ತೂಬಗೆರೆ ಹೋಬಳಿಯ ಘಾಟಿ ಗ್ರಾಮದ ಕೆಲ ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ ಎಂಬುದು ಸುಳ್ಳು. ಈ ವಿಚಾರ ವದಂತಿ ಅಷ್ಟೇ. ಎಸ್.ಎಸ್ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಸದೃಢವಾಗಿದೆ. ಜೆಡಿಎಸ್ ಗೆ ಸೇರಿದ್ದಾರೆ ಎನ್ನಲಾದ ಯುವಕರ ಬಗ್ಗೆ ನಾವು ಎಲ್ಲಾ ಮೂಲಗಳಿಂದ ಮಾಹಿತಿ ಕಲೆ ಹಾಕಿದ್ದೇವೆ. ಇವರು ಯಾರೂ ಕಾಂಗ್ರೆಸ್ ಕಾರ್ಯಕರ್ತರಲ್ಲ. ಕಾಂಗ್ರೆಸ್ ಪಕ್ಷಕ್ಕೂ ಈ ಯುವಕರಿಗೂ ಯಾವುದೇ ಸಂಬಂಧವಿಲ್ಲ ಎಂದು ತೂಬಗೆರೆ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ ಸ್ಪಷ್ಟನೆ ನೀಡಿದ್ದಾರೆ.
ಯಾರೋ ಜೆಡಿಎಸ್ ಗೆ ಸೇರಿರಬಹುದು ಅಷ್ಟೇ. ನಮ್ಮ ಪಕ್ಷದವರಂತೂ ಜೆಡಿಎಸ್ ಗೆ ಸೇರ್ಪಡೆಗೊಂಡಿಲ್ಲ. ನಮ್ಮ ಕಾರ್ಯಕರ್ತರು ಬೇರೆ ಪಕ್ಷಕ್ಕೆ ಸೇರುವ ಅವಶ್ಯಕತೆ ಇಲ್ಲ. ಜೆಡಿಎಸ್ ನವರು ಸುಖಾಸುಮ್ಮನೆ ಕಾಂಗ್ರೆಸ್ ಪಕ್ಷದವರು ಜೆಡಿಎಸ್ ಗೆ ಸೇರಿದ್ದಾರೆ ಎಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆ ಜೆಡಿಎಸ್ ಗಿಮಿಕ್ ಮಾಡಲು ಹೊರಟಿದೆ ಎಂದು ತಿಳಿಸಿದ್ದಾರೆ.