ಘಾಟಿ ಸಮೀಪ ಮದುವೆ ಬಸ್ ಮೇಲೆ ಕಲ್ಲು ತೂರಿ ದರೋಡೆಗೆ ಯತ್ನ ಆರೋಪ: ಕಳ್ಳರ ಕಲ್ಲು ಎಸತಕ್ಕೆ 10 ವರ್ಷದ ಪುಟ್ಟ ಬಾಲಕಿ ತಲೆಗೆ ಗಂಭೀರ ಗಾಯ: ಬಾಲಕಿಯ ಪರಿಸ್ಥಿತಿ ನೋಡಿದ್ರೆ ಹೃದಯ ಝಲ್ ಅನಿಸುತ್ತೆ!

ಖದೀಮರ ಗ್ಯಾಂಗ್ ರಾತ್ರಿ ವೇಳೆ ಮದುವೆ ಬಸ್ ಮೇಲೆ ಕಲ್ಲು ತೂರಿರುವ ಘಟನೆ ಫೆ.21 ರ ಶನಿವಾರ ರಾತ್ರಿ 11 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮೀಪದ ಪಾಲ್ ಪಾಲ್ ದಿನ್ನೆ ಕೆರೆ ಬಳಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ…

ಕಳ್ಳರ ಕಲ್ಲು ಎಸತಕ್ಕೆ 10 ವರ್ಷದ ಪುಟ್ಟ ಬಾಲಕಿ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..

ಫೆ.21 ರ ಶನಿವಾರ ರಾತ್ರಿ ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಘಾಟಿಯ ಛತ್ರದಲ್ಲಿ ಮದುವೆ ನಡೆಯುತ್ತಿತ್ತು.. ಮದುವೆ ಆರತಕ್ಷತೆ ಮುಗಿಸಿ ವಾಪಾಸ್ ಬೆಂಗಳೂರಿನ ಜೆಸಿನಗರ ವ್ಯಾಪ್ತಿಯ ಮುನಿರೆಡ್ಡಿಪಾಳ್ಯಕ್ಕೆ ತೆರಳುತ್ತಿದ್ದ ವೇಳೆ ಬಸ್ ಮೇಲೆ ಖದೀಮರು ಕಲ್ಲು ತೂರಾಟ ಮಾಡಿದ್ದಾರೆ..

ಮನೆಗೆ ಹೊದಿಸುವ ಹಂಚನ್ನ ಶಾರ್ಪ್ ಮಾಡಿ ಮನಸೋ ಇಚ್ಛೆ ಬಸ್ ಮೇಲೆ ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಕಿಟಕಿ ಬಳಿ ಕುಳಿತಿದ್ದ ಪುಟ್ಟ ಬಾಲಕಿ ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದೆ. ತೀವ್ರವಾದ ಗಾಯವಾಗಿ ಆಸ್ಪತ್ರೆ ಪಾಲಾಗಿದ್ದಾರೆ..

ಬಸ್ ಮೇಲೆ ಕಲ್ಲು ಎಸೆದರೂ ಡ್ರೈವರ್ ನ ಜಾಗರೂಕತೆಯಿಂದ ದೊಡ್ಡ ಮಟ್ಟದ ಅಪಾಯ ತಪ್ಪಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

11 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

15 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

18 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

1 day ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

2 days ago