ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಮಹಿಳೆಯರಿಗೆ ಬಳೆ, ಅರಶಿನ ಹಾಗೂ ಕುಂಕುಮ ನೀಡಿ ಸತ್ಕರಿಸಲಾಯಿತು.
ಪ್ರತಿ ವರ್ಷದಂತೆ ಈ ವರ್ಷವೂ ಹಬ್ಬದ ಅಂಗವಾಗಿ ದೇವಾಲಯಕ್ಕೆ ಆಗಮಿಸಿದ್ದ ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಿಸಿ ಶುಭ ಹಾರೈಸಲಾಯಿತು. ಮಹಿಳೆಯರು ಭಕ್ತಿಭಾವದಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಘಾಟಿ ಕ್ಷೇತ್ರದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು. ಮಹಿಳೆಯರಿಗೆ ಸಾಂಪ್ರದಾಯಿಕವಾಗಿ ಬಳೆ, ಅರಶಿನ–ಕುಂಕುಮ ನೀಡಿ ಸತ್ಕರಿಸುವ ಮೂಲಕ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ದೊಡ್ಡಬಳ್ಳಾಪುರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.…
ಕ್ರಿಕೆಟ್ ನಲ್ಲಿ ಫಿಕ್ಸಿಂಗ್, ಕುದುರೆ ರೇಸ್ ನಲ್ಲಿ ಫಿಕ್ಸಿಂಗ್, ರಾಜಕೀಯದಲ್ಲಿ ಫಿಕ್ಸಿಂಗ್, ಸಿನಿಮಾ ಪ್ರಶಸ್ತಿಗಳಲ್ಲಿ ಫಿಕ್ಸಿಂಗ್, ಅಕಾಡೆಮಿಗಳ ಅಧಿಕಾರ ಮತ್ತು…
ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಾಂಪುರ ಮಜರ ವಡೇರಹಳ್ಳಿ ಗ್ರಾಮದಲ್ಲಿರುವ ಸುಮಾರು 2 ಎಕರೆ 10 ಗುಂಟೆ…
ದೊಡ್ಡಬಳ್ಳಾಪುರ: ಹೊನ್ನದೇವಿಪುರ ಗೇಟ್ ಬಳಿಯ ಹಂದಿ ಫಾರಂನ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ…
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ಉಳಿದ ಸಮಯದಲ್ಲಿ…
ದೊಡ್ಡಬಳ್ಳಾಪುರ: ದೇವನಹಳ್ಳಿ ತಾಲ್ಲೂಕಿನ ಮೂರು ಗ್ರಾಮಗಳ ವ್ಯಾಪ್ತಿಯಲ್ಲಿ 68 ಎಕರೆ 35 ಗುಂಟೆಗೂ ಅಧಿಕ ಜಮೀನಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು…