲಿಕ 1:1 ಆಯ್ಕೆ ಪಟ್ಟಿ ಮತ್ತು ಹೆಚ್ಚುರಿ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು.

2025 ರ ಜನವರಿ 16 ರಿಂದ 23 ರವರೆಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗುವುದು.

2025 ಜನವರಿ 27 ರಂದು ಅಂತಿಮ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು.

ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ರಜಾ ದಿನಗಳನ್ನು ಹೊರತುಪಡಿಸಿ ಕಚೇರಿ ವೇಳೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.

ಗ್ರಾಮ ಆಡಳಿತ ಅಧಿಕಾರ ಹುದ್ದೆಗಳ ನೇಮಕಾತಿ ನಡೆಸುವ ಪ್ರತಿ ಹಂತದ ಪ್ರಕ್ರಿಯೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಹಾಗೂ ಅಂತರ್ಜಾಲದಲ್ಲಿ ಪ್ರಚುರ ಪಡಿಸಲಾಗುವುದು ಎಂದು ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ ಮತ್ತು ಆಯ್ಕೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *