ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ

ಜಿಬಿಎ ಅಡಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣ ಎಂದು 5 ನಗರ ಪಾಲಿಕೆಗಳನ್ನು ರಚಿಸಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಇನ್ನು ಇತಿಹಾಸದ ಪುಟ ಸೇರಿದ್ದು, ಬೆಂಗಳೂರಿನ ಆಡಳಿತ ಸುಧಾರಣೆಗಾಗಿ ರಾಜ್ಯ ಸರ್ಕಾರ ಬಿಬಿಎಂಪಿಯನ್ನು ಗ್ರೇಟರ್​ ಬೆಂಗಳೂರು ಪ್ರಾಧಿಕಾರದಡಿ ಐದು ಮಹಾನಗರ ಪಾಲಿಕೆಗಳನ್ನಾಗಿ ರಚನೆ ಮಾಡಿ ಮಂಗಳವಾರ ಅಧಸೂಚನೆ ಹೊರಡಿಸಿದೆ.

ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅಂಗೀಕರಿಸಲಾದ 2024ರ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಡಿಯಲ್ಲಿ ಬಿಬಿಎಂಪಿಯನ್ನು ಐದು ಮಹಾನಗರ ಪಾಲಿಕೆಗಳಾಗಿ ರಚನೆ ಮಾಡಿ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.

ಈ ಕ್ರಮವು ಬೆಂಗಳೂರು ಪಶ್ಚಿಮ ನಗರ ಮಹಾನಗರ ಪಾಲಿಕೆ, ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ, ಬೆಂಗಳೂರು ಉತ್ತರ ಮಹಾನಗರ ಪಾಲಿಕೆ, ಬೆಂಗಳೂರು ಪೂರ್ವ ಮಹಾನಗರ ಬಾಲಿಕೆ ಮತ್ತು ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆಗಳ ರಚನೆಗೆ ದಾರಿ ಮಾಡಿಕೊಡುತ್ತದೆ. ಅಧಿಸೂಚನೆಯಲ್ಲಿ ಐದು ನಿಗಮಗಳ ಗಡಿಗಳನ್ನು ಸಹ ನಿಗದಿಪಡಿಸಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ದ ಅಡಿಯಲ್ಲಿ ಹೊಸದಾಗಿ ರಚನೆಯಾದ ಮಹಾನಗರ ಪಾಲಿಗಳಿಗೆ ವ್ಯಾಪಕ ಆಡಳಿತಾತ್ಮಕ ಅನುಭವ ಹೊಂದಿರುವ ಹಿರಿಯ ಅಧಿಕಾರಿಗಳನ್ನು ಆಯುಕ್ತರನ್ನಾಗಿ ನೇಮಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ತಿಳಿಸಿದ್ದರು.

“ನಾವು ಈ ಐದು ಮಹಾನಗರ ಪಾಲಿಕೆಗೆಳಿಗೆ ಅಧಿಕಾರಿಗಳ ನೇಮಕಾತಿಯ ಬಗ್ಗೆ ಚರ್ಚಿಸಿದ್ದೇವೆ ಮತ್ತು ಈಗಾಗಲೇ ಸ್ಥಳೀಯವಾಗಿ ಸೇವೆ ಸಲ್ಲಿಸುತ್ತಿರುವವರನ್ನು ನೇಮಿಸಲು ನಿರ್ಧರಿಸಲಾಗಿದೆ” ಎಂದು ಹೇಳಿದರು.

ಜಿಬಿಎಗೆ ಮುಖ್ಯಮಂತ್ರಿಗಳು ಪದನಿಮಿತ್ತ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಬೆಂಗಳೂರು ಅಭಿವೃದ್ಧಿ ಸಚಿವರು ಪದನಿಮಿತ್ತ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದರು.

ಜಿಬಿಎ ಐದು ಪಾಲಿಕೆಗಳ ಆಯುಕ್ತರನ್ನಾಗಿ ಹಿರಿಯ ಅಧಿಕಾರಿಗಳ ನೇಮಕ

ಆಡಳಿತಾತ್ಮಕ ಅನುಭವವಿರುವ, ಉಪ ಆಯುಕ್ತರುಗಳಾಗಿ ಕೆಲಸ ನಿರ್ವಹಿಸಿರುವ ಹಿರಿಯ ಅಧಿಕಾರಿಗಳನ್ನು ಇಂದಿನಿಂದ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಆಯುಕ್ತರನ್ನಾಗಿ ನೇಮಕ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಯಾವ, ಯಾವ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈಗ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡಲಾಗುವುದು ಎಂದು‌ ತಿಳಿಸಿದ್ದಾರೆ..

Ramesh Babu

Journalist

Recent Posts

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

44 minutes ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

7 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

8 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

9 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

10 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

21 hours ago