ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಶ್ರೀ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯು ದಕ್ಷಿಣ ಭಾರತದಲ್ಲೇ ಹೆಚ್ಚು ಪ್ರಸಿದ್ಧಿ ಪಡೆದಿದೆ. ಈ ದನಗಳ ಜಾತ್ರೆ ಡಿ.10ರಿಂದ ಪ್ರಾರಂಭವಾಗಿದೆ. ತುಂಬು ಜಾತ್ರೆಗೆ ದೂರದ ಊರುಗಳಿಂದ ಹೊರಿಗಳೊಂದಿಗೆ ಸಾಲು ಸಾಲಾಗಿ ರೈತರು ಬರುತ್ತಿದ್ದಾರೆ. ದೂರದ ಊರುಗಳಿಂದ ಬಂದಿರುವ ರೈತರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ವಕೀಲ ಪ್ರತಾಪ್ ಹೇಳಿದರು.
ಘಾಟಿ ದನಗಳ ಜಾತ್ರೆಯಲ್ಲಿ ರೈತರಿಗೆ ಊಟ ವಿನಿಯೋಗದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಾನದಲ್ಲೇ ಶ್ರೇಷ್ಠದಾನ ಅನ್ನದಾನ. ದೂರದ ಊರುಗಳಿಂದ ರೈತರು ಜಾತ್ರೆಗೆ ಬಂದಿರುತ್ತಾರೆ. ಅವರ ಹಸಿವನ್ನ ನೀಗಿಸುವುದು ನಮ್ಮ ಕರ್ತವ್ಯ. ಆದ್ದರಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಅನ್ನದಾನವನ್ನು ಮೂರು ದಿನಗಳ ಕಾಲ ವಿತರಣೆ ಮಾಡಲಾಗುತ್ತದೆ. ರೈತರು ಇದನ್ನ ಸದುಪಯೋಗ ಪಡೆದುಕೊಳ್ಳಬೇಕು. ಇದರ ಜೊತೆಗೆ ಹಣ್ಣು ಹಂಪಲುಗಳನ್ನು ರೈತರಿಗೆ ವಿತರಣೆ ಮಾಡಿದ್ದೇವೆ ಎಂದರು.
ಈ ವೇಳೆ ಘಾಟಿ ಗ್ರಾಮ ಪಂಚಾಯಿತಿ ಸದಸ್ಯ ವಾಸು, ಕಿಟ್ಟಿ, ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ್ಯ ಆನಂದ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…