ಘಾಟಿಯಲ್ಲಿಂದು ಸಾಮೂಹಿಕ ವಿವಾಹ: ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ 66 ಜೋಡಿ

ತಾಲ್ಲೂಕಿನ ಘಾಟಿ ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ ಇಂದು(ಮೇ 7) ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಸಲ್ಲುವ ಶುಭಕಟಕ ಲಗ್ನದಲ್ಲಿ ನಡೆಯಲಿದೆ.

ಈಗಾಗಲೇ ನೋಂದಾಯಿಸಿಕೊಂಡಿರುವ 66 ಜೋಡಿಗಳು ವಿವಾಹವಾಗಲಿದ್ದಾರೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಧೀರಾಜ್ ಮುನಿರಾಜು, ಶರತ್ ಬಚ್ಚೇಗೌಡ, 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ಸಂಸದ ಡಾ.ಕೆ.ಸುಧಾಕರ್ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *