Categories: ಬೆಳಗಾವಿ

ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶಗಳ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಿಸಲಾಗುವುದು :-ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಇಂದು ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷದ ಸದಸ್ಯರು  ರಾಜ್ಯದಲ್ಲಿನ ಬಿಪಿಎಲ್ ಪಡಿತರ ಕಾರ್ಡ್ ರದ್ದು ಕುರಿತು  ಕೇಳಿದ ಪ್ರಶ್ನೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್ ಮುನಿಯಪ್ಪ ಉತ್ತರಿಸಿದರು.

ಪಡಿತರ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಲು ನಾವು ಮುಂದಾದಾಗ ಕೇಂದ್ರ ಸರ್ಕಾರದ ಮಾನದಂಡಗಳ ಅಡಿಯಲ್ಲಿಯೇ ನಾವು ಪರಿಷ್ಕರಣೆ ಮಾಡಲು ಹೋಗಿದ್ದು ಕೆಲವು ಗೊಂದಲಗಳಿಂದ ನಾವು ಅದನ್ನು ತಡೆಹಿಡಿದಿದ್ದೀವಿ.

ಅರ್ಹರ ಬಿಪಿಎಲ್ ಪಡಿತರ ಕಾರ್ಡ್ ದಾರರ ಯಾವುದೇ ಕಾರ್ಡ್ ಗಳು ರದ್ದಾಗದಂತೆ ಅಧಿಕಾರಿಗಳಿಗೆ ಸೂಚಿಸಿ ರದ್ದಾದ ಬಿಪಿಎಲ್ ಕಾರ್ಡ್ ಗಳನ್ನು ಪುನರ್ ಸ್ಥಾಪಿಸಲಾಯಿತು.

ಆದರೂ, ಪ್ರಸ್ತುತ ಬಿಪಿಎಲ್ ಪಡಿತರ ಕಾರ್ಡ್ ಗಳಲ್ಲಿ ಅನರ್ಹ ಫಲಾನುಭವಿಗಳ ಪತ್ತೆಹಚ್ಚಲು ಗ್ರಾಮ ಪಂಚಾಯತಿ ಮಟ್ಟದಲ್ಲಿ ನಮ್ಮ ಅಧಿಕಾರಿಗಳು ಪರಿಪಕ್ವವಾದ ಅಂಕಿ ಅಂಶಗಳನ್ನು ಗುರುತಿಸಿ ನಂತರ ಅರ್ಹರಿಗೆ  ಬಿಪಿಎಲ್ ಪಡಿತರ ಕಾರ್ಡ್ ವಿತರಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಪ್ರಸ್ತುತ ಈಗಿರುವ ಬಿಪಿಎಲ್ ಕಾರ್ಡ್ ಗಳಲ್ಲಿ ಶೇಕಡಾ 20 ರಷ್ಟು ಕಾರ್ಡ್ ಗಳು ಎಪಿಎಲ್ ನವರು ಸೇರಿದ್ದಾರೆ ಎಂದು ಅಂದಾಜಿಸಲಾಗಿದ್ದು ಇದನ್ನು ಅತಿ ಶೀಘ್ರದಲ್ಲಿ ಪರಿಷ್ಕರಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ ಎಂದರು.

ರಾಜ್ಯದಲ್ಲಿ ಸುಮಾರು ಶೇಕಡ 65%. ರಿಂದ 75% ರಷ್ಟು ಜನಸಂಖ್ಯೆಗೆ  ಬಡತನ ರೇಖೆಗಿಂತ ಕೆಳಗಿರುವಂತೆ ಕಾರ್ಡ್ ಗಳನ್ನು ನೀಡಲಾಗಿದ್ದು ಅದನ್ನು ಪರಿಷ್ಕರಿಸಿಲಾಗುತ್ತಿದ್ದು  ಈ ಪ್ರಕ್ರಿಯೆ ಪೂರ್ಣ ಗೊಂಡ ನಂತರ ನಿಜವಾದ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ ತೊಂದರೆಯಾಗದಂತೆ ಜಾಗ್ರತೆ ವಹಿಸಿ  ನೀಡಲಾಗುವುದು ಎಂದು ಸದನದಲ್ಲಿ ಉತ್ತರಿಸಿದರು..

ಅಕ್ರಮ ಪಡಿತರ ವಿರುದ್ದ ವಿಶೇಷ ಕಾರ್ಯಾಚರಣೆ- ಕೆ.ಎಚ್.ಮುನಿಯಪ್ಪ
ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತç ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು.
ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ಇದೇ ಸಂದರ್ಭದಲ್ಲಿ ಸದನಕ್ಕೆ ಅವರು ತಿಳಿಸಿದರು.

ವಿಧಾನ ಪರಿಷತನಲ್ಲಿ ಡಿಸೆಂಬರ್ 9ರಂದು ಸದಸ್ಯರಾದ ಟಿ.ಎನ್.ಜವರಾಯಿಗೌಡ, ಐವನ್ ಡಿ ಸೋಜಾ, ಸಿ.ಟಿ.ರವಿ, ಶರವಣ.ಟಿ.ಎ, ನಿರಾಣಿ ರುದ್ರಪ್ರ ಹನುಮಂತಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ರಾಜ್ಯಾದ್ಯಂತ ಜನವರಿ-2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಂದ ರೂ. 13,51,30,858 ಗಳ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ.

ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ಕ್ರಮ ವಹಿಸಿದೆ. ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಣೆ ಕಂಡು ಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ, ಅಕ್ರಮ ಪಡಿತರ ದಾಸ್ತಾನು ಮುಟ್ಟುಗೋಲು ಹಾಕಿಕೊಂಡು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನು ವಿಲೇ ಮಾಡಿ, ವಿಲೇ ಪಡಿಸಿದ ಪಡಿತರ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡಲಾಗುತ್ತಿದೆ ಎಂದರು.
ರಾಜ್ಯಾದ್ಯಂತ 2024-25ನೇ ಸಾಲಿನಲ್ಲಿ 213 ಎಫ್.ಐ.ಆರ್ ದಾಖಲಿಸಿ ಒಟ್ಟು ರೂ. 2,68,07,872 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, 238 ಆರೋಪಿಗಳನ್ನು ಬಂಧಿಸಲಾಗಿರುತ್ತದೆ. ಈ ಕುರಿತು ಪರಿಶೀಲಿಸಲು ಮೇಲ್ವಿಚಾರಣೆ ಮಾಡಲು ಇಲಾಖಾ ವತಿಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗವಾರು ನೇಮಕ ಮಾಡಲಾಗಿದೆ ಎಂದರು.

ಈ ಹಿಂದೆ ಕೆಲವು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದ ಫಲಾನುಭವಿಗಳು ಹಾಲಿ ಬಡತನ ರೇಖೆಗಿಂತ ಮೇಲೆ ಬಂದಿದ್ದು, ಸದರಿ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.

ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಜಿಎಸ್ ಟಿ ಅಥವಾ ಸಿಎಸ್ ಟಿ ಪಾವತಿದಾರರ ವಿವರಗಳನ್ನು ಕುಟುಂಬ ತಂತ್ರಾಂಶದಿಂದ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಸ್ತುತ ಆಹಾರ ಇಲಾಖೆಯಲ್ಲಿ ಬಳಸುವ ಸರ್ವರ್ ಹಳೆಯದಾಗಿದೆ. ಈ ಕಾರಣದಿಂದಾಗಿ ಎನ್ ಐಸಿಯಿಂದ ಕೆಎಸ್ ಡಿಸಿ ಗೆ ಆಹಾರ ತಂತ್ರಾಂಶದ ಮೈಗ್ರೇಶನ್ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಕಾರ್ಯಪೂರ್ಣವಾದ ನಂತರ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ಪಡಿತರ ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಬಾಕಿ ಅರ್ಜಿಗಳ ಕಾಲಮಿತಿ ವಿಲೇಯ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

18 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

19 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

1 day ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

2 days ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

2 days ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

2 days ago