ಘಾಟಿ ದನಗಳ ಜಾತ್ರೆಗೆ ಬಂದ ರೈತರಿಗೆ ಊಟ ವ್ಯವಸ್ಥೆ ಕಲ್ಪಿಸಿದ ಬೆಂ.ಗ್ರಾ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರತಾಪ್

 

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಶ್ರೀ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯು ದಕ್ಷಿಣ ಭಾರತದಲ್ಲೇ ಹೆಚ್ಚು ಪ್ರಸಿದ್ಧಿ ಪಡೆದಿದೆ. ಈ ದನಗಳ ಜಾತ್ರೆ ಡಿ.20ರಿಂದ ಪ್ರಾರಂಭವಾಗಿದೆ. ತುಂಬು ಜಾತ್ರೆಗೆ ದೂರದ ಊರುಗಳಿಂದ ಹೊರಿಗಳೊಂದಿಗೆ ಸಾಲು ಸಾಲಾಗಿ ರೈತರು ಬರುತ್ತಿದ್ದಾರೆ. ದೂರದ ಊರುಗಳಿಂದ ಬಂದಿರುವ ರೈತರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ವಕೀಲ ಪ್ರತಾಪ್ ಹೇಳಿದರು.

ಘಾಟಿ ದನಗಳ ಜಾತ್ರೆಯಲ್ಲಿ ರೈತರಿಗೆ ಊಟ ವಿನಿಯೋಗದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಾನದಲ್ಲೇ ಶ್ರೇಷ್ಠದಾನ ಅನ್ನದಾನ. ದೂರದ ಊರುಗಳಿಂದ ರೈತರು ಜಾತ್ರೆಗೆ ಬಂದಿರುತ್ತಾರೆ. ಅವರ ಹಸಿವನ್ನ ನೀಗಿಸುವುದು ನಮ್ಮ ಕರ್ತವ್ಯ. ಆದ್ದರಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಅನ್ನದಾನವನ್ನು ಮೂರು ದಿನಗಳ ಕಾಲ ವಿತರಣೆ ಮಾಡಲಾಗುತ್ತದೆ. ರೈತರು ಇದನ್ನ ಸದುಪಯೋಗ ಪಡೆದುಕೊಳ್ಳಬೇಕು. ಇದರ ಜೊತೆಗೆ ಸುಮಾರು ನೂರು ಕೆ.ಜಿಯಷ್ಟು ಹಣ್ಣು ಹಂಪಲುಗಳನ್ನು ರೈತರಿಗೆ ವಿತರಣೆ ಮಾಡಿದ್ದೇವೆ ಎಂದರು.

ಈ ವೇಳೆ ಘಾಟಿ ಗ್ರಾಮ ಪಂಚಾಯಿತಿ ಸದಸ್ಯ ವಾಸು, ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ್ಯ ಆನಂದ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!