Categories: ಕೊಡಗು

ಗ್ರೇಟರ್ ರಾಜಾಸೀಟ್ ಯೋಜನೆಯಲ್ಲಿ ಬಹುಕೋಟಿ ಹಗರಣ ಆರೋಪ: ತನಿಖೆ ಆರಂಭಿಸಿದ ಲೋಕಾಯುಕ್ತ

ಮಡಿಕೇರಿ ನಗರದ ರಾಜಾ ಸೀಟ್ ಪಕ್ಕದಲ್ಲಿ ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಸಲ್ಲಿಸಿದ ದೂರನ್ನು ಮಾನ್ಯಗೊಳಿಸಿದ ಕರ್ನಾಟಕ ಲೋಕಾಯುಕ್ತ ತನಿಖೆ ಕೈಗೆತ್ತಿಕೊಂಡಿದೆ.

ಸುಮಾರು 4.55 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ  ಗ್ರೇಟರ್ ರಾಜಾಸೀಟ್ ನ್ನು ಅಂದಿನ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರು  18-3-2023 ರಂದು ಲೋಕಾರ್ಪಣೆ ಮಾಡಿದ್ದರು.ಕಾಮಗಾರಿ ನಿರ್ವಹಣೆ ಮಾಡಿದ ಮಡಿಕೇರಿ ಪಿ.ಡಬ್ಲ್ಯೂ.ಡಿ ಇಲಾಖೆ ಕಾಮಗಾರಿ ಅಪೂರ್ಣವಾಗಿರುವ ಸಂಧರ್ಭದಲ್ಲಿ ತೋಟಗಾರಿಕೆ ಇಲಾಖೆಗೆ ಹಸ್ತಾಂತರ ಮಾಡದೇ ಲೋಕಾರ್ಪಣೆ ಮಾಡಿದ್ದು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಈ ಹಿನ್ನಲೆಯಲ್ಲಿ ತೆನ್ನಿರ ಮೈನಾ ರವರು ದಿನಾಂಕ 20-3-2023 ರಂದು ಈ ಕಾಮಗಾರಿಯಲ್ಲಿ ಬಹುಕೋಟಿ ಅಕ್ರಮ ಹಾಗೂ ಕಳಪೆ ಕಾಮಗಾರಿ ನಡೆದಿದೆ ಎಂದು ಸವಿಸ್ತಾರವಾಗಿ ದಾಖಲೆಗಳೊಂದಿಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಜೊತೆಗೆ ಸದರಿ ಕಾಮಗಾರಿಗೆ ಸಂಭಂದಿಸಿದಂತೆ ಮೂಲ ಎಂ.ಬಿ. ಪುಸ್ತಕವನ್ನು ನಾಶಪಡಿಸಿ ನಕಲಿ ಎಂ.ಬಿ.ಪುಸ್ತಕ ರಚಿಸಿ ಒಂದು ಕೋಟಿ 58 ಲಕ್ಷದ 43 ಸಾವಿರದ 136 ರೂಗಳನ್ನು ಕಾನೂನು ಬಾಹಿರವಾಗಿ ಪಾವತಿ ಮಾಡಿರುವುದನ್ನು ಉಲ್ಲೇಖಿಸಿ ಮೂಲ ಎಂ.ಬಿ.ಪುಸ್ತಕ ಸಂಖ್ಯೆ 12086 ರ ಧೃಡೀಕೃತ ದಾಖಲೆಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿದ್ದರು.

ಈ ವಿವರಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಲಯ ಲೋಕಾಯುಕ್ತ ತಾಂತ್ರಿಕ ವಿಭಾಗದ ಅಧಿಕಾರಿ ತೇಜಶ್ರೀ ಬಿ.ಮುದ್ದೋಡಿ ಯವರನ್ನು ತನಿಖಾಧಿಕಾರಿಯಾಗಿ ನೇಮಿಸಿದ್ದು ದಿನಾಂಕ  14-10-2024 ರಂದು ಮತ್ತು 15-10-2024 ರಂದು ದೂರುದಾರರು ಹಾಗೂ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ತನಿಖೆ ನಡೆಸಲಿದ್ದಾರೆ.

ಈ ಕಾಮಗಾರಿಯಲ್ಲಿ ನಿರ್ವಹಣೆ ಹೊತ್ತಿದ್ದ ಕಿರಿಯ ಇಂಜಿನಿಯರ್ ಕೆ.ಎಲ್.ದೇವರಾಜ್ ರನ್ನು ಅಮಾನತು ಮಾಡಲಾಗಿತ್ತು.

ಸದರಿ ಪ್ರಕರಣದಲ್ಲಿ‌ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಅಕ್ರಮವೆಸಗಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದ್ದು ಶಿಕ್ಷೆಗೆ ಒಳಗಾಗಲಿದ್ದಾರೆ ಎಂದು ದೂರುದಾರ ತೆನ್ನಿರ ಮೈನಾ ತಿಳಿಸಿದ್ದಾರೆ.

ಈ ಹಿಂದೆ ಹಗರಣದ ಬಗ್ಗೆ ಕೆಲವರು ಫೋಟೋಗಳನ್ನು ತೆಗೆದು ಇವರುಗಳನ್ನು ಪ್ರಶ್ನಿಸಲು ಹೋದವರಿಗೆ ಅವರ ತೋಟ ಮತ್ತು ಮನೆಯ ಅಂಗಳವನ್ನು ಹೂ ಗಿಡ ಮತ್ತಿತರ ಗಿಡಗಳಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು  ಸಿಂಗರಿಸಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದರು ಎಂದು ಹೇಳಲಾಗಿದೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

3 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

5 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

8 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

9 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

16 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

16 hours ago