ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಮತ್ತು ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರವನ್ನ ರಚನೆ ಮಾಡಿದ್ದು, ಈ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ 5 ನಾಮನಿರ್ದೇಶಕರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಪ್ರಾಧಿಕಾರದ ಮೊದಲ ನಾಮನಿರ್ದೇಶಕರಾಗಿ ಜಿ.ಎನ್.ರಂಗಪ್ಪ, ರವಿ.ಕೆ.ಎಸ್, ಲಕ್ಷ್ಮನಾಯಕ, ಆರ್.ವಿ.ಮಹೇಶ್ ಕುಮಾರ್, ಹೇಮಲಾತ.ಎಂ ರವರನ್ನ ನೇಮಕ ಮಾಡಿ ಕರ್ನಾಟಕ ರಾಜ್ಯಪಾಲರ ಆದೇಶಾನುಸರ ಕಂದಾಯ ಇಲಾಖೆ( ಧಾರ್ಮಿಕ ದತ್ತಿ) ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಪಿ.ಹನುಂತರಾಜು ಆದೇಶಸಿದ್ದಾರೆ.
ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸದಸ್ಯರಾದ 5 ಮಂದಿ ಘಾಟಿ ಸನ್ನಿಧಾನದಲ್ಲಿ ಪದಗ್ರಹಣ ನಡೆಸಿದರು, ನೂತನ ಸದಸ್ಯರಿಗೆ ಮುಖಂಡರು ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಅಭಿನಂದನೆ ಸಲ್ಲಿಸಿದರು.
ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಚುಂಚೇಗೌಡ, ಸದಸ್ಯರಾದ ಅಪ್ಪಿ ವೆಂಕಟೇಶ್, ಕಾಂಗ್ರೆಸ್ ಮುಖಂಡರಾದ ರಾಜಘಟ್ಟ ನಾರಾಯಣಸ್ವಾಮಿ, ಗಂಗಸಂದ್ರ ಶೀಧರ್, ಕಾಂತರಾಜು, ಗೋಪಾಲ ನಾಯಕ್, ವಕೀಲರಾದ ಆರ್.ವಿ.ಮನುಕುಮಾರ್ ಸೇರಿದಂತೆ ಇತರರು ಇದ್ದರು.