ಪತ್ನಿ ಆಥಿಯಾ ಶೆಟ್ಟಿ ಜೊತೆಗೆ ಖ್ಯಾತ ಕ್ರಿಕೆಟಿಗ, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್.ರಾಹುಲ್ ಅವರು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈಗಾಗಲೇ ಪಾಕಿಸ್ತಾನ ಹಾಗೂ ಶ್ರೀಲಂಕಾ ಆತಿಥ್ಯದಲ್ಲಿ ನಡೆಯುತ್ತಿರುವ ಏಕದಿನ ಮಾದರಿಯ ಏಷ್ಯಾ ಕಪ್ ಗೆ ಅಂತಿಮ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿದ್ದರು, ಆದರೆ ಸಣ್ಣ ಪ್ರಮಾಣದ ಗಾಯಗೊಂಡಿದರಿಂದ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ.
ಇಂದು ಮಧ್ಯಾಹ್ನ 12.30 ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ಮೂಲಕ ದೇವರ ಕೃಪೆಗೆ ಪಾತ್ರರಾದರು.