ಕಾರಿನೊಳಗೆ ನಾಲ್ವರು ಮಕ್ಕಳು ಆಟವಾಡುತ್ತಾ ಕುಳಿತಿದ್ದ ವೇಳೆ ಕಾರು ಲಾಕ್ ಆಗಿದೆ. ಕಾರಿನಲ್ಲಿದ್ದ ಮಕ್ಕಳು ಕಾರಿನೊಳಗೆ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ದ್ವಾರಪುಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಮೃತರನ್ನು ಉದಯ್(8), ಚಾರುಮತಿ (8), ಚರಿಷ್ಮಾ (6) ಮತ್ತು ಮನಸ್ವಿ (6) ಎನ್ನಲಾಗಿದ್ದು, ಚಾರುಮತಿ ಮತ್ತು ಚರಿಷ್ಮಾ ಸಹೋದರಿಯರಾಗಿದ್ದಾರೆ, ಉಳಿದ ಇಬ್ಬರು ಅವರ ಸ್ನೇಹಿತರಾಗಿದ್ದಾರೆ.
ಬೇಸಿಗೆ ರಜೆಯ ಖುಷಿಯಲ್ಲಿದ್ದ ದ್ವಾರಪುಡಿ ಗ್ರಾಮದ ನಾಲ್ಕು ಮಕ್ಕಳು ಭಾನುವಾರ ಬೆಳಿಗ್ಗೆ ಆಟವಾಡಲು ಕಾರು ಒಳಗೆ ಹೋಗಿದ್ದಾರೆ. ಸಲ್ಪ ಸಮಯದಲ್ಲಿಯೇ ಸೆಂಟ್ರಲ್ ಲಾಕ್ ಆಗಿದ್ದು, ಈ ವಿಚಾರ ಮಕ್ಕಳಿಗೆ ಗೊತ್ತೇ ಇಲ್ಲ ಇದಾದ ಕೆಲ ಹೊತ್ತಿನ ಬಳಿಕ ಮಕ್ಕಳು ಉಸಿರಾಟದ ಸಮಸ್ಯೆಗೆ ಒಳಗಾಗಿ ಅಸ್ವಸ್ಥಗೊಂಡಿದ್ದಾರೆ. ಸ್ವಲ್ಪ ಹೊತ್ತಿನಲ್ಲೇ ಜೀವ ಸಹ ಹೋಗಿದೆ.
ಇನ್ನು, ಪೋಷಕರು ಮೂರು ಗಂಟೆಗಳ ಕಾಲ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಅಂತಿಮವಾಗಿ ಕಾರಿನ ಬಳಿ ಹೋದಾಗ ಮಕ್ಕಳು ಪ್ರಜ್ಞೆತಪ್ಪಿ ಬಿದ್ದಿದ್ದನ್ನು ಗಮನನಿಸಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯ ಪೊಲೀಸರು ಕಾರಿನ ಮಾಲೀಕರಿಗಾಗಿ ಹುಡುಕಾಟ ನಡೆಸಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…