ಗ್ರಾಮ ಪಂಚಾಯತಿ ಅಧ್ಯಕ್ಷ ಮನವಿ ಮೇರೆಗೆ ಧರಣಿ ಮುಂದೂಡಿದ ವಕೀಲ ಹುಲುಕುಂಟೆ ಮಹೇಶ್

ಹುಲುಕುಂಟೆ ಗ್ರಾಮ ಪಂಚಾಯತಿ ಮುಂದೆ ಏಕಾಂಗಿಯಾಗಿ ಧರಣಿ ಆರಂಭಿಸಿದ್ದ ಪತ್ರಿಕಾ ವಿತರಕ ಹಾಗೂ ವಕೀಲರಾದ ಹುಲುಕುಂಟೆ ಮಹೇಶ ಅವರು ಧರಣಿ ಆರಂಭಿಸುತ್ತಿದ್ದಂತೆಯೇ ಆಗಮಿಸಿದ ಹುಲುಕುಂಟೆ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರುಗಳು ಫೆಬ್ರವರಿ ಅಂತ್ಯದ ವೇಳೆಗೆ ಆಂಜನೇಯ ಸ್ವಾಮಿ ಇನಾಮ್ತ ಜಮೀನು ಹಾಗೂ ಸರ್ವೆ ನಂ.162 ರಲ್ಲಿ ಕಟ್ಟಿಕೊಂಡಿರುವ ಮನೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಕಾರಣ ಧರಣಿಯನ್ನು ಸದ್ಯ ನಿಲ್ಲಿಸಲಾಗಿದೆ.

ಫೆಬ್ರುವರಿ 28 ರೊಳಗೆ ಕ್ರಮ ಕೈಗೊಳ್ಳದಿದ್ದರೆ ಮಾರ್ಚ್ 1 ರಿಂದ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ವಕೀಲರ ಸಂಘ, ಮಾನವ ಹಕ್ಕುಗಳ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ದೊಡ್ಡ ಮಟ್ಟದ ಧರಣಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹುಲುಕುಂಟೆ ಮಹೇಶ ಅವರು ತಿಳಿಸಿದ್ದಾರೆ.

ಗ್ರಾಮ ಪಂಚಾಯ್ತಿ ಅಧ್ಯಕ್ಷ ಚಿಕ್ಕೀರಪ್ಪ ಮಾತನಾಡಿ, ಮಹೇಶ್ ಅವರ ಬೇಡಿಕೆಗಳು ನ್ಯಾಯಯುತವಾಗಿದ್ದು, ಹೊಸ ದಿಶಾಂಕ್ ಅಪ್ಲಿಕೇಷನ್ ಇಂದ ಸಮಸ್ಯೆ ಆಗಿದೆ. ಇದನ್ನು ಸರಿಪಡಿಸಲು ದೊಡ್ಡಬಳ್ಳಾಪುರ ತಹಶೀಲ್ದಾರ್ ಹಾಗೂ ಸರ್ವೇಯರ್ ರವರಿಗೆ ಅನೇಕ ಬಾರಿ ಮನವಿ ಮಾಡಿದರೂ ಕ್ರಮ ಕೈಗೊಳ್ಳದ ಕಾರಣ ಸಮಸ್ಯೆ ಉದ್ಭವವಾಗಿದೆ. ಸಚಿವರ ಮೂಲಕ ತಹಶೀಲ್ದಾರ್  ಗಮನಕ್ಕೆ ವಿಷಯ ತಂದು ಫೆಬ್ರವರಿ ಅಂತ್ಯದೊಳಗೆ ಸಮಸ್ಯೆ ಪರಿಹರಿಸಲಾಗುವುದು ಎಂದರು.

ಸ್ಥಳದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಗೀತಾ, ಸದಸ್ಯರಾದ ಸವಿತ, ಕೆಂಪವೆಂಕಟಯ್ಯ, ಮೂರ್ತಿ, ಗ್ರಾಮಸ್ಥರಾದ ಶಿವಕುಮಾರ್, ಕುಮಾರ್, ಮುನಿರಾಜು, ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

7 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

11 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

11 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

16 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago